ಅಂತ್ಯೋದಯ ಎಕ್ಸ್‌ಪ್ರೆಸ್‌: ತೀವ್ರಗೊಂಡ ಹೋರಾಟ

Team Udayavani, Jun 23, 2018, 6:00 AM IST

22ksde22.jpg

ಕಾಸರಗೋಡು: ಮಂಗಳೂರು-ಕೊಚ್ಚುವೇಲಿ ಅಂತ್ಯೋದಯ ಎಕ್ಸ್‌ಪ್ರೆಸ್‌ ರೈಲುಗಾಡಿಗೆ ಕಾಸರಗೋಡಿನಲ್ಲಿ ನಿಲುಗಡೆ ನೀಡದೆ ಇರುವ ರೈಲು ಇಲಾಖೆಯ ನಿಲುವಿನ ವಿರುದ್ಧ ಕಾಸರಗೋಡಿನಲ್ಲಿ ತಲೆಯೆತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ.

ಇದರಂತೆ ಮುಸ್ಲಿಂ ಲೀಗ್‌ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ಕಾಸರಗೋಡು ರೈಲು ನಿಲ್ದಾಣದಲ್ಲಿ ಅಂತ್ಯೋದಯ ಎಕ್ಸ್‌ ಪ್ರಸ್‌ ರೈಲುಗಾಡಿಯನ್ನು ದಿಢೀರ್‌ ಆಗಿ ತಡೆಯಲಾಗಿದೆ. ಈ ರೈಲು ಶುಕ್ರವಾರ ಬೆಳಗ್ಗೆ ಮಂಗಳೂರಿನತ್ತ ಸಾಗುತ್ತಿದ್ದ ವೇಳೆ ಕಾಸರಗೋಡು ರೈಲು ನಿಲ್ದಾಣಕ್ಕೆ ತಲುಪಿದಾಗ ಅದರಲ್ಲಿ ಪ್ರಯಾಣಿಸುತ್ತಿದ್ದ ಕಾಸರಗೋಡು ಶಾಸಕ ಎನ್‌.ಎ. ನೆಲ್ಲಿಕುನ್ನು ಅಪಾಯ ಸೂಚಕ ಚೈನ್‌ ಎಳೆದಿದ್ದಾರೆ. 

ತತ್‌ಕ್ಷಣ ರೈಲು ನಿಂತಿದ್ದು ಆ ವೇಳೆ ಮುಸ್ಲಿಂ ಲೀಗ್‌ ಮತ್ತು ಯೂತ್‌ ಲೀಗ್‌ ನೇತಾರರಾದ ಶಾಸಕ ಪಿ.ಬಿ. ಅಬ್ದುಲ್‌ ರಝಾಕ್‌, ನಗರಸಭಾಧ್ಯಕ್ಷೆ ಬಿಫಾತಿಮಾ ಇಬ್ರಾಹಿಂ, ಎ.ಅಹಮ್ಮದ್‌ ಹಾಜಿ, ಮೂಸಾ ಬಿ.ಚೆರ್ಕಳ, ಮಾಹಿನ್‌ ಕೇಳ್ಳೋಟ್‌, ಎ.ಅಬ್ದುಲ್‌ ರಹಿಮಾನ್‌, ಎ.ಎಂ. ಕಡವತ್‌, ಅಬ್ದುಲ್ಲ ಕುಂಞಿ ಚೆರ್ಕಳ, ಅಶ್ರಫ್‌ ಎಡನೀರು, ಟಿ.ಡಿ. ಕಬೀರ್‌ ಮೊದಲಾದವರ ನೇತೃತ್ವದಲ್ಲಿ ಕಾರ್ಯ ಕರ್ತರು ರೈಲನ್ನು ಅರ್ಧ ಗಂಟೆ ಕಾಲ ತಡೆದು ನಿಲ್ಲಿಸಿದರು.
ಹಗಲು ಪ್ರಯಾಣಿಕರ ಸೌಕರ್ಯಾರ್ಥ ಅಂತ್ಯೋದಯ ಎಕ್ಸ್‌ ಪ್ರಸ್‌ ರೈಲು ಗಾಡಿಯನ್ನು ಮಂಜೂರು ಮಾಡಲಾಗಿದೆ. 

ಆದರೆ ಕಣ್ಣೂರು ಬಳಿಕ ಈ ರೈಲಿಗೆ ಮಂಗಳೂರಿನಲ್ಲಿ ಮಾತ್ರವೇ ನಿಲುಗಡೆ ನೀಡಲಾಗಿದೆ. ಜಿಲ್ಲಾ ಕೇಂದ್ರವಾದ ಕಾಸರಗೋಡಿನಲ್ಲಿ ನಿಲುಗಡೆ ನೀಡಬೇಕಾಗಿದ್ದರೂ ಅದನ್ನು ಅವಗಣಿಸಲಾಗಿದೆ. ಇದು ರೈಲು ಇಲಾಖೆ ಕಾಸರಗೋಡಿನ ಬಗ್ಗೆ ತೋರುತ್ತಿರುವ ನಿರಂತರ ಅವಗಣೆಗೆ ಸ್ಪಷ್ಟ ನಿದರ್ಶನವೆಂದು ಲೀಗ್‌ ನೇತಾರರು ಆರೋಪಿಸಿದ್ದಾರೆ.

ಕಾಸರಗೋಡು ಅವಗಣಿಸುತ್ತಿರುವ ರೈಲ್ವೇ ಇಲಾಖೆಯ ಇಂತಹ ನೀತಿಯನ್ನು ಪ್ರತಿಭಟಿಸಿ, ಕಾಂಗ್ರೆಸ್‌, ಸಿಪಿಎಂ, ಬಿಜೆಪಿ ಮತ್ತು ಸಿಪಿಐ ಕೂಡಾ ಹೋರಾಟಕ್ಕಿಳಿದಿದೆ. ಇದೇ ಬೇಡಿಕೆ ಮುಂದಿರಿಸಿಕೊಂಡು ಎಐವೈಎಫ್‌ ನೇತೃತ್ವದಲ್ಲಿ ಈಗಾಗಲೇ ಕಾಸರಗೋಡು ರೈಲು ನಿಲ್ದಾಣಕ್ಕೆ ಜಾಥಾ ನಡೆಯಲಿದೆ. ಸಂಸದ ಪಿ. ಕರುಣಾಕರನ್‌ ಜು. 1ರಿಂದ ಕಾಸರಗೋಡು ರೈಲು ನಿಲ್ದಾಣದಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭಿಸುವ ತೀರ್ಮಾನವನ್ನು ತೆಗೆದು ಕೊಂಡಿದ್ದಾರೆ. ಇತರ ಹಲವು ಸಂಘಟನೆಗಳೂ ಇದೇ ಬೇಡಿಕೆಯನ್ನು ಮುಂದಿರಿಸಿ ಚಳವಳಿ ಆರಂಭಿಸಿವೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.