CONNECT WITH US  
echo "sudina logo";

ಏ.27 ನಾಮಪತ್ರ ವಾಪಸ್‌ಗೆ ಕಡೆಯ ದಿನ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮಂಗಳವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮಾರ್ಗದರ್ಶನದಲ್ಲಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ.

ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್‌ ಪಡೆಯುವ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ಇದಕ್ಕಾಗಿ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಹೇಗೆ, ಯಾವ ಕಾನೂನು ಏನು ಹೇಳುತ್ತದೆ, ಕಾನೂನಾತ್ಮಕ ಸಮಸ್ಯೆಗಳು ಎದುರಾದರೆ ಪರಿಹಾರ ಕಂಡುಕೊಳ್ಳುವುದು ಹೇಗೆ?

ನಾಮಪತ್ರ ಸಲ್ಲಿಸುವವರು ಪಾಲಿಸಬೇಕಾದ ಶಿಷ್ಟಾಚಾರ, ನಾಮಪತ್ರ ಸ್ವೀಕರಿಸುವವರು ಅನುಸರಿಸ ಬೇಕಾದ ಕ್ರಮಗಳ ಬಗ್ಗೆ ಈಗಾಗಲೇ ಎಲ್ಲ ಚುನಾವಣಾ ಅಧಿಕಾರಿಗಳಿಗೆ ತರಬೇತಿ ಕೊಟ್ಟಿರುವ ಆಯೋಗ, ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಗೊಂದಲಗಳಿಗೆ ಅವಕಾಶ ಕೊಡಬೇಡಿ ಎಂದು ಸೂಚನೆ ನೀಡಿದೆ. 

ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕ ಏ.24 ಇದ್ದು, ರಜಾ ದಿನಗಳನ್ನು ಹೊರತು ಪಡಿಸಿ ಕೆಲಸದ ದಿನಗಳಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಆಯೋಗ ಅವಕಾಶ ಮಾಡಿ ಕೊಟ್ಟಿದೆ. ಮತದಾರರ ಪಟ್ಟಿ ಪರಿಷ್ಕರಣೆ, ಚುನಾವಣಾ ಸಿಬ್ಬಂದಿ ನಿಯೋಜನೆ,

ತರಬೇತಿ ಸೇರಿದಂತೆ ಒಂದು ಹಂತದ ಮತದಾರ ಜಾಗೃತಿ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿರುವ ಆಯೋಗ ಈಗ ನಾಮಪತ್ರ ಸಲ್ಲಿಕೆ, ಪಕ್ಷಗಳು ಮತ್ತು ಅಭ್ಯರ್ಥಿಗಳ ಚುನಾವಣಾ ಪ್ರಚಾರ, ನೀತಿ ಸಂಹಿತೆ ಜಾರಿ, ಕಾನೂನು ಸುವ್ಯವಸ್ಥೆ, ಸುಸೂತ್ರ ಮತದಾನದ ಕಡೆಗೆ ಹೆಚ್ಚು ಗಮನ ಹರಿಸಲಿದೆ.

Trending videos

Back to Top