ಆರೋಗ್ಯ ಸೇವೆ ಸ್ಮಾರ್ಟ್‌ ಕಾರ್ಡ್‌ಗೆ ವೇದನೆ


Team Udayavani, Dec 14, 2018, 11:05 AM IST

gul-1.jpg

ಕಲಬುರಗಿ: ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಒಂದೇ ಸೂರಿನಡಿ ಆರೋಗ್ಯ ಸೇವೆ ಒದಗಿಸಬೇಕು ಎಂಬ ನಿಟ್ಟಿನಲ್ಲಿ ಜಾರಿಗೊಳಿಸಲಾಗಿರುವ ನೂತನ ಆರೋಗ್ಯ ಯೋಜನೆ ಜನರಿಗೆ ತಕ್ಕ ಮಟ್ಟಿಗೆ ತಲುಪುತ್ತಿಲ್ಲ. ಕಾರ್ಡ್‌ಗಳ ವಿತರಣೆಯಲ್ಲಿಯೂ ಗೊಂದಲ ಮುಂದುವರಿದಿದೆ.

ಈ ಯೋಜನೆ ಬಗ್ಗೆ ಜನರಿಗೆ ಸ್ಪಷ್ಟ ಮಾಹಿತಿ ಇಲ್ಲ. ಇನ್ನೊಂದೆಡೆ ಕೇಂದ್ರ ಸರ್ಕಾರದ ಆಯುಷ್ಮಾನ್‌ ಭಾರತ ಯೋಜನೆಯಲ್ಲಿ ಆರೋಗ್ಯ ಕರ್ನಾಟಕ ಯೋಜನೆ ವಿಲೀನಗೊಳಿಸಿರುವುದರಿಂದ ಆರೋಗ್ಯ ಕರ್ನಾಟಕ ಸ್ಮಾರ್ಟ್‌ ಕಾರ್ಡ್‌ಗಳು ಆಟಕ್ಕುಂಟು ಲೆಕ್ಕಿಲ್ಲ ಎನ್ನುವಂತಾಗಿದೆ. ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ ವರ್ಷ ವಾಜಪೇಯಿ ಆರೋಗ್ಯ ಶ್ರೀ, ರಾಜೀವ ಆರೋಗ್ಯ ಭಾಗ್ಯ, ಯಶಸ್ವಿನಿ ಯೋಜನೆ, ಮುಖ್ಯಮಂತ್ರಿ ಸಾಂತ್ವನ ಹರೀಶ ಯೋಜನೆ ಸೇರಿದಂತೆ ಮುಂತಾದ ಯೋಜನೆಗಳನ್ನು ಒಟ್ಟುಗೂಡಿಸಿ ಆರೋಗ್ಯ ಕರ್ನಾಟಕ ಯೋಜನೆ ಜಾರಿಗೊಳಿಸಿತ್ತು. ಈ ಯೋಜನೆಯನ್ನು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಎಂದೇ ಕರೆಯಲಾಗುತ್ತಿತ್ತು. ಯೋಜನೆಯಡಿ ರೋಗಿಗೆ ಉಚಿತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ 11 ಪ್ರಮುಖ ಆಸ್ಪತ್ರೆಗಳಲ್ಲಿ ಆರೋಗ್ಯ ಕರ್ನಾಟಕ ಹೆಸರಲ್ಲಿ ಸ್ಮಾರ್ಟ್‌ ಕಾರ್ಡ್‌ ವಿತರಿಸಲಾಗಿದೆ.

ಆದರೆ, ಸಿದ್ದರಾಮಯ್ಯ ಸರ್ಕಾರದ ನಂತರ ಬಂದ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಆರೋಗ್ಯ ಕರ್ನಾಟಕ ಯೋಜನೆಯನ್ನು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್‌ ಭಾರತ ಯೋಜನೆಯಲ್ಲಿ ವಿಲೀನಗೊಳಿಸಿದ್ದು, ಇಡೀ ಯೋಜನೆಯನ್ನು “ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ’ ಯೋಜನೆ ಎಂದು ಹೆಸರಿಡಲಾಗಿದೆ.
 
89,293 ಕಾರ್ಡ್‌ಗಳ ವಿತರಣೆ: ಆರೋಗ್ಯ ಕರ್ನಾಟಕ ಯೋಜನೆಯಡಿ ನಗರದ ಜಿಮ್ಸ್‌ (ಗುಲಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ) ಆಸ್ಪತ್ರೆಯಲ್ಲಿ ಸ್ಮಾರ್ಟ್‌ ಕಾರ್ಡ್‌ಗಳನ್ನು ವಿತರಣೆ ಮಾಡಲಾಗಿದ್ದು, ಇದುವರೆಗೂ 89,293 (ಡಿ.9ರವರೆಗೆ) ಕಾರ್ಡ್‌ಗಳನ್ನು ವಿತರಿಸಲಾಗಿದೆ. ಈ ಹಿಂದೆ ಯಾವುದೇ ಸ್ಥಳದ ಫಲಾನುಭವಿಗಳು ಸ್ಮಾರ್ಟ್‌ ಕಾರ್ಡ್‌ ಪಡೆಯಲು ಇಲ್ಲಿನ ಜಿಮ್ಸ್‌ ಆಸ್ಪತ್ರೆಯಲ್ಲಿ ಆರಂಭದಲ್ಲಿ ನೀಡಿದ್ದರಿಂದ ಜನರು ನೂಕುನುಗ್ಗಲು ಮಾಡಿ ಕಾರ್ಡ್‌ ಪಡೆದಿದ್ದಾರೆ. 

ಹೈದ್ರಾಬಾದ್‌-ಕರ್ನಾಟಕದ ಬೀದರ, ರಾಯಚೂರು, ಯಾದಗಿರಿ ಜಿಲ್ಲೆಗಳ ಜನರು ಸಹ ಜಿಮ್ಸ್‌ನಲ್ಲಿ ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಂತು ಕಾರ್ಡ್‌ ಪಡೆದಿದ್ದಾರೆ. ಇದರ ಮಧ್ಯೆ ಕಾರ್ಡ್‌ ವಿತರಣೆಗೆ ಗಡುವು ವಿಧಿಸಲಾಗಿದೆ ಎಂದು ವದಂತಿ ಹಬ್ಬಿದ ಹಿನ್ನೆಲೆಯಲ್ಲಿ ಅನ್ಯ ಕಾರ್ಯಗಳಿಗೆ ಎಂದು ಆಸ್ಪತ್ರೆಗೆ ಬಂದಿದ್ದ ಧಾರವಾಡ, ಬೆಂಗಳೂರು, ವಿಜಯಪುರ ಸೇರಿದಂತೆ ಇತರ ಭಾಗದ ಜನರ ಕೂಡ ಸಾರ್ವತ್ರಿಕವಾಗಿ ಕಾರ್ಡ್‌ ಪಡೆದಿದ್ದಾರೆ.

ಒಳ ರೋಗಿಗಳಿಗೆ ಮಾತ್ರ ವಿತರಣೆ: “ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ’ ವಿಲೀನದ ಪ್ರಕ್ರಿಯೆ ನಂತರ ಸ್ಮಾರ್ಟ್‌ ಕಾರ್ಡ್‌ ಇಲ್ಲದೇ ಇದ್ದರೂ, ಪಡಿತರ ಚೀಟಿ ಮತ್ತು ಆಧಾರ್‌ ಮೇಲೆಯೇ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಉಚಿತವಾಗಿ ಚಿಕಿತ್ಸೆ ಪಡೆಯಲು ಸ್ಮಾರ್ಟ್‌ ಕಾರ್ಡ್‌ ಕಡ್ಡಾಯವಲ್ಲ ಎಂದು ಅಧಿಕಾರಿಗಳು ಈಗ ಹೇಳುತ್ತಿದ್ದಾರೆ.

ಅಲ್ಲದೇ, ಸದ್ಯ ಸಾರ್ವತ್ರಿಕವಾಗಿ ಕಾರ್ಡ್‌ ವಿತರಣೆ ನಿಲ್ಲಿಸಲಾಗಿದ್ದು, ಸರ್ಕಾರದ ನಿರ್ದೇಶನದಂತೆ ಒಳ ರೋಗಿಗಳಿಗೆ ಮಾತ್ರ ಕಾರ್ಡ್‌ ವಿತರಣೆ ಮಾಡಲಾಗುತ್ತಿದೆ. ಜತೆಗೆ ಸ್ಮಾರ್ಟ್‌ ಕಾರ್ಡಗಳ ಮಾಹಿತಿ ಶೇಖರಿಸಲು ಸರ್ಕಾರ ವೈಬ್‌ಸೈಟ್‌ ವೊಂದನ್ನು ಸ್ಥಾಪಿಸಲು ನಿರ್ಧರಿಸಿದೆ. ಹೀಗಾಗಿ ಸದ್ಯಕ್ಕೆ ಕಾರ್ಡ್‌ ಯಾವುದೇ “ಉಪಯೋಗ’ಕ್ಕೆ ಬರುವುದಿಲ್ಲ. ಒಳ ರೋಗಿಗಳಿಗೆ ಮಾತ್ರ ಸ್ಮಾರ್ಟ್‌ ಕಾರ್ಡ್‌ ವಿತರಿಸುತ್ತಿರುವುದಿಂದ ಆಸ್ಪತ್ರೆಯಲ್ಲಿ ಕಾರ್ಡ್‌ ಪಡೆಯುವವರ ಸಂಖ್ಯೆ ಕಡಿಮೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಪಷ್ಟ ಮಾಹಿತಿ ನೀಡಿದ್ದಾರೆ.

2,281 ಫಲಾನುಭವಿಗಳು: ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾದ್ಯಂತ ಡಿ.5ರವರೆಗೆ ಒಟ್ಟು 2,281 ಜನರ ಚಿಕಿತ್ಸೆ ಪಡೆದಿದ್ದಾರೆ. ಇದರಲ್ಲಿ 890 ಜನ ಮಹಿಳೆಯರು ಮತ್ತು 1,391 ಜನ ಪುರುಷ ಫಲಾನುಭವಿಗಳಿದ್ದಾರೆ.

27 ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವ: ಬಸವೇಶ್ವರ ಆಸ್ಪತ್ರೆ, ಖಾಜಾ ಬಂದೇ ನವಾಜ್‌ ಆಸ್ಪತ್ರೆ, ಮದರ್‌ ಥೆರೆಸಾ ಚಾರಿಟೇಬಲ್‌ ಆಸ್ಪತ್ರೆ, ಚಿರಾಯು ಆಸ್ಪತ್ರೆ, ಗುಲಬರ್ಗಾ ಹಾರ್ಟ್‌ ಫೌಂಡೇಶನ್‌, ದೇವತಾ ಆಸ್ಪತ್ರೆ, ವಿನಾಯಕ ಕಣ್ಣಿನ ಆಸ್ಪತ್ರೆ, ಸಿದ್ದರಾಮೇಶ್ವರ ಕಣ್ಣಿನ ಕ್ಲಿನಿಕ್‌, ಕಾರಬಾರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ 27 ಖಾಸಗಿ ಆಸ್ಪತ್ರೆಗಳು ಹೊಸ ಆರೋಗ್ಯ ಯೋಜನೆಯಡಿ ಒಪ್ಪಂದ ಮಾಡಿಕೊಂಡಿವೆ. ಈ ಆಸ್ಪತ್ರೆಗಳಲ್ಲೂ ಶಿಫಾರಸು ಮಾಡಲಾದ ರೋಗಿಗಳಿಗೆ ಚಿಕಿತ್ಸೆ ನೀಡಬಹುದಾಗಿದೆ.

ಆರೋಗ್ಯ ಕರ್ನಾಟಕ ಯೋಜನೆ ಆಯುಷ್ಮಾನ್‌ ಭಾರತದಲ್ಲಿ ವಿಲೀನಗೊಳಿಸಿದ್ದರೂ ಸ್ಮಾರ್ಟ್‌ ಕಾರ್ಡ್‌ ಪಡೆಯಲು ಸಮಸ್ಯೆಯಿಲ್ಲ. ತಾಲೂಕು ಕೇಂದ್ರಗಳಲ್ಲೂ ಕಾರ್ಡ್‌ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮುಂದೆ ಎಲ್ಲರಿಗೂ ಕಾರ್ಡ್‌ ನೀಡುವುದರ ಜತೆಗೆ ವೈದ್ಯಕೀಯ ಸೇವೆ ದೊರೆಯುವುದರಲ್ಲಿ ಅನುಮಾನವಿಲ್ಲ. 
 ಡಾ.ಮಾಧವರಾವ್‌ ಪಾಟೀಲ, ಡಿಎಚ್‌ಒ ಕಲಬುರಗಿ

„ರಂಗಪ್ಪ ಗಧಾರ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.