“ಯಜಮಾನ್ರ ‘ ಗೆಲ್ಲಿಸಲು ಟೊಂಕ ಕಟ್ಟಿದ ಪತ್ನಿಯರು

Team Udayavani, May 4, 2018, 6:50 AM IST

akss.jpg

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಕಣದಲ್ಲಿರುವ ಸಿಎಂ ಸಿದ್ದರಾಮಯ್ಯ,ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿ ಘಟಾನುಘಟಿ ನಾಯಕರ ಪರ ಪತ್ನಿ-ಮಕ್ಕಳು, ನೆಂಟರಿಷ್ಟರು ಪ್ರಚಾರಕ್ಕಿಳಿದಿದ್ದಾರೆ.

ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಪರ ಅನಿತಾ ಕುಮಾರಸ್ವಾಮಿ ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಪ್ರಚಾರ ಮಾಡುತ್ತಿದ್ದರೆ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪರ ಪತ್ನಿ ಉಷಾ ಕನಕಪುರದಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ, ಸಚಿವ ಕೃಷ್ಣ ಬೈರೇಗೌಡರ ಪರ ಪತ್ನಿ ಮೀನಾಕ್ಷಿ, ಮಾಜಿ ಸಚಿವ ದಿನೇಶ್‌ ಗುಂಡೂರಾವ್‌ ಪರವಾಗಿ ಟಬು ಪ್ರಚಾರ ನಡೆಸುತ್ತಿದ್ದಾರೆ.

ಚನ್ನಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಯೋಗೇಶ್ವರ್‌ ಪತ್ನಿ ಶೀಲಾ, ಪುತ್ರಿ, ಚಿತ್ರ ನಟಿ ನಿಶಾ ತಂದೆ ಪರ ಬಿರುಸಿನ ಪ್ರಚಾರದಲ್ಲಿ
ತೊಡಗಿದ್ದಾರೆ. ರಾಮನಗರ ಹಾಗೂ ಚನ್ನಪಟ್ಟಣದಲ್ಲಂತೂ ಅನಿತಾ ಕುಮಾರಸ್ವಾಮಿ ಅವರು ತಾವೇ ಅಭ್ಯರ್ಥಿ ಎನ್ನುವಷ್ಟರ ಮಟ್ಟಿಗೆ ಪ್ರಚಾರದಲ್ಲಿ ತೊಡಗಿದ್ದಾರೆ. ಪುತ್ರ ಹಾಗೂ ನಟ ನಿಖೀಲ್‌ ರಾಮನಗರದಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್‌ ರಾಜ್ಯದ ವಿವಿಧೆಡೆ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ದಲ್ಲಿರುವುದರಿಂದ ಅವರ ಪತ್ನಿ ಉಷಾ ಕನಕಪುರದಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ. ಮೈಸೂರಿನಲ್ಲಿಯೂ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಮಾಡಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅವರ ಸೊಸೆ ಸ್ಮಿತಾ ರಾಕೇಶ್‌ ಪ್ರಚಾರ ನಡೆಸುತ್ತಿದ್ದಾರೆ.

ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ಜೆಡಿಎಸ್‌ ಅಭ್ಯರ್ಥಿ ರಾಮಚಂದ್ರ ಪರ ಅವರ ಸೊಸೆ, ಚಿತ್ರನಟಿ ಅಮೂಲ್ಯ ಪ್ರಚಾರ
ನಡೆಸುತ್ತಿದ್ದಾರೆ. ಸರ್ವಜ್ಞನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೆ.ಜೆ.ಜಾರ್ಜ್‌ ಪರ ಪುತ್ರ ರಾಣಾ ಜಾರ್ಜ್‌, ಗೋವಿಂದರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪುತ್ರ ಅರುಣ್‌ ಸೋಮಣ್ಣ ಪ್ರಚಾರದಲ್ಲಿ ತೊಡಗಿದ್ದಾರೆ.

ಕೆ.ಆರ್‌.ನಗರದಲ್ಲಿ ಜೆಡಿಎಸ್‌ ಅಭ್ಯರ್ಥಿ ಸಾರಾ ಮಹೇಶ್‌ ಪರ ಪುತ್ರ ಜಯಂತ್‌, ಹುಣಸೂರಲ್ಲಿ ಜೆಡಿಎಸ್‌ ಅಭ್ಯರ್ಥಿ ಎಚ್‌. ವಿಶ್ವನಾಥ್‌ ಪರ ಪುತ್ರರಾದ ಅಮಿತ್‌,ಸಂತೋಷ್‌ ಮತ್ತು ಪೂರ್ವಜ್‌, ನಂಜನಗೂಡಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷವರ್ಧನ ಪರ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್‌, ಚಾಮುಂಡೇಶ್ವರಿಯಲ್ಲಿ ಜೆಡಿಎಸ್‌ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರ ಪರ ಪುತ್ರ ಹರೀಶ್‌ ಗೌಡ, ಹೊಳೆನರಸೀಪುರದಲ್ಲಿ ಜೆಡಿಎಸ್‌ ಅಭ್ಯರ್ಥಿ ರೇವಣ್ಣ ಪರ ಪುತ್ರ ಪ್ರಜ್ವಲ್‌, ಪತ್ನಿ ಭವಾನಿ ಪ್ರಚಾರ ನಡೆಸುತ್ತಿದ್ದಾರೆ.

ಕೊಪ್ಪಳದಲ್ಲಿ ಬಿಜೆಪಿ ಅಭ್ಯರ್ಥಿ ಅಮರೇಶ ಕರಡಿ ಪರ ಪತ್ನಿ ಮಂಜುಳಾ, ಸಹೋದರ ಜಿಪಂ ಸದಸ್ಯ ಗವಿಸಿದಟಛಿಪ್ಪ ಕರಡಿ ಹಾಗೂ ತಂದೆ ಸಂಸದ ಸಂಗಣ್ಣ ಕರಡಿ ಪ್ರಚಾರಕ್ಕಿಳಿದಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಪರ ತಂದೆ ಬಸವರಾಜ ಹಿಟ್ನಾಳ, ಸಹೋದರ ಜಿಪಂ ಅಧ್ಯಕ್ಷ ರಾಜಶೇಖರ ಹಿಟ್ನಾಳ ಪ್ರಚಾರಕ್ಕಿಳಿದಿದ್ದಾರೆ.

ಕಲಬುರಗಿ ದಕ್ಷಿಣ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಬಸವರಾಜ ಡಿಗ್ಗಾವಿ ಪರ ಪತ್ನಿ ನಾಗರತ್ನಾ ಡಿಗ್ಗಾವಿ ಕಲಬುರಗಿ ಪಟ್ಟಣದ
ಕುಂಬಾರಗಲ್ಲಿಯಲ್ಲಿ ಮನೆಮನೆಗೆ ತೆರಳಿ ಮತಯಾಚಿಸಿದರು. ಚಿತ್ತಾಪುರ ಕಾಂಗ್ರೆಸ್‌ ಅಭ್ಯರ್ಥಿ ಸಚಿವ ಪ್ರಿಯಾಂಕ್‌ ಖರ್ಗೆ ಪರ ಅವರ ಪತ್ನಿ ಶೃತಿ ಖರ್ಗೆ ಕಮಕನೂರಿನಲ್ಲಿ ಮತಯಾಚಿಸಿದರು. ಕೊಪ್ಪಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮರೇಶ ಕರಡಿ ಪರ ಅವರ ಪತ್ನಿ ಮಂಜುಳಾ ಮತಯಾಚಿಸಿದರು. ಕನಕಗಿರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶಿವರಾಜ ತಂಗಡಗಿ ಪರ ಪತ್ನಿ ವಿದ್ಯಾ ತಂಗಡಗಿ ಮತಯಾಚಿಸಿದರು.ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಕಾಂಗ್ರೆಸ್‌ ಅಭ್ಯರ್ಥಿ ಅಪ್ಪಾಜಿ ನಾಡಗೌಡರ ಪತ್ನಿ ಸುವರ್ಣಾ ರೋಡ್‌ಶೋನಲ್ಲಿ ಪಾಲ್ಗೊಂಡು ಪತಿ ಪರ ಪ್ರಚಾರ ನಡೆಸಿದರು.

ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿ ಅವರ ಪರ ಅವರ ಪತ್ನಿ ಪಲ್ಲವಿ ರವಿ, ಚಿಕ್ಕಮಗಳೂರು ಕಾಂಗ್ರೆಸ್‌ ಅಭ್ಯರ್ಥಿ ಬಿ.ಎಲ್‌. ಶಂಕರ್‌ ಪರ ಅವರ ಪತ್ನಿ ಮಲ್ಲಿಕಾ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಪ್ರಚಾರ ನಡೆಸಿದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.