ರೈತರ ಸಂಕಷ್ಟಗಳಿಗೆಸ್ಪಂದಿಸದ ತಾಲೂಕಾಡಳಿತ 


Team Udayavani, Sep 23, 2018, 3:57 PM IST

23-sepctember-20.jpg

ಹಾನಗಲ್ಲ: ಬೆಳೆವಿಮಾ ಕಂಪನಿ ಹಾಗೂ ಬ್ಯಾಂಕ್‌ ಅಧಿಕಾರಿಗಳ ನಡುವಿನ ಮಾಹಿತಿ ಲೋಪದಿಂದ ಹಾನಗಲ್ಲ ತಾಲೂಕಿನ 4386 ರೈತರು 11.57 ಕೋಟಿ ರೂ. ಬೆಳೆವಿಮಾ ಪರಿಹಾರ ವಂಚಿತರಾಗಿ ಎರಡು ವರ್ಷ ಕಳೆದಿದ್ದರೂ ಪರಿಹಾರ ದೊರೆಯದೆ ಸಮಸ್ಯೆ ಜಟಿಲಗೊಂಡ ವಿಷಯ ಹಾನಗಲ್ಲ ತಾಲೂಕು ಪಂಚಾಯತ ಸಭೆಯಲ್ಲಿ ಚರ್ಚೆಗೆ ಗ್ರಾಸವಾಯಿತು.

ಶನಿವಾರ ಪಟ್ಟಣದ ತಾಲೂಕು ಪಂಚಾಯತ್‌ ಸಭಾಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ವರದಿ ನೀಡುವ ಸಂದರ್ಭದಲ್ಲಿ ಬೆಳೆವಿಮೆ ಕುರಿತು ಚರ್ಚೆ ಆರಂಭವಾಯಿತು. ಹಾವೇರಿ ಜಿಲ್ಲೆಯಲ್ಲಿ ರಾಣಿಬೆನ್ನೂರ ಮಾತ್ರ ಬರಪೀಡಿತ ಎಂದು ಘೋಷಣೆಯಾಗಿದೆ. ಹಾನಗಲ್ಲ ತಾಲೂಕಿನ ಅರ್ಧಭಾಗ ಅತಿವೃಷ್ಟಿಯಿಂದ ನಾಶವಾಗಿದ್ದರೆ, ಇನ್ನರ್ಧ ಭಾಗ ಅನಾವೃಷ್ಟಿಯಿಂದ ನಾಶವಾಗಿದೆ. ಆದರೆ, ಜಿಲ್ಲಾಧಿಕಾರಿಗಳು ಕೇವಲ ಅತಿವೃಷ್ಟಿ ಮಾಹಿತಿ ಪಡೆದು ಅನಾವೃಷ್ಟಿ ಬಗ್ಗೆ ಯಾವುದೇ ಮಾಹಿತಿ ಕೇಳಿಲ್ಲ ಎಂಬ ಸತ್ಯ ಅಧಿಕಾರಿಗಳಿಂದ ಬಯಲಾಯಿತು.

ಈ ಕುರಿತು ಪ್ರಶ್ನಿಸಿದ ಜಿಪಂ ಸದಸ್ಯ ರಾಘವೇಂದ್ರ ತಹಶೀಲ್ದಾರ, ಜಿಲ್ಲಾ ಆಡಳಿತ ಹಾಗೂ ಹಾನಗಲ್ಲ ತಾಲೂಕು ಆಡಳಿತ ರೈತರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಹಾನಗಲ್ಲ ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ಸರಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಒತ್ತಾಯಿಸಿದರು. ಬೆಳೆವಿಮೆ ವಿಷಯದಲ್ಲಂತೂ ಹಾನಗಲ್ಲ ತಾಲೂಕಿನ ರೈತ ಕೇವಲ ಕಂತು ಕಟ್ಟುವುದು ಮಾತ್ರ ಆಗಿದೆ. ನಷ್ಟವನ್ನಾಧರಿಸಿ ಬೆಳೆವಿಮೆ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಅಧಿಕಾರಿಗಳ ಕರ್ತವ್ಯ ಲೋಪದಿಂದಲೇ ಇಂತಹ ಸ್ಥಿತಿ ಒದಗಿದೆ ಎಂದು ಆರೋಪಿಸಿದರು. ಆದರೆ, ಇದಕ್ಕೆ ಪರಿಹಾರ ದೊರೆಯುವ ಲಕ್ಷಣಗಳು ಕಾಣಲಿಲ್ಲ. ಈ ಬಗ್ಗೆ ಸಕಾರಾತ್ಮಕ ಚರ್ಚೆಯೂ ನಡೆಯಲಿಲ್ಲ.

ಕೃಷಿ ಇಲಾಖೆಯ ವಿವಿಧ ಯೋಜನೆಗಳು ಕೆಲವರ ಪಾಲಾಗುತ್ತಿರುವುದನ್ನು ತಪ್ಪಿಸಬೇಕು ಎಂದು ಶಾಸಕ ಸಿ.ಎಂ.ಉದಾಸಿ ಸಲಹೆ ಮಾಡಿದರು. ವಿವಿಧ ಜಾತಿ ಜನಾಂಗಗಳಿಗೆ ಸರ್ಕಾರ ನೀಡುವ ಕೃಷಿ ಇಲಾಖೆ ಸೌಲಭ್ಯಗಳು ಒಬ್ಬನೇ ರೈತನಿಗೆ ಮತ್ತೆ ಮತ್ತೆ ಸಿಗುವಂತಾಗುತ್ತದೆ. ಇನ್ನು ಕೆಲವು ರೈತರಿಗೆ ಈ ಯೋಜನೆಗಳ ಸೌಲಭ್ಯಗಳು ದೊರೆಯುವುದೇ ಇಲ್ಲ. ಒಮ್ಮೆ ಫಲಾನುಭವಿ ಆದವರಿಗೆ ಮತ್ತೆ ಫಲಾನುಭವಿ ಮಾಡುವುದು ಬೇಡ, ಹಿಂದಿನ ಯಾದಿಯನ್ನು ಪರಿಶೀಲಿಸಿ ಹೊಸಬರಿಗೆ ಅವಕಾಶ ನೀಡಬೇಕು ಎಂದು ಸೂಚಿಸಿದರು.

ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ತಾಲೂಕಿನಲ್ಲಿ ಈ ಹಿಂದೆ ರಚಿಸಿದ ಅರಣ್ಯ ಸಮಿತಿಗಳ ಅವಧಿ ಮುಗಿದವುಗಳಿಗೆ ಹೊಸ ಸಮಿತಿ ರಚಿಸಬೇಕು. ಇಂತಹ ಸಮಿತಿಗಳ ಯಾದಿ ನೀಡುವಂತೆ ಶಾಸಕ ಸಿ.ಎಂ.ಉದಾಸಿ ಅರಣ್ಯ ಇಲಾಖೆ ಗಮನ ಸೆಳೆದರು. ತಾಲೂಕಿನಲ್ಲಿ ಇರುವ ಶುದ್ಧ ಕುಡಿಯುವ ನೀರಿನ ಘಟಕಗಳ ಮಾಹಿತಿಯನ್ನು ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಘಟಕ ನೀಡಬೇಕು. ಯಾವುದೇ ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಳ್ಳದಂತೆ ಎಚ್ಚರಿಕೆ ವಹಿಸಬೇಕು. ಕಾಮಗಾರಿ ನಡೆದಿರುವ ಘಟಕಗಳು, ಕೂಡಲೇ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಸೇವೆಗೆ ಸಿಗುವಂತಾಗಬೇಕು. ಈ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿದ ಗುತ್ತಿಗೆದಾರರು, ಆ ಪ್ರದೇಶ ಅಭಿಯಂತರರು, ತಾಲೂಕು ಹಾಗೂ ಜಿಲ್ಲಾ ಪಂಚಾಯತ್‌ ಸದಸ್ಯರು ಒಟ್ಟಾಗಿ ತಮ್ಮ ಪ್ರದೇಶದ ಘಟಕಗಳ ಸಮಸ್ಯೆಗಳ ಬಗ್ಗೆ ಸರಿಯಾದ ಮಾಹಿತಿ ಸಂಗ್ರಹಿಸಿ ಕೂಡಲೇ ನನಗೆ ಒದಗಿಸಬೇಕು. ಕಾಮಗಾರಿ ಲೋಪವಾಗಿದ್ದರೆ ಗುತ್ತಿಗೆದಾರರು ಹಾಗೂ ಅಭಿಯಂತರರೇ ನೇರ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಸಿದರು.

ತಾಲೂಕು ಪಂಚಾಯತ್‌ ಸದಸ್ಯೆ ಮಮತಾ ಕಮಾಟಿ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ನೈರ್ಮಲ್ಯಕ್ಕೆ ಮುಂದಾಗುತ್ತಿಲ್ಲ. ಸೊಳ್ಳೆಗಳ ಕಾಟದಿಂದಾಗಿ ಚಿಕೂನ್‌ಗುನ್ಯಾದಂತಹ ರೋಗಗಳು ಸಾರ್ವಜನಿಕರನ್ನು ಕಾಡುತ್ತಿವೆ. ಕೂಡಲೇ ಆದೇಶಿಸಿ ಸೊಳ್ಳೆ ನಿಯಂತ್ರಣ ಕಾರ್ಯ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಶಾಸಕ ಸಿ.ಎಂ.ಉದಾಸಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಾಪಂ ಅಧ್ಯಕ್ಷ ಸಿದ್ದಪ್ಪ ಹಿರಗಪ್ಪನವರ, ಉಪಾಧ್ಯಕ್ಷೆ ಸರಳಾ ಜಾಧವ, ಜಿಪಂ ಸದಸ್ಯ ರಾಘವೇಂದ್ರ ತಹಶೀಲ್ದಾರ್‌, ತಾಲೂಕು ತಹಶೀಲ್ದಾರ್‌ ಸಿ.ಎಸ್‌.ಭಂಗಿ, ತಾಪಂ ಕಾರ್ಯ ನಿರ್ವಾಹಕ ಅಧಿ ಕಾರಿ ಡಾ| ಎಚ್‌. ಶಶಿಧರ ವೇದಿಕೆಯಲ್ಲಿದ್ದರು.

ಹಾನಗಲ್ಲ ತಾಲೂಕು ಕಂದಾಯ ಇಲಾಖೆ ಭ್ರಷ್ಟಾಚಾರದ ಕೂಪವಾಗುವುದು ಬೇಡ. ರೈತರ ಜಮೀನುಗಳ ಪೋಡಿಗಾಗಿ ಅಧಿಕಾರಿಗಳು ರೈತರ ಸುಲಿಗೆ ಮಾಡುತ್ತಿದ್ದಾರೆ. ಪಹಣಿಯಲ್ಲಿ ಸರ್ಕಾರ ಎಂದಿರುವುದನ್ನು ಬದಲಿಸಲು ಹಣದ ವ್ಯವಹಾರ ನಡೆಯುತ್ತಿರುವುದು ಕಂಡು ಬಂದಿದೆ. ಇದಕ್ಕೆ ಕಡಿವಾಣ ಹಾಕಲು ಕೂಡಲೇ ಪೋಡಿ ಮುಕ್ತ ಗ್ರಾಮಗಳನ್ನಾಗಿ ಮಾಡಬೇಕು. ತಿಂಗಳೊಳಗೆ ಎರಡು ಹಂತ ಮಾಡಿಕೊಂಡು ಪೋಡಿ ಮುಕ್ತ ಗ್ರಾಮ ಪ್ರಕ್ರಿಯೆ ಪೂರ್ಣಗೊಳ್ಳಬೇಕು.
ಸಿ.ಎಂ.ಉದಾಸಿ, ಶಾಸಕ

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.