CONNECT WITH US  

ಕಾಂಗ್ರೆಸ್‌ ವಿರುದ್ಧದ ಮುತಾಲಿಕ್‌ ಅರ್ಜಿ ವಜಾ

ನವದೆಹಲಿ: ಧರ್ಮದ ಆಧಾರದಲ್ಲಿ ಕಾಂಗ್ರೆಸ್‌ ಮತ ಯಾಚನೆ ಮಾಡುತ್ತಿದೆ ಎಂದು ಆರೋಪಿಸಿ ರಾಷ್ಟ್ರೀಯ ಹಿಂದೂ ಸೇನಾ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.

ಚುನಾವಣಾ ಪ್ರಕ್ರಿಯೆ ಆರಂಭವಾದ ಮೇಲೆ ಯಾವುದೇ ರೀತಿಯಲ್ಲಿ ನ್ಯಾಯಾಲಯಗಳು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹಿಂದಿನ ಸಂದರ್ಭಗಳಲ್ಲಿ ತೀರ್ಪು ನೀಡಲಾಗಿದೆ. ಅಲ್ಪಸಂಖ್ಯಾತ ಸಮುದಾಯದವರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲಗೊಳಿಸುತ್ತೇವೆಂದು ವಾಗ್ಧಾನ ಮಾಡುವುದು ಧರ್ಮದ ಆಧಾರದಲ್ಲಿ ಮತಯಾಚನೆ ಮಾಡಿದಂತಾಗುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠ ಹೇಳಿದೆ.

ಈ ಬಗ್ಗೆ ಮುತಾಲಿಕ್‌ ಚುನಾವಣಾ ಪ್ರಕ್ರಿಯೆ ಮುಕ್ತಾಯವಾದ ಬಳಿಕ ನ್ಯಾಯಾಂಗದ ಮೆಟ್ಟಿಲೇರಲು ಅವಕಾಶವಿದೆ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ. ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಅಲ್ಪಸಂಖ್ಯಾತರಿಗೆ ಆಶ್ವಾಸನೆಗಳನ್ನು ನೀಡುವ ಮೂಲಕ ಧರ್ಮದ ಆಧಾರದಲ್ಲಿ ಮತ ಯಾಚಿಸುತ್ತಿದೆ ಎಂದು ಮುತಾಲಿಕ್‌ ಆರೋಪಿಸಿದ್ದರು.


Trending videos

Back to Top