CONNECT WITH US  

ಆರ್‌.ಆರ್‌.ನಗರ ಮತದಾನ ಮುಂದೂಡಿಕೆ: ಬಿಜೆಪಿ ಸ್ವಾಗತ

ಬೆಂಗಳೂರು: ರಾಜರಾಜೇಶ್ವರಿನಗರ ಕ್ಷೇತ್ರದ ಮತದಾನ ಮುಂದೂಡಿರುವ ಚುನಾವಣ ಆಯೋಗದ ಕ್ರಮವನ್ನು ಬಿಜೆಪಿ ಸ್ವಾಗತಿಸಿದೆ.

 ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ ರಾವ್‌, ಚುನಾವಣಾ ಆಯೋಗವು ಉತ್ತಮ ಕ್ರಮ ಕೈಗೊಂಡಿದೆ. ಕಾಂಗ್ರೆಸ್‌ ಶಾಸಕರೇ ಹಗರಣದ ಸೂತ್ರಧಾರರಾಗಿದ್ದು, ಅವರ ಕೈವಾಡವಿದೆ. ಜಾಲಹಳ್ಳಿಯ ಫ್ಲ್ಯಾಟ್‌ನಲ್ಲಿ ಸಾವಿರಾರು ಮತದಾರರ ಗುರುತಿನ ಚೀಟಿ ಪತ್ತೆಯಾಗಿದ್ದು, ಕಾಂಗ್ರೆಸ್‌ ಅಕ್ರಮದಲ್ಲಿ ತೊಡಗಿರುವುದು ಕಂಡುಬಂದಿದೆ ಎಂದು ಹೇಳಿದರು.

ಹಣ, ಉಡುಗೊರೆಗಾಗಿ ತಂದಿದ್ದ ಸಾಕಷ್ಟು ವಸ್ತುಗಳು ಜಪ್ತಿಯಾಗಿವೆ. ಪ್ರಜಾಪ್ರಭುತ್ವವನ್ನು ಉಳಿಸುವ ಕೆಲಸವನ್ನು ಆಯೋಗ ಮಾಡಬೇಕಿದೆ. ಮತದಾರರ ಪಟ್ಟಿಗೆ ಹೆಚ್ಚುವರಿಯಾಗಿ ಸೇರ್ಪಡೆ ಬಗ್ಗೆ ತನಿಖೆ ನಡೆಸಬೇಕು. ರಾಜರಾಜೇಶ್ವರಿನಗರ ಮಾತ್ರವಲ್ಲದೇ ಎಲ್ಲೆಡೆ ಈ ರೀತಿ ನಡೆದಿರುವ ಸಾಧ್ಯತೆ ಇದ್ದು, ಆಯೋಗ ಈ ಬಗ್ಗೆ ಗಮನ ಹರಿಸಬೇಕು.  ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರು ಈ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆಯಿದ್ದು, ಇಡೀ ಚುನಾವಣೆಯನ್ನು ಕಟ್ಟುನಿಟ್ಟಾಗಿ ನಡೆಸಬೇಕು ಎಂದು ಆಗ್ರಹಿಸಿದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಪ್ರಜಾತಂತ್ರ ಉಳಿಸುವ ಕೆಲಸವನ್ನು ಚುನಾವಣ ಆಯೋಗ ಮಾಡಿದೆ. ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾಗಿರುವ ಮತಪಟ್ಟಿಯನ್ನು ಮರು ಪರಿಶೀಲಿಸಬೇಕು. ಜತೆಗೆ ಹೆಚ್ಚುವರಿ ಮತದಾರರ ಪಟ್ಟಿ ಬಗ್ಗೆಯೂ ಪರಿಶೀಲನೆ ನಡೆಸಬೇಕು. ಅಪರಾಧಿಗಳು ರಸ್ತೆಗಳಲ್ಲಿ ನಿರ್ಭಯವಾಗಿ ಓಡಾಡುತ್ತಿದ್ದಾರೆ. ಹೀಗಾಗಿ ಶಾಸಕ ಮುನಿರತ್ನ ಅವರನ್ನು ಬಂಧಿಸಬೇಕು. ಕೋರ್ಟ್‌ ಸೂಚನೆಯನ್ನು ಆಯೋಗ ಪಾಲಿಸಬೇಕು. ಮತದಾರರ ಗುರುತಿನ ಚೀಟಿ ಪತ್ತೆಯಾದ ದಿನದಂದು ತಡರಾತ್ರಿ ಕಾಂಗ್ರೆಸ್‌ ಮುಖಂಡ ರಣದೀಪ್‌ ಸಿಂಗ್‌ ಸುಜೇìವಾಲಾ ಪತ್ರಿಕಾಗೋಷ್ಠಿ ನಡೆಸಿದ್ದರು. ಇದೀಗ ಯಾಕೆ ಕಾಂಗ್ರೆಸ್‌ ನಾಯಕರು ಹೇಳಿಕೆ ನೀಡುತ್ತಿಲ್ಲ ಎಂದು ಕುಟುಕಿದರು.   

Trending videos

Back to Top