ಮುಂದೆ ಬನ್ನಿ… ಬೇಗ ಬನ್ನಿ…

Team Udayavani, Mar 27, 2018, 5:45 PM IST

6.jpg

ದೇಶದಲ್ಲೇ ಅತ್ಯುತ್ತಮ ಸಾರಿಗೆ ವ್ಯವಸ್ಥೆ ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕದ್ದು. ಡ್ರೈವರ್‌, ಕಂಡಕ್ಟರ್‌, ಚೆಕಿಂಗ್‌ ಇನ್ಸ್‌ಪೆಕ್ಟರ್‌, ಮೆನೇಜರ್‌, ಮೆಕ್ಯಾನಿಕ್‌, ಅಕೌಂಟೆಂಟ್‌… ಹೀಗೆ ಹಲವಾರು ನೌಕರಿಗಳ ಮೂಲಕ ಲಕ್ಷಾಂತರ ಮಂದಿಯ ಬದುಕಿಗೆ ಭದ್ರತೆ ನೀಡಿರುವುದು ಕೆಎಸ್ಸಾರ್‌ಟಿಸಿಯ ಹೆಚ್ಚುಗಾರಿಕೆ. ಇಲ್ಲಿ ನೌಕರಿ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಒಂದು ಅವಕಾಶ. ಕರ್ನಾಟಕ ರಸ್ತೆ ಸಾರಿಗೆ ನಿಗಮವು ಗ್ರೂಪ್‌ “ಸಿ’ಯ 720 ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಕರೆದಿದೆ…

“ಅಯ್ಯೋ ಟ್ರೆçನ್‌ ಮಿಸ್ಸಾಯ್ತು ಏನ್ಮಾಡೋದು? ಕೆಎಸ್ಸಾರ್ಟಿಸಿ ಬಸ್‌ ಇದೆಯಲ್ಲಾ, ಹೋಗೋಣ…’ ಇದು ಸಾಮಾನ್ಯವಾಗಿ ಎಲ್ಲ ಪ್ರಯಾಣಿಕರು ಹೇಳುವ ಮಾತು. ದೇಶಾದ್ಯಂತ ಸಂಚರಿಸುವವರಂತೂ ಕರ್ನಾಟಕದಲ್ಲಿರುವಂಥ ಚಂದದ ಸಾರಿಗೆ ವ್ಯವಸ್ಥೆಯನ್ನು ನೋಡಿಯೇ ಇಲ್ಲ ಎನ್ನುತ್ತಾರೆ. ಅಷ್ಟು ಸುವ್ಯವಸ್ಥಿತವಾಗಿ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರಿಗೆ ಬಸ್‌ ಸೌಕರ್ಯಗಳನ್ನು ಕಲ್ಪಿಸಿದೆ. ಹೀಗಾಗಿ ರಾಜ್ಯ ರಸ್ತೆ ಸಾರಿಗೆಗೆ ಕೇಂದ್ರ ಸರ್ಕಾರದಿಂದ ಅನೇಕ ಪ್ರಶಸ್ತಿಗಳು ದೊರಕಿವೆ. 

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲೂ ಕೆಎಸ್ಸಾರ್‌ಟಿಸಿ ಬಸ್‌ಗಳು ಕಾರ್ಯನಿರ್ವಹಿಸುತ್ತಿದ್ದು, ತಾಂತ್ರಿಕ ತೊಂದರೆ ನಿವಾರಿಸಲು ಜಿಲ್ಲಾ, ತಾಲ್ಲೂಕುಗಳಲ್ಲೂ ಡಿಪೋಗಳನ್ನು ನಿರ್ಮಿಸಲಾಗಿದೆ. ಇಂತಹ ರಸ್ತೆ ಸಾರಿಗೆ ನಿಗಮದಲ್ಲಿ 726 ತಾಂತ್ರಿಕ ಸಹಾಯಕ: ದರ್ಜೆ 3ರ ಮೇಲ್ವಿಚಾರಕೇತರ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆ ಹುದ್ದೆಗಳನ್ನು ಹೊಂದಬೇಕೆಂದರೆ…

ಹುದ್ದೆ ವರ್ಗೀಕರಣ
ತಾಂತ್ರಿಕ ಸಹಾಯಕ ಹುದ್ದೆಯನ್ನು ಸಾಮಾನ್ಯ ವರ್ಗ, ಮಳೆ, ಗ್ರಾಮೀಣ, ಅಂಗವಿಕಲ ಹೀಗೆ ವಿಭಾಗಿಸಿದ್ದು, ಪರಿಶಿಷ್ಟ ಜಾತಿ/ಪಂಗಡಗಳಿಗೆ ಅನುಗುಣವಾಗಿ ವರ್ಗೀಕರಣ ಮಾಡಲಾಗಿದೆ. ಜೊತೆಗೆ ಗ್ರಾಮೀಣ ಮೀಸಲಾತಿ, ಯೋಜನಾ ನಿರಾಶ್ರಿತ, ಸೈನಿಕ, ಕನ್ನಡ ಮಾಧ್ಯಮ ಮೀಸಲಾತಿಗೂ ಅವಕಾಶ ಕಲ್ಪಿಸಲಾಗಿದೆ.

ವಯೋಮಿತಿ, ವಿದ್ಯಾರ್ಹತೆ, ವೇತನ
ತಾಂತ್ರಿಕ ಸಹಾಯಕ ಹುದ್ದೆಗೆ ಸರ್ಕಾರದಿಂದ ಅಂಗೀಕೃತ ಸಂಸ್ಥೆಯಲ್ಲಿ ಐಟಿಐ, ಎನ್‌ಎಸಿ ಮೆಕ್ಯಾನಿಕಲ್‌, ಡೀಸೆಲ್‌ ಮೆಕ್ಯಾನಿಕಲ್‌, ಆಟೋ ಎಲೆಕ್ಟ್ರಿಷಿಯನ್‌, ವೆಲ್ಡರ್‌, ಫಿಟ್ಟರ್‌, ಪೈಂಟಿಂಗ್‌, ಆಟೋಮೊಬೈಲ್‌ ವಿಷಯಗಳ ವಿದ್ಯಾರ್ಹತೆ ಹೊಂದಿರಬೇಕು.

ಹುದ್ದೆಗೆ ಅಭ್ಯರ್ಥಿಗಳು ಕನಿಷ್ಠ ದೇಹದಾಡ್ಯìತೆಯನ್ನು ಹೊಂದಿರಬೇಕು. ಪುರುಷರು ಎತ್ತರ 163 ಸೆಂ.ಮೀ, ತೂಕ 55 ಕೆಜಿ. ಮಹಿಳೆಯರು 153 ಸೆ.ಮೀ ಎತ್ತರ, ತೂಕ 50 ಕೆ.ಜಿ ಇರಬೇಕು.

ವಯೋಮಿತಿಯನ್ನು ಕನಿಷ್ಠ 18 ವರ್ಷಗಳಿಂದ ಗರಿಷ್ಠ 30 ವರ್ಷದವರೆಗೆ ನಿಗದಿ ಮಾಡಲಾಗಿದೆ. ಪ್ರವರ್ಗ 2ಎ,ಬಿ, 3ಎ,ಬಿ ಗಳಿಗೆ 38 ವರ್ಷ ಮತ್ತು ಪರಿಶಿಷ್ಟರಿಗೆ 40 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಆಯ್ಕೆಗೊಂಡ ಅಭ್ಯರ್ಥಿಗಳಿಗೆ ತರಬೇತಿ ಹಂತದಲ್ಲಿ 9,100 ರೂ. ಭತ್ಯೆ ನೀಡಲಾಗುತ್ತದೆ. 2 ವರ್ಷ ತರಬೇತಿ ಬಳಿಕ ವೇತನವನ್ನು 11,640 ರೂ. 15,700 ರೂ. ವೇತನ ಪಾವತಿ ಮಾಡಲಾಗುತ್ತದೆ. 

ಆಯ್ಕೆ ಹೇಗೆ?
ಹುದ್ದೆಗೆ ಅಭ್ಯರ್ಥಿಗಳನ್ನು ಸಾಮಾನ್ಯ ಸಾಮರ್ಥ್ಯ ಪರೀಕ್ಷೆ(ಸಿಎಟಿ) ಮೂಲಕ ಆಯ್ಕೆ ಮಾಡಲಾಗುತ್ತದೆ. 
ಸಂವಹನ ನೈಪುಣ್ಯತೆ, ವಿಶ್ಲೇಷಣೆ, ಗಣಿತ, ಸಾಮಾನ್ಯಜ್ಞಾನ, ಗಣಕ ಜ್ಞಾನ ಒಳಗೊಂಡಿರುತ್ತದೆ. 

ಪರೀಕ್ಷೆಯಲ್ಲಿ ಕನಿಷ್ಠ 30ಅಂಕಗಳು ಬರಬೇಕು ಅದಕ್ಕಿಂತ ಕಡಿಮೆ ಅಂಕಗಳು ಬಂದವರನ್ನು ಅನರ್ಹಗೊಳಿಸಲಾಗುತ್ತದೆ. 
ವಿದ್ಯಾರ್ಹತೆ ಅಂಕಗಳನ್ನು ಶೇ.25, ಸಾಮಾನ್ಯ ಸಾಮರ್ಥ್ಯ ಪರೀಕ್ಷೆ ಅಂಕಗಳನ್ನು ಶೇ.75 ಆಧಾರದ ಮೇಲೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ದಾಖಲಾತಿ ಪರಿಶೀಲನೆ, ದೈಹಿಕ ಪರೀಕ್ಷೆ ಕಡ್ಡಾಯ.

ಬೆಂಗಳೂರು,ದಾವಣಗೆರೆ, ಶಿವಮೊಗ್ಗ, ಮೈಸೂರು, ಮಂಗಳೂರು, ಹಾಸನ, ಕಲಬುರ್ಗಿ, ಹುಬ್ಬಳ್ಳಿ, ಬಿಜಾಪುರ, ಗುಲ್ಬರ್ಗಾ, ಬಳ್ಳಾರಿಯಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ಅರ್ಜಿ ಸಲ್ಲಿಕೆ
ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಕೆಗೆ ಮೊದಲು ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಯನ್ನು ಹೊಂದಿಸಿಕೊಳ್ಳುವುದು ಒಳಿತು. ಏ.5ರಿಂದ 25ರ ವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. www.ksrtcjobs.com  ಮೂಲಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ಬಳಿಕ ಚಲನ್‌ ಪ್ರತಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳ ತಕ್ಕದ್ದು. ಬಳಿಕ ಯಾವುದೇ ಅಂಚೆ ಕಚೇರಿಯಲ್ಲಿ ಇ-ಪೇಮೆಂಟ್‌ ಮೂಲಕ ಶುಲ್ಕ ಪಾವತಿಸಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 800 ರೂ. ಮತ್ತು ಪರಿಶಿಷ್ಟರಿಗೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ www.ksrtcjobs.com   ಸಂಪರ್ಕಿಸಿ.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.