ಸತ್ಯ ಹೇಳುವ ದಿಟ್ಟ ಮಾಧ್ಯಮ ಬೇಕು


Team Udayavani, Feb 3, 2019, 6:45 AM IST

dvg-9.jpg

ವಾಡಿ: ಸುಳ್ಳುಗಳನ್ನೆ ಸಾರುವ ಸರಕಾರದ ಪ್ರಾಯೋಜಿತ ಮಾಧ್ಯಮಗಳಿಂದ ಜನರ ಕೂಗನ್ನು ದಮನ ಮಾಡಲಾಗುತ್ತಿದೆ. ಸತ್ಯ ಹೇಳುವ ಮೂಲಕ ಜನರ ದನಿಯಾಗಬಲ್ಲ ದಿಟ್ಟ ಮಾಧ್ಯಮಗಳ ಅಗತ್ಯವಿದೆ ಎಂದು ಪ್ರಗತಿಪರ ಚಿಂತಕ ಕಾಶೀನಾಥ ಹಿಂದಿನಕೇರಿ ಹೇಳಿದರು.

ಸಂಚಲನ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಮರವಾಡಿ ಗ್ರಾಮದ ಕೊಟಗಾರ ತೋಟದಲ್ಲಿ ಏರ್ಪಡಿಸಲಾಗಿದ್ದ ಪುಸ್ತಕ ಓದು ಸಂವಾದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ರವೀಶ ಕುಮಾರ ಅವರ ದಿ ಫ್ರೀ ವಾಯ್ಸ ಎನ್ನುವ ಆಂಗ್ಲ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿರುವ ಹರ್ಷಕುಮಾರ ಕುಗ್ವೆ ಅವರ ಮಾತಿಗೆ ಏನು ಕಡಿಮೆ? ಪುಸ್ತಕದ ಸಾರಾಂಶ ಮಂಡಿಸಿ ಅವರು ಮಾತನಾಡಿದರು.

ಪುಸ್ತಕದ ಕಥಾವಸ್ತುವಿನಲ್ಲಿ ಇಂದಿನ ಮಾಧ್ಯಮಗಳ ಹೊಣೆಗೇಡಿತನದ ಮೇಲೆ ಬೆಳಕು ಚೆಲ್ಲಲಾಗಿದೆ. ಬಹುತೇಕ ಮಾಧ್ಯಮಗಳು ಸರಕಾರದ ಖಾಸಗಿ ಸೈನ್ಯದಂತೆ ಕೆಲಸ ಮಾಡುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ. ಪ್ರಜಾಪ್ರಭುತ್ವದ ಕಾವಲು ನಾಯಿ ಎಂದು ಕರೆಯಿಸಿಕೊಳ್ಳುವ ಮಾಧ್ಯಮ ರಂಗ ಆಳುವ ಸರಕಾರಗಳ ಸಾಕು ನಾಯಿಗಳಾಗಿರುವುದು ವ್ಯವಸ್ಥೆಯ ದುರಂತ. ಅಧಿಕಾರದಲ್ಲಿದ್ದವರ ಪರವಾಗಿ ತುತ್ತೂರಿ ಊದುವ ಮಾಧ್ಯಮಗಳಿಂದ ಜನರು ದಾರಿತಪ್ಪುವ ಆತಂಕವಿದೆ ಎಂದು ಹೇಳಿದರು.

ಜೀವ ಬೆದರಿಕೆ ಎದುರಿಸಿ ಸತ್ಯ ಬರೆಯಲು ಪತ್ರಕರ್ತರು ಎದೆಗಾರಿಕೆ ತೋರಿಸಬೇಕಾದ ಪ್ರಸಂಗ ಸೃಷ್ಟಿಯಾಗಿದೆ. ಪತ್ರಕರ್ತರು ಮತ್ತು ಸಾಹಿತಿಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಕಸಿದುಕೊಳ್ಳಲಾಗುತ್ತಿದೆ. ಧರ್ಮಾಂಧರು, ಮತಾಂಧರು, ಭ್ರಷ್ಟ ರಾಜಕಾರಣಿಗಳು ಪತ್ರಕರ್ತರ ಮೇಲೆ ದಾಳಿ ಮಾಡುವ ಕ್ರೌರ್ಯ ಬೆಳೆಸಿಕೊಂಡಿದ್ದರಿಂದ ಗೌರಿ ಲಂಕೇಶ, ಎಂ.ಎಂ. ಕಲಬುರಗಿ ಅವರಂತ ಸಮಾಜಮುಖ ಬರಹಗಾರರು ಹಂತಕರ ಗುಂಡೇಟಿಕೆ ಬಲಿಯಾಗಬೇಕಾಯಿತು. ಪ್ರಜಾತಂತ್ರ ವ್ಯವಸ್ಥೆ ಆಧಾರಸ್ತಂಬಗಳಾದ ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ಹಾಗೂ ಪತ್ರಿಕಾರಂಗಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಮೌಡ್ಯ ಪೋಷಿಸುವ ಮಾಧ್ಯಮಗಳಿಂದ ಪ್ರಜಾಪ್ರಭುತ್ವದ ತಳಪಾಯ ಶಿಥಿಲಗೊಳ್ಳುತ್ತಿದೆ. ಭ್ರಷ್ಟ ರಾಜಕಾರಣದ ವಿರುದ್ಧ ಜನರು ದಂಗೆ ಏಳುವ ಕಾಲ ದೂರವಿಲ್ಲ ಎಂದು ವಿವರಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಿಕ್ಷಕ ಮಲ್ಲೇಶ ನಾಟೀಕಾರ, ಸಾಮಾಜಿಕ ಜಾಲತಾಣಗಳಲ್ಲಿ ಕಳೆದುಹೋಗುತ್ತಿರುವ ವಿದ್ಯಾರ್ಥಿ ಯುವಜನರಲ್ಲಿ ಸಾಹಿತ್ಯ ಓದುವ ಹವ್ಯಾಸ ಬೆಳೆಸಬೇಕಾದ ಅಗತ್ಯವಿದೆ. ವಿಚಾರ ಜ್ಞಾನ ಬೆಳೆಯಲು ಓದು ಹವ್ಯಾಸ ಬಹುಮುಖ್ಯವಾಗಿದ್ದು, ಸಂಚಲನ ಸಾಹಿತ್ಯ ವೇದಿಕೆಯಿಂದ ಪ್ರತಿ ತಿಂಗಳು ಪುಸ್ತಕ ಸಂವಾದ ನಡೆಸಲಾಗುತ್ತಿದೆ ಎಂದರು.

ಸಂಚಲನ ಸಾಹಿತ್ಯ ವೇದಿಕೆ ಅಧ್ಯಕ್ಷ ಮಡಿವಾಳಪ್ಪ ಹೇರೂರ ಅಧ್ಯಕ್ಷತೆ ವಹಿಸಿದ್ದರು. ವಾಡಿ ವೀರಶೈವ ಸಮಾಜದ ಹಿರಿಯ ಮುಖಂಡ ಭೀಮಶಾ ಜಿರೊಳ್ಳಿ ಅತಿಥಿಗಳಾಗಿದ್ದರು. ಸಂಚಲನ ವೇದಿಕೆ ವೀರಣ್ಣ ಯಾರಿ, ವಿಕ್ರಮ ನಿಂಬರ್ಗಾ, ದೇವಿಂದ್ರ ಕರದಳ್ಳಿ, ಸಿದ್ದರಾಜ ಮಲಕಂಡಿ, ಸಿದ್ದಯ್ಯಶಾಸ್ತ್ರೀ ನಂದೂರಮಠ, ರಾಯಪ್ಪ ಕೊಟಗಾರ, ಮಲ್ಲಿಕಪಾಶಾ ಮೌಜನ್‌, ಶ್ರವಣಕುಮಾರ ಮೌಸಲಗಿ, ರಘುವೀರ ಪವಾರ, ಗುಂಡಪ್ಪ ಭಂಕೂರ, ಕರುಣೇಶ ಕೆಲ್ಲೂರ, ಶೆಂಕ್ರೆಪ್ಪ ಜುಮಲಾಪುರ, ಶ್ರೀಕಾಂತ ಬಿರಾಳ ಪಾಲ್ಗೊಂಡಿದ್ದರು. ಚಂದ್ರು ಕರ್ಣಿಕ ನಿರೂಪಿಸಿದರು. ರವಿಕುಮಾರ ಕೋಳಕೂರ ವಂದಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.