ಶಿರಾಡಿಯಲ್ಲಿ ಎಲ್ಲಾ ವಾಹನಗಳೂ ಸಂಚಾರ


Team Udayavani, Nov 15, 2018, 1:23 PM IST

has-1.jpg

ಹಾಸನ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ವ್ಯಾಪ್ತಿಯ ಶಿರಾಡಿಘಾಟ್‌ ರಸ್ತೆಯಲ್ಲಿ ಗುರುವಾರದಿಂದಲೇ ಸರಕು ಸಾಗಾಣೆಯ ಭಾರೀ ವಾಹನಗಳ ಸಂಚಾರಕ್ಕೂ ಅನುಮತಿ ನೀಡಲಾಗಿದ್ದು, ಸತತ ಮೂಲಕ ತಿಂಗಳ ಬಳಿಕ ಎಲ್ಲಾ ತರಹದ ವಾಹನಗಳ ಸಂಚಾರಕ್ಕೆ ಶಿರಾಡಿ ತೆರೆದುಕೊಂಡಿದೆ.

ಈ ಹಿಂದೆ ಲಘು ವಾಹನಗಳಾದ ದ್ವಿಚಕ್ರ ವಾಹನಗಳು, ಕಾರು ಜೀಪು, ವ್ಯಾನ್‌, ಟೆಂಪೋ ಟ್ರಾವೆಲರ್‌ ಹಾಗೂ ಸಾಮಾನ್ಯ ಬಸ್ಸು, ರಾಜಹಂಸ, ಐರಾವತ, ಖಾಸಗಿ ಲಕ್ಸುರಿ ಬಸ್ಸುಗಳ ಸಂಚಾರಕ್ಕೆ ಶಿರಾಡಿಘಾಟ್‌ ರಸ್ತೆ ಮುಕ್ತಗೊಳಿಸಲಾಗಿತ್ತು. ನ.15ರ ಬೆಳಗ್ಗೆ 6 ಗಂಟೆಯಿಂದ ಎಲ್ಲಾ ಬಗೆಯ ವಾಹನಗಳ ಸಂಚಾರಕ್ಕೂ ಅಂದರೆ ಭಾರೀ ವಾಹನಗಳಾದ ಎಲ್‌. ಸಿ., ಬುಲೆಟ್‌ ಟ್ಯಾಂಕರ್‌, ಕಾರ್ಗೊ ಕಂಟೈನರ್‌, ಲಾಂಗ್‌ ಚಾಸೀಸ್‌ ವಾಹನಗಳು ಸೇರಿದಂತೆ ಎಲ್ಲಾ ಬಗೆಯ ವಾಹನಗಳ ಸಂಚಾರಕ್ಕೂ ಶಿರಾಡಿಘಾಟ್‌ ರಸ್ತೆಯನ್ನು ಮುಕ್ತಗೊಳಿಸಿ ಹಾಸನ ಜಿಲ್ಲಾಧಿಕಾರಿ ಯವರು ಅದೇಶ ಹೊರಡಿಸಿದ್ದಾರೆ. 

ಈ ಆದೇಶದ ಅನ್ವಯ ರಸ್ತೆಯಲ್ಲಿ ಹಾಗೂ ಏಕಮುಖ ಸಂಚಾರ ಇರುವ ಸ್ಥಳಗಳಲ್ಲಿ ಪೊಲೀಸ್‌ ಇಲಾಖೆಯ ಸಿಬ್ಬಂದಿಯವರನ್ನು ನೇಮಕ ಗೊಳಿಸಲು ಪೊಲೀಸ್‌ ಅಧೀಕ್ಷಕರು ನಿರ್ದೇಶನ ನೀಡಿರುವ ಅವರು, ರಾಷ್ಟ್ರೀಯ ಹೆದ್ದಾರಿ ಕಾರ್ಯ ಪಾಲಕ ಎಂಜಿನಿಯರ್‌ ಅವರು ವಾಹನಗಳ ಸುಗಮ ಸಂಚಾರಕ್ಕಾಗಿ ಅವಶ್ಯವಿರುವ ಸೂಚನಾಫ‌ಲಕ ಅಳವಡಿಸಲು ಸೂಚನೆ ನೀಡಿದ್ದಾರೆ. 

ಮುಂಗಾರು ಮಳೆಯ ಸಂದರ್ಭದಲ್ಲಿ ಭೂ ಕುಸಿತವುಂಟಾಗಿದ್ದರಿಂದ ಒಂದು ತಿಂಗಳಿಗೂ ಹೆಚ್ಚು ಕಾಲ ಶಿರಾಡಿಘಾಟ್‌ನಲ್ಲಿ ವಾಹಸನ ಸಂಚಾರ ಸ್ಥಗಿತೊಳಿಸಲಾಗಿತ್ತು. ರಸ್ತೆಯ ಮೇಲಿನ ಮಣ್ಣು ತೆರವುಗೊಳಿಸಿದ ನಂತರ ಲಘು ವಾಹಗಳು ಹಾಗೂ ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಈಗ ಸರಕು ಸಾಗಾಣೆಯ ವಾಹನಗಳ ಸಂಚಾರಕ್ಕೂ ಅನುಮತಿ ನೀಡಲಾಗಿದೆ.

ವಾರದ ಹಿಂದೆಯೇ ಅನುಮತಿ: ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಶಿರಾಡಿ ಘಾಟ್‌ನಲ್ಲಿ ಭೂಕುಸಿತ ಉಂಟಾಗಿತ್ತು. ಹೀಗಾಗಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಆಗಸ್ಟ್‌ನಲ್ಲಿ ರದ್ದು ಗೊಳಿಸಲಾಗಿತ್ತು. ರಸ್ತೆ ತಾತ್ಕಾಲಿಕ ದುರಸ್ತಿ ಮಾಡಿದ ನಂತರ ಸೆಪ್ಟೆಂಬರ್‌ನಲ್ಲಿ ಮೊದಲಿಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ನಂತರ ಸಾರ್ವಜನಿಕ ಬಸ್‌ಗಳ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು.

ಆದರೆ, ನಾಲ್ಕು ಕಡೆ ಏಕಮುಖ ಸಂಚಾರ ವಿದ್ದರಿಂದ ಘನವಾಹನಗಳ ವಾಹನಕ್ಕೆ ಅನುಮತಿ ನೀಡಿರಲಿಲ್ಲ. ಆದರೆ, ಸಾರ್ವಜನಿಕ ವಲಯ ದಿಂದ ಘನವಾಹನಗಳ ಸಂಚಾರಕ್ಕೆ ಅವಕಾಶ ನೀಡುವಂತೆ ವ್ಯಾಪಕ ಒತ್ತಡಗಳು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ 12ರಿಂದ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಆದೇಶ ಹೊರಡಿಸಿದ್ದರು.

ಆದರೆ, ಹಾಸನಾಂಬ ಉತ್ಸವ ಇದ್ದ ಕಾರಣ ಇಲ್ಲಿನ ಜಿಲ್ಲಾಡಳಿತ ಭಾರೀ ವಾಹನಗಳ ಸಂಚಾರಕ್ಕೆ ಅಂದು ಅವಕಾಶ ನೀಡಿರಲಿಲ್ಲ. ಹಾಸನಾಂಬ ಉತ್ಸದ ಮುಗಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚೆ ನಡೆಸಿದ ಬಳಿಕ ನ.14ರಿಂದ ಘನ ವಾಹನಗಳ ಸಂಚಾರಕ್ಕೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅನುಮತಿ ನೀಡಿದ್ದಾರೆ.

ಶಿರಾಡಿ ರಸ್ತೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡದ ಕಾರಣ ಸುತ್ತಿ ಬಳಸಿ ಕರಾವಳಿ ಜಿಲ್ಲೆಗೆ ಹೋಗ
ಬೇಕಿತ್ತು. ಇದರಿಂದ ಸಾವಿರಾರು ರೂ. ಇಂಧನ ವಿನಾಕಾರಣ ಪೋಲಾಗುತ್ತಿತ್ತು. ಇದೀಗ ಶಿರಾಡಿ ಘಾಟಿ ರಸ್ತೆ ಘನ ವಾಹನಗಳ
ಸಂಚಾರಕ್ಕೂ ಮುಕ್ತಗೊಳಿಸಿರುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಅಭಿನಂದನೆ. 
ಸಂಜೀತ್‌ಶೆಟ್ಟಿ, ಶಿರಾಡಿ ರಸ್ತೆ ಉಳಿಸಿ ಹೋರಾಟ ಸಮಿತಿ ಅಧ್ಯಕ

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.