ಸೇವಾ ಭದ್ರತೆಗೆ ಅತಿಥಿ ಉಪನ್ಯಾಸಕರ ಒತ್ತಾಯ

Team Udayavani, Dec 15, 2018, 11:42 AM IST

gul-2.jpg

ಕಲಬುರಗಿ: ಸೇವಾ ಭದ್ರತೆ ಹಾಗೂ ಸೇವಾ ವಿಲೀನತೆ ಪ್ರಕ್ರಿಯೆಗೆ ಶಾಶ್ವತ ನಿಯಮಾವಳಿ ರಚಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿ ನೇತೃತ್ವದಲ್ಲಿ ಸಾಂಕೇತಿಕ ಧರಣಿ ನಡೆಸಲಾಯಿತು.

ಪ್ರತಿಭಟನಾನಿರತರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದೇ ಇದ್ದರೆ ಸಾವಿರಾರು ಅತಿಥಿ ಉಪನ್ಯಾಸಕರು ಬೆಳಗಾವಿ ಚಲೋ ಕೈಗೊಂಡು ಸುವರ್ಣಸೌಧದ ಎದುರು ಬೃಹತ್‌ ಪ್ರತಿಭಟನೆ ಹಾಗೂ ಸತ್ಯಾಗ್ರಹವನ್ನು ಕುಟುಂಬ ಸದಸ್ಯರೊಂದಿಗೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. 

ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು ವರ್ಷಗಳಿಂದ ಅತಿಥಿ ಉಪನ್ಯಾಸಕರು ಇಲಾಖೆ ನಿಯಮಾನುಸಾರ ಆಯ್ಕೆಗೊಂಡು ಕನಿಷ್ಠ ಗೌರವಧನ ಪಡೆದು ಸೇವೆ ಸಲ್ಲಿಸುತ್ತಿದ್ದಾರೆ. ಸೇವಾ ಭದ್ರತೆ ಹಾಗೂ ಸೇವಾ ವಿಲೀನತೆಗಾಗಿ ನಿರಂತರ ಹೋರಾಟ ಮಾಡಿದ್ದರಿಂದ ಡಿ. 4 ರಂದು ಉನ್ನತ ಶಿಕ್ಷಣ ಸಭೆಯಲ್ಲಿ ಸೇವಾ ಭದ್ರತೆಯೊಂದಿಗೆ 25 ಸಾವಿರ ರೂ.ಗಳ ವೇತನ ನೀಡಲು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡರ ನೇತೃತ್ವದಲ್ಲಿ ತಾತ್ವಿಕ ಒಪ್ಪಿಗೆ ನೀಡಿದ್ದು, ಆ ಭರವಸೆ ಜಾರಿಗೆ ತರಬೇಕೆಂದು ಒತ್ತಾಯಿಸಿದರು.

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಗಾಗಿ ಜೆಒಸಿ ಅಥವಾ ದೆಹಲಿ ಹಾಗೂ ಇತರೆ ರಾಜ್ಯ ಸರ್ಕಾರಗಳ ಮಾದರಿಯಲ್ಲಿ ಕಾಯಂಗೊಳಿಸಲು ನಿರ್ಧರಿಸಿದಂತೆ ಸರ್ಕಾರ ಈಗಾಗಲೇ ಇಲಾಖೆಯ ವತಿಯಿಂದ ವಿಶೇಷ ನಿಯಮಾವಳಿ ರಚಿಸಲು ಇಡೀ ಕಡತವನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ ಇತ್ಯರ್ಥಗೊಳಿಸಬೇಕೆಂದು ಒತ್ತಾಯಿಸಿದರು.
 
ಈಗಾಗಲೇ ಅಸ್ತಿತ್ವದಲ್ಲಿರುವ ಸಮ್ಮಿಶ್ರ ಸರ್ಕಾರ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಲು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಹಾಗೂ ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಚರ್ಚಿತಗೊಂಡ ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಹಾಗೂ ವೇತನ ತಿಂಗಳಿಗೆ 25 ಸಾ.ರೂ.ಗಳಿಗೆ ಹೆಚ್ಚಿಸುವುದನ್ನು ಅಧಿವೇಶನದಲ್ಲಿ ಮಂಡಿಸಿ ಅನುಮತಿ ಪಡೆದು ಜಾರಿಗೊಳಿಸುವಂತೆ ಆಗ್ರಹಿಸಿದರು.

ಧರಣಿಯಲ್ಲಿ ಸಮಿತಿ ಅಧ್ಯಕ್ಷ ಜಗಪ್ಪ ತಳವಾರ, ಪ್ರಧಾನ ಕಾರ್ಯದರ್ಶಿ ಅಣವೀರಪ್ಪ ಬೋಳೆವಾಡ, ಸಂಘಟನಾ ಕಾರ್ಯದರ್ಶಿ ರಮೇಶ ಕವಡೆ, ಖಜಾಂಚಿ ಡಾ| ವೀರೇಂದ್ರ ಹಾಗೂ ಇತರರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.