ಬಿಜೆಪಿಯತ್ತ ಹೊರಡಲು ಆಟೋ ಹತ್ತಿದ ಮಾಜಿ ಸಚಿವ ಆರ್‌. ಶಂಕರ್‌

Team Udayavani, Jan 16, 2019, 10:51 AM IST

16-january-19.jpg

ಹಾವೇರಿ: ಜಿಲ್ಲೆಯ ರಾಣಿಬೆನ್ನೂರು ಕ್ಷೇತ್ರದ ಪಕ್ಷೇತರ ಶಾಸಕ ಆರ್‌. ಶಂಕರ್‌ ಸಮ್ಮಿಶ್ರ ಸರ್ಕಾರಕ್ಕೆ ಕೊಟ್ಟಿದ್ದ ಬೆಂಬಲ ವಾಪಸ್‌ ಪಡೆಯಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರಾಜಕಾರಣದಲ್ಲಿ ಹೊಸ ಕೌತುಕ ಸೃಷ್ಟಿಯಾಗಿದೆ.

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆರ್‌. ಶಂಕರ್‌ ರಾಣಿಬೆನ್ನೂರು ಕ್ಷೇತ್ರದಿಂದ ಕೆಪಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪ್ರಥಮ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್‌- ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಇವರಿಗೆ ಭಾರಿ ಬೇಡಿಕೆ ಬಂದು, ಶಾಸಕರಾಗಿ ಆಯ್ಕೆಯಾದ ಪ್ರಥಮ ಬಾರಿಗೆ ಸಚಿವ ಸ್ಥಾನ ಒಲಿದು ಬಂದಿತ್ತು. ಆಗ ನಡೆದ ರಾಜಕೀಯ ಚದುರಂಗದಾಟದಲ್ಲಿ ಆರ್‌. ಶಂಕರ್‌ ಅಳೆದು ತೂಗಿ ಅಧಿಕಾರದ ಜಾಡು ಹಿಡಿದು ಹೆಜ್ಜೆ ಇಟ್ಟಿದ್ದರು.

ಸರ್ಕಾರ ರಚನೆ ಆರಂಭದಲ್ಲಿ ಹೆಚ್ಚು ಸ್ಥಾನ ಹೊಂದಿರುವ ಬಿಜೆಪಿ ಸರ್ಕಾರ ನಡೆಸಬಹುದೆಂದು ತಿಳಿದು ಬೆಳಗ್ಗೆ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಆರ್‌. ಶಂಕರ್‌, ಸಂಜೆ ಹೊತ್ತಿಗೆ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ರಚನೆಯ ಸುಳಿವು ಸಿಕ್ಕು ಕಾಂಗ್ರೆಸ್‌ ಸೇರಿದ್ದರು. ಅಧಿಕಾರದ ಒಳ ಒಪ್ಪದದಂತೆ ರಾಜ್ಯದ ನೂತನ ಸಮ್ಮಿಶ್ರ ಸರ್ಕಾರದಲ್ಲಿ ಆರ್‌. ಶಂಕರ್‌ ಸಚಿವ ಸ್ಥಾನ ನೀಡಲಾಗಿತ್ತು. ಆಗ ಜಿಲ್ಲೆಯ ಅಧಿಕಾರ ರಾಜಕಾರಣದಲ್ಲಿ ಹೊಸಬರ ಪ್ರವೇಶವಾಗಿದೆ ಎಂದೇ ಜಿಲ್ಲೆಯಲ್ಲಿ ರಾಜಕೀಯ ಚರ್ಚೆಯಾಗಿತ್ತು. ನಂತರ ನಡೆದ ಸಚಿವ ಸಂಪುಟ ವಿಸ್ತರಣೆ ವೇಳೆ ಪಕ್ಷೇತರ ಅಭ್ಯರ್ಥಿ ಆರ್‌. ಶಂಕರ್‌ ಅವರನ್ನು ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟದಿಂದ ಕೈಬಿಡಲಾಯಿತು. ಇದರಿಂದ ತೀವ್ರ ಮುಖಭಂಗ ಅನುಭವಿಸಿದ್ದ ಆರ್‌. ಶಂಕರ್‌, ಈಗ ಸರ್ಕಾರಕ್ಕೆ ಕೊಟ್ಟಿರುವ ಬೆಂಬಲ ವಾಪಸ್‌ ಪಡೆಯಲು ಮುಂದಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಸಂಪುಟದಲ್ಲಿ ಸಚಿವ ಸ್ಥಾನ ಪಡೆದಿರುವ ಆರ್‌. ಶಂಕರ್‌ ಅವರಿಗೆ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ದೊರಕುವುದು ಬಹುತೇಕ ಖಚಿತ ಎಂದು ಜಿಲ್ಲೆಯ ಜನ ಭಾವಿಸಿದ್ದರು. ಆದರೆ, ಅವರಿಗೆ ಜಿಲ್ಲೆಯ ಉಸ್ತುವಾರಿ ಕೊಡಲೇ ಇಲ್ಲ. ಇನ್ನು ಆರ್‌. ಶಂಕರ್‌ ಜಿಲ್ಲೆಯ ಜನತೆಯ ನಿರೀಕ್ಷೆಗೆ ತಕ್ಕಂತೆ ತಮ್ಮ ಕಾರ್ಯವೈಖರಿ ಪ್ರದರ್ಶಿಸದೆ ಕೇವಲ ತಮ್ಮ ಕ್ಷೇತ್ರಕ್ಕೆ ಸೀಮಿತರಾಗಿದ್ದರು ಎಂಬುದು ಸಹ ಅವರ ಹಿನ್ನಡೆಗೆ ಕಾರಣವಾಯಿತು.

ಸಚಿವ ಸ್ಥಾನ ಕಳೆದುಕೊಂಡ ಬಳಿಕ ನಡೆದ ರಾಜಕೀಯ ವಿದ್ಯಮಾನದಲ್ಲಿ ಮತ್ತೆ ಆರ್‌. ಶಂಕರ್‌ ಸಕ್ರಿಯರಾಗಿದ್ದು, ಬಿಜೆಪಿ ಸರ್ಕಾರ ನಡೆಸುವುದಾದರೆ ಆ ಪಕ್ಷಕ್ಕೆ ಬೆಂಬಲ ಸೂಚಿಸಿ ಅಲ್ಲಿ ಮಂತ್ರಿಯಾಗುವ ಕನಸು ಹೊತ್ತು ಮುನ್ನಡೆದಿದ್ದಾರೆ.

•ಎಚ್.ಕೆ. ನಟರಾಜ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.