ಸಂವಿಧಾನದಿಂದ ದೇಶದಲ್ಲಿ ಸಮಾನತೆ


Team Udayavani, Dec 7, 2018, 12:50 PM IST

gul-1.jpg

ಕಲಬುರಗಿ: ಬಹುಸಂಸ್ಕೃತಿಯ ಭಾರತ ದೇಶವು ಬ್ರಿಟಿಷರ ಆಳ್ವಿಕೆಯಿಂದ ಬಳಲಿದರೂ ಡಾ| ಬಿ.ಆರ್‌. ಅಂಬೇಡ್ಕರ್‌ ನೀಡಿರುವ ಸಂವಿಧಾನದಿಂದ ಎಲ್ಲರಿಗೂ ಸಮಾನತೆ ದೊರೆತಿದೆ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಹೇಳಿದರು.

ಡಾ| ಬಿ.ಆರ್‌.ಅಂಬೇಡ್ಕರ್‌ರ 62ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಗುರುವಾರ ನಗರದ ಜಗತ್‌ ವೃತ್ತದಲ್ಲಿರುವ ಡಾ| ಬಾಬಾಸಾಹೇಬ ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ವಿಶ್ವದಲ್ಲಿ ಅಭಿವೃದ್ಧಿ ಹೊಂದಿರುವ ದೇಶಗಳಲ್ಲಿ ಇಂದಿಗೂ ಸಮಾನತೆ ಇಲ್ಲ. ಡಾ| ಅಂಬೇಡ್ಕರ್‌ ರಚಿಸಿದ ಸಂವಿಧಾನದಿಂದಾಗಿ ನಮ್ಮ ದೇಶದ ಎಲ್ಲ ಪ್ರಜೆಗಳಿಗೆ ಸಮಾನ ಮತದಾನದ ಹಕ್ಕು, ವೇತನ ಹಕ್ಕು ದೊರೆಯುವುದರ ಮೂಲಕ ಎಲ್ಲರೂ ಸಮಾನರಾಗಿ ಬಾಳಲು ಸಾಧ್ಯವಾಗಿದೆ ಎಂದರು.

ಪ್ರತಿಯೊಬ್ಬರು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ಸಮಾನರಾಗಿ ಬಾಳಲು ಸಾಧ್ಯವೆಂಬುವುದು ಅಂಬೇಡ್ಕರ್‌ರ ಆಶಯವಾಗಿತ್ತು. ಇದರಂತೆ ಎಲ್ಲರೂ ಬಾಳಬೇಕು. ಅಂಬೇಡ್ಕರ್‌ ಅಂತಾರಾಷ್ಟ್ರೀಯ ನಾಯಕರಾಗಿದ್ದು, ಅವರನ್ನು ಒಂದೇ ಜಾತಿ ಅಥವಾ ಸಮಾಜಕ್ಕೆ ಸೀಮಿತಗೊಳಿಸಬಾರದು. ಈ ದೇಶದ ಮಹಾನ್‌ ವ್ಯಕ್ತಿಗಳು ನೀಡಿರುವ ಮಾರ್ಗದರ್ಶನ ಎಲ್ಲ ಜಾತಿ, ಜನಾಂಗಕ್ಕೆ ಅನ್ವಯವಾಗುತ್ತವೆ. ಶಾಲಾ ಮಟ್ಟದಲ್ಲಿ ಮಕ್ಕಳ ಸಂಸತ್‌ ರಚಿಸುವುದನ್ನು ರೂಢಿಗೊಳಿಸಬೇಕು. ಇದರಿಂದ ಮಕ್ಕಳಲ್ಲಿ ಸಂವಿಧಾನ, ರಾಜಕೀಯದ ಜಾಗೃತಿ ಮೂಡುತ್ತದೆ ಎಂದು ಅಭಿಪ್ರಾಯ ಪಟ್ಟರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ಶಶಿಕುಮಾರ ಮಾತನಾಡಿ, ಡಾ| ಅಂಬೇಡ್ಕರ್‌ ದೇಶದ ಭವಿಷ್ಯದ ಬಗ್ಗೆ ಮುಂದಾಲೋಚನೆ ಕೈಗೊಂಡು ಆರ್ಥಿಕ, ಶಿಕ್ಷಣ, ರಾಜಕೀಯ ಅಲ್ಲದೇ ಎಲ್ಲ ಕ್ಷೇತ್ರಗಳಲ್ಲಿ ಸಮಾನತೆ ದೊರೆಯುವಂತೆ ಸಂವಿಧಾನ ರಚಿಸಿದ್ದಾರೆ. ಯಾವುದೇ ಕ್ಷೇತ್ರವನ್ನು ತೆಗೆದುಕೊಂಡರೂ ಅದರಲ್ಲಿ ಅಂಬೇಡ್ಕರ್‌ ವಾದ ಇದ್ದೆ ಇರುತ್ತದೆ ಎಂದರು.

ಚಿತ್ತಾಪುರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಪ್ರಾಚಾರ್ಯ ಡಾ| ವಿಜಯಕುಮಾರ ಸಾಲಿಮನಿ ಉಪನ್ಯಾಸ ನೀಡಿ, ಭಾರತ ದೇಶವು ಸಾಂಸ್ಕೃತಿಕವಾಗಿ ಒಗ್ಗಟ್ಟಾಗಿ ಉಳಿದಿದ್ದರೆ ಅದಕ್ಕೆ ಅಂಬೇಡ್ಕರ್‌ ಸಂವಿಧಾನವೇ ಕಾರಣವಾಗಿದೆ. ಇದನ್ನು ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.

ಸಂಘಾನಂದ ಬಂತೆ ಸಾನಿಧ್ಯ ವಹಿಸಿದ್ದರು. ಮಹಾನಗರ ಪಾಲಿಕೆ ಮೇಯರ್‌ ಮಲ್ಲಮ್ಮ ಎಸ್‌. ವಳಕೇರಿ, ಮಹಾನಗರ ಪಾಲಿಕೆ ಆಯುಕ್ತ ಪೆದ್ದಪ್ಪಯ್ಯ ಆರ್‌.ಎಸ್‌., ಜಿಪಂ ಸಿಇಒ ಡಾ| ರಾಜಾ ಪಿ., ತಹಶೀಲ್ದಾರ್‌ ಅಶೋಕ ಹಿರೋಳೆ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್‌. ಸತೀಶ, ಜಿಲ್ಲಾ ಸರ್ಕಾರಿ ಹಾಗೂ ಅರೆ ಸರ್ಕಾರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನೌಕರರ ಸಂಘದ ಅಧ್ಯಕ್ಷ ಸೋಮಶೇಖರ ಎಸ್‌.ಮದನಕರ, ಪದಾಧಿಕಾರಿಗಳಾದ ಬಾಬು ಮೌರ್ಯ, ವಿಠ್ಠಲಗೋಳಾ, ಮುಖಂಡರಾದ ಚಂದ್ರಾಮ ಹುಬ್ಬಳ್ಳಿ, ಚಂದ್ರಕಾಂತ ಅಷ್ಠಗಿ ಹಾಗೂ ಸರ್ಕಾರಿ, ಅರೆ ಸರ್ಕಾರಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನೌಕರರ ಸಂಘ, ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ನೌಕರರು ಇದ್ದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.