ಉತ್ತರ ಕನ್ನಡ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾ‌ನೆಗೆ ಹಿನ್ನಡೆ

Team Udayavani, Nov 10, 2017, 2:06 PM IST

10-23.jpg

ಕುಮಟಾ: ಪರಿಸರವಾದಿಗಳ ವಿರೋಧಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಎಷ್ಟೋ ಬೃಹತ ಕೈಗಾರಿಕೆಗಳು ಸ್ಥಾಪನೆಯಾಗದೆ ಹಿನ್ನಡೆಗೆ ಕಾರಣವಾಗಿದೆ. ಜಿಲ್ಲೆಯ ಕೈಗಾರಿಕಾ ಕ್ಷೇತ್ರ ಹಿಂದುಳಿದಿದೆ ಎಂದು ರಾಜ್ಯ ಮೀನುಗಾರಿಕೆ ನಿಗಮದ ಅಧ್ಯಕ್ಷ ರಾಜೇಂದ್ರ ನಾಯಕ ಅಭಿಪ್ರಾಯಪಟ್ಟರು.

ಅವರು ಪಟ್ಟಣದ ಹವ್ಯಕ ಸಭಾಭವನದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಉದ್ಯೋಗ ಮಿತ್ರ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಕಾರವಾರ, ಕಾನ್‌ ಫೆಡರೇಶನ್‌ ಆಫ್‌ ಇಂಡಿಯನ್‌ ಇಂಡಸ್ಟ್ರಿ, ಸಣ್ಣ ಕೈಗಾರಿಕೆಗಳ ಸಂಘದ ಆಶ್ರಯದಲ್ಲಿ ಸರಬರಾಜುದಾರರ ಅಭಿವೃದ್ಧಿ ಮತ್ತು ಹೂಡಿಕೆದಾರರ ಶೃಂಗ ಸಭೆಯ ಪ್ರಯುಕ್ತ ಗುರುವಾರ ನಡೆದ ಉತ್ತರ ಕನ್ನಡದ ರೋಡ್‌ ಶೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಣ್ಣ, ಮಧ್ಯಮ ಹಾಗೂ ಕೆಲ ಬೃಹತ್‌ ಕೈಗಾರಿಕೆಯನ್ನು ತರಲು ಸಾಕಷ್ಟು ಅವಕಾಶಗಳಿದ್ದರೂ ಪರಿಸರವಾದಿಗಳ ವಿರೋಧದ ಕಾರಣಕ್ಕೆ ಸಾಕಷ್ಟು ಹಿನ್ನಡೆಯಾಗಿದ್ದು ಸತ್ಯ. ಜಿಲ್ಲೆಯ ಉತ್ತಮ ಶ್ರೇಷ್ಠ ಪರಿಸರ ಒಂದು ರೀತಿ ವರವೂ ಹೌದು, ಆದರೆ ಬೃಹತ್‌ ಕೈಗಾರಿಕೆಗಳ ಅನುಷ್ಠಾನಕ್ಕೆ ಶಾಪವೂ ಆದಂತಾಗಿದೆ. ಪರಿಸರ ಪೂರಕ ಕೈಗಾರಿಕೆಗಳೂ ಅನುಷ್ಠಾನವಾಗುತ್ತಿಲ್ಲ.

ಜಿಲ್ಲೆಗೆ ಕೈಗಾರಿಕೆಗಳು ಬಂದಿದ್ದರೆ ಇಲ್ಲಿನ ಶಿಕ್ಷಣ ಪಡೆದ ಯುವ ಜನತೆಗೆ ಇಲ್ಲಿಯೇ ಉದ್ಯೋಗ ಸಾಧ್ಯವಾಗುತ್ತಿತ್ತು. ಅಂಕೋಲಾಕ್ಕೆ ಒಮ್ಮೆ ಬಂದಿದ್ದ ಟಾಟಾ ಸ್ಟೀಲ್‌ ಕಂಪನಿಯನ್ನು ಡೋಂಗಿ ಪರಿಸರವಾದಿಗಳು ವಿರೋಧಿಸಿದ್ದರು. ಒಂದೊಮ್ಮೆ ಆ ಕಂಪನಿ ಅಂಕೋಲಾದಲ್ಲಿ ಸ್ಥಾಪನೆಯಾಗಿದ್ದರೆ ಜಿಲ್ಲೆಯ ಚಿತ್ರಣವೇ ಬದಲಾಗುತ್ತಿತ್ತು ಎಂದರು.

ಜಿಲ್ಲೆಯಲ್ಲಿ ತಾಂತ್ರಿಕ ಶಿಕ್ಷಣ ಪಡೆದ ಯುವಕರಿಗೆ ಈ ಜಿಲ್ಲೆಯಲ್ಲೇ ಉದ್ಯೋಗ ಅವಕಾಶಗಳಿಲ್ಲ. ನಿಜವಾಗಿಯೂ ಪರಿಸರಕ್ಕೆ ತೊಂದರೆಯಾಗುವಲ್ಲಿ ನಾವೂ ಹೋರಾಡುತ್ತೇವೆ. ಆದರೆ ಸ್ವಾರ್ಥಕ್ಕಾಗಿ ಪರಿಸರದ ನೆಪವೊಡ್ಡಿ ಜಿಲ್ಲೆಯ ಉನ್ನತಿಗೆ ಹಿನ್ನಡೆಯಾಗಿರುವುದು ವಿಷಾದನೀಯ ಎಂದರು. ತಾಪಂ ಅಧ್ಯಕ್ಷ ವಿಜಯಾ ಪಟಗಾರ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ರತ್ನಾಕರ ನಾಯ್ಕ, ಸಹಾಯಕ ಆಯುಕ್ತ ಲಕ್ಷಿಪ್ರಿಯಾ, ಛೇಂಬರ್‌ ಆಫ್‌ ಕಾಮರ್ಸ್‌ ಅಧ್ಯಕ್ಷ ಜಿ.ಜಿ. ಹೆಗಡೆ ಕಡೇಕೋಡಿ, ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಜಿ.ವಿ. ಜೋಶಿ, ಬಸವರಾಜ್‌ ಜವಳಿ, ಅರುಣ ಪಡಿಯಾರ್‌ ಮತ್ತಿತರರು ಹಾಜರಿದ್ದರು.

ಜಂಟಿ ನಿರ್ದೇಶಕ ರಮಾನಂದ ನಾಯಕ ಸ್ವಾಗತಿಸಿದರು. ಜಿಲ್ಲಾ ಕೈಗಾರಿಕಾ ವಿಸ್ತರಣಾಧಿಕಾರಿ ನಾಗರಾಜ ನಾಯಕ
ನಿರ್ವಹಿಸಿದರು.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.