CONNECT WITH US  

ಪ್ರಚಾರಕ್ಕೆ ಕಾಂಗ್ರೆಸ್‌, ಬಿಜೆಪಿಯಿಂದ ಮಕ್ಕಳ ಬಳಕೆ

ಪ್ರಚಾರ ಕಾರ್ಯಕ್ಕೆ ಮಕ್ಕಳನ್ನು ಬಳಸಿರುವುದು.

ಹನುಮಸಾಗರ: ಕಾಂಗ್ರೆಸ್‌ ಮತ್ತು ಬಿಜೆಪಿ ಎರಡೂ ಪಕ್ಷಗಳು ಪೈಪೋಟಿಗೆ ಬಿದ್ದು ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಳ್ಳುತ್ತಿರುವುದು ಕುಷ್ಟಗಿ ವಿಧಾನಸಭಾ ಕ್ಷೇತ್ರದ ಹನುಮಸಾಗರದಲ್ಲಿ ಗುರುವಾರ ಕಂಡು ಬಂತು.

ಎರಡೂ ಪಕ್ಷಗಳು ಮನೆಮನೆಗೆ ತೆರಳಿ ಬಿರುಸಿನ ಪ್ರಚಾರ ಕೈಗೊಂಡಿದ್ದು, ಬಿಸಿಲಿನ ಹೊಡೆತಕ್ಕೆ ದೊಡ್ಡವರು, ಕೂಲಿ ಕಾರ್ಮಿಕರು ಸಿಗದ ಕಾರಣ ಮಕ್ಕಳನ್ನು ಪೋಸ್ಟರ್‌, ಪಾಂಪ್ಲೆಂಟ್‌ ಹಂಚುವುದು, ಬ್ಯಾನರ್‌ ಕಟ್ಟಲು, ಮನೆಮನೆಗೆ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದು ಕಂಡು ಬಂತು.

ಗ್ರಾಮದಲ್ಲಿ 40 ಡಿಗ್ರಿಯಷ್ಟು ಬಿಸಿಲಿದೆ. ಇದರಿಂದ ರಾಜಕೀಯ ಪಕ್ಷಗಳ ಕಾರ್ಯಕರ್ತರು ಕಂಗಾಲಾಗಿದ್ದಾರೆ. ಬೆಳಗ್ಗೆ 6ಕ್ಕೆ ಪ್ರಚಾರ ಕೈಗೊಂಡು 11 ಗಂಟೆಯಾಗುವಷ್ಟರಲ್ಲಿ ಬಿಸಿಲಿನ ಝಳಕ್ಕೆ ಸುಸ್ತಾಗುತ್ತಿದ್ದಾರೆ. ಕಾರ್ಯಕರ್ತರು ಬಿಸಿಲಿಗೆ ಬೆದರಿ ಪ್ರಚಾರದಲ್ಲಿ ಅಷ್ಟಕ್ಕಷ್ಟೆ ಎಂಬಂತಾಗಿದೆ. ಹೀಗಾಗಿ ಮಕ್ಕಳನ್ನು ಕಡಿಮೆ ಕೂಲಿಗೆ ಕರೆದುಕೊಂಡು ತಾವು ಮಾಡುವ ಕೆಲಸವನ್ನು ಮಕ್ಕಳಿಂದ ಮಾಡಿಸುತ್ತಿರುವುದು ಬೆಳಕಿಗೆ ಬಂದಿದೆ.

Trending videos

Back to Top