ಜಿಲ್ಲೆಯಲ್ಲಿ ಭೂಗರ್ಭ ಜಲಮಟ್ಟ ಕುಸಿತ


Team Udayavani, May 21, 2018, 2:40 AM IST

20ksde6.jpg

ಕಾಸರಗೋಡು: ವರ್ಷ ದಿಂದ ವರ್ಷಕ್ಕೆ ನೀರಿನ ಬಳಕೆ ಅಧಿಕ ವಾಗುತ್ತಿರುವುದರಿಂದ ಭೂಗರ್ಭ ಜಲ ಮಟ್ಟ ಕುಸಿಯುತ್ತಿದೆ ಎಂದು ಸಂಬಂಧಪಟ್ಟ ಇಲಾಖೆ ವರದಿಯಲ್ಲಿ ಬಹಿರಂಗಗೊಳಿಸಿದೆ. ಕಾಸರಗೋಡು ಭೂಗರ್ಭ ಜಲ ಇಲಾಖೆ ಕಳೆದ 10 ವರ್ಷಗಳಿಂದ ಸಂಗ್ರಹಿಸಿದ ಅಂಕಿಅಂಶದಲ್ಲಿ ಕಾಸರಗೋಡು ಜಿಲ್ಲೆಯ ವಿವಿಧ ವಲಯಗಳಲ್ಲಿ ಭೂಗರ್ಭ ಜಲಮಟ್ಟ ಕುಸಿಯುತ್ತಿದೆ ಎಂಬುದನ್ನು  ಸೂಚಿಸುತ್ತಿದೆ. ಇದೇ ಸಂದರ್ಭದಲ್ಲಿ ಪ್ರಸ್ತುತ ವರ್ಷ 950 ಕೊಳವೆ ಬಾವಿ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.

ಅಜಾನೂರು, ನೀಲೇಶ್ವರ, ಬದಿಯಡ್ಕ, ಕುಂಬಾxಜೆ, ಪೈವಳಿಕೆ, ಎಣ್ಮಕಜೆ, ವರ್ಕಾಡಿ, ಕಳ್ಳಾರು, ಪನತ್ತಡಿ ಮೊದಲಾದ ವಲಯಗಳಲ್ಲಿ ನಿರಂತರವಾಗಿ ಭೂಗರ್ಭ ಜಲ ಮಟ್ಟ ಕುಸಿಯುತ್ತಿದೆಯೆಂದು ಕಂಡುಕೊಳ್ಳಲಾಗಿದೆ. 2008ರಿಂದ 2018ರ ಮೇ ತಿಂಗಳ ವರೆಗೆ ದಾಖಲಿಸಿಕೊಂಡ ಅಂಕಿ ಅಂಶಗಳಲ್ಲಿ ಈ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗುತ್ತಿದೆ. ಆದರೆ ಕಾರಡ್ಕ, ಬೇಡಗ, ಕೊಳತ್ತೂರು, ಕುಟ್ಟಿಕ್ಕೋಲ್‌, ಮುಳಿಯಾರು, ಚೆಮ್ನಾಡ್‌ ಉಪ್ಪಳ, ವೆಸ್ಟ್‌ ಎಳೇರಿ, ಈಸ್ಟ್‌ ಎಳೇರಿ ಮೊದಲಾದೆಡೆ ಸಂಗ್ರಹಿಸಿದ ಅಂಕಿಅಂಶದಂತೆ ಭೂಗರ್ಭ ಜಲ ಪ್ರಮಾಣ ಸ್ವಲ್ಪ ಮಟ್ಟಿಗೆ ಹೆಚ್ಚಳವಿದೆ ಎಂದು ತಿಳಿಯಲಾಗಿದೆ. ಆದರೆ ಈ ಜಲ ಮಟ್ಟ ದೊಡ್ಡ ಮಟ್ಟದ ಹೆಚ್ಚಳವಲ್ಲ. ಒಟ್ಟು  ಅಂಕಿಅಂಶ ಸೂಚಿಸುವುದೆಂದರೆ ಭೂಗರ್ಭ ಜಲ ಮಟ್ಟ ಕುಸಿಯುತ್ತಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಭೂಗರ್ಭ ಜಲ ಮಟ್ಟ ಮೈನಸ್‌ ಆರು ಮೀಟರ್‌ ವರೆಗೆ ಕುಸಿದ ಸ್ಥಳವೂ ಇದೆ. ಆದರೆ ಭೂಗರ್ಭ ನೀರು ಹೆಚ್ಚಳ ಕಂಡು ಬಂದಲ್ಲಿ ಒಂದು ಮೀಟರ್‌ಗಿಂತ ಅಧಿಕ ಏರಿಲ್ಲ ಎಂದು ಭೂಗರ್ಭ ಜಲ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.

ಜಿಲ್ಲೆಯಲ್ಲಿ ಭೂಗರ್ಭ ಜಲ ಇಲಾಖೆಗೆ ಕೊಳವೆ ಬಾವಿ ಸಹಿತ 70 ಬಾವಿಗಳು ವೀಕ್ಷಿಸಲು ಇವೆ. ಈ ಬಾವಿಗಳಿಂದ ನೀರಿನ ಪ್ರಮಾಣ ಕಂಡುಕೊಳ್ಳಲಿರುವುದರಿಂದ ನೀರನ್ನು ಪಂಪ್‌ ಮಾಡುವುದಿಲ್ಲ. ಡೀಪ್‌ ಮೀಟರ್‌ ಬಳಸಿ ಜಲ ಮಟ್ಟವನ್ನು ಅಳೆಯಲಾಗುತ್ತಿದೆ. ಪ್ರತೀ ತಿಂಗಳೂ ಭೂಗರ್ಭ ಜಲ ಇಲಾಖೆ ನೀರಿನ ಮಟ್ಟವನ್ನು ಅಳೆಯುತ್ತದೆ.

ವರ್ಷದಿಂದ ವರ್ಷಕ್ಕೆ ಕಾಸರಗೋಡು ಜಿಲ್ಲೆಯಲ್ಲಿ ಕಟ್ಟಡಗಳ ಸಂಖ್ಯೆ ಹೆಚ್ಚಳ ವಾಗುತ್ತಿದ್ದು, ಅರಣ್ಯ ಪ್ರದೇಶ ಮತ್ತು ಜಲಾಶಯಗಳು ಕಡಿಮೆಯಾಗುತ್ತಿವೆ. ಇದರಿಂದಾಗಿ ಭೂಮಿಯೊಳಗೆ ಸಹಜವಾಗಿ (ನ್ಯಾಚುರಲ್‌ ರೀ ಚಾರ್ಜಿಂಗ್‌) ನೀರು ಸಾಗುವುದಿಲ್ಲ. ಆದರೆ ಅದೇ ವೇಳೆ ನೀರಿನ ಬಳಕೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಹೋಗುತ್ತಿದೆ. ಇದರಿಂದಾಗಿ ಭೂಗರ್ಭ ಜಲಸಂಪತ್ತು ಕುಸಿಯುತ್ತಲೇ ಸಾಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಇಂಗು ಗುಂಡಿಗಳು, ಚೆಕ್‌ ಡ್ಯಾಂಗಳು, ತಡೆಗೋಡೆ, ಬಾವಿ ರೀಚಾರ್ಜಿಂಗ್‌ ನಿರ್ಮಿಸುವ ಮೂಲಕ ನೀರು ಸಂಗ್ರಹಿಸಲು ಸಾಧ್ಯವಾಗುವುದು ಎಂದು ಅಧಿಕಾರಿಗಳು ಭರವಸೆ ನೀಡುತ್ತಿದ್ದಾರೆ.

2006ರಲ್ಲಿ ಜಾರಿಗೆ ಬಂದ ಭೂಗರ್ಭ ಕಾಯ್ದೆ ಪ್ರಕಾರ ಭೂಗರ್ಭ ಜಲ ಕುಸಿಯುತ್ತಿರುವ ಸ್ಥಳಗಳ ಯಾದಿಯಲ್ಲಿ ಕಾಸರಗೋಡು ಸಹ ಸೇರ್ಪಡೆಗೊಂಡಿದೆ. ಇದರಂತೆ ಕಾಸರಗೋಡು ನಗರಸಭೆ, ಮಧೂರು, ಮೊಗ್ರಾಲ್‌ಪುತ್ತೂರು, ಚೆಂಗಳ, ಚೆಮ್ನಾಡ್‌, ಬೇಡಗ, ಕಾರಡ್ಕ, ಮುಳಿಯಾರು, ಕುಟ್ಟಿಕ್ಕೋಲ್‌, ದೇಲಂಪಾಡಿ ಮೊದಲಾದ ಸ್ಥಳಗಳೂ ಈ ಕಾಯ್ದೆಯಲ್ಲಿ ಒಳಗೊಂಡಿವೆೆ. ಈ ಸ್ಥಳಗಳಲ್ಲಿ ಕೊಳವೆ ಬಾವಿ ಕೊರೆಯಲು ಭೂಗರ್ಭ ಜಲ ಇಲಾಖೆಯ ಅನುಮತಿ ಬೇಕು. ಆದರೆ ಯಾವುದೇ ಅನುಮತಿ ಪಡೆಯದೆ ಜಿಲ್ಲೆಯ ವಿವಿಧೆಡೆಗಳಲ್ಲಿ ಕೊಳವೆ ಬಾವಿ ಕೊರೆಯಲಾಗುತ್ತಿದೆ.

– ಪ್ರದೀಪ್‌ ಬೇಕಲ್‌

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.