ತಟ್ಟೆಕೆರೆ ಸಮಸ್ಯೆ ನಿವಾರಣೆಗೆ ಅರಣ್ಯಾಧಿಕಾರಿಗಳ ಸಭೆ 


Team Udayavani, Jun 24, 2018, 6:50 AM IST

z-dc-meeting-3.jpg

ಮಡಿಕೇರಿ: ವಿರಾಜಪೇಟೆ ತಾಲೂಕಿನ ತಟ್ಟೆಕೆರೆಯು ಶೀತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ವಾಸ ಮಾಡಲು ಯೋಗ್ಯವಿಲ್ಲ ಎಂಬುದು ಕೇಳಿಬರುತ್ತಿರುವ ಹಿನ್ನೆಲೆ, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ತಟ್ಟೆಕೆರೆಯಲ್ಲಿ ಶೀಘ್ರ ಸಭೆ ಆಹ್ವಾನಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ನಿರ್ದೇಶ ನೀಡಿದ್ದಾರೆ.    
 
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮಾಜ ನಿವೇಶನ ರಹಿತ ಕುಟುಂಬಗಳ ಪಟ್ಟಿ ನೀಡುವಂತೆ ಹಲವು ಸಭೆಗಳಲ್ಲಿ ತಿಳಿಸಲಾಗಿದೆ. ಆದರೆ ಇನ್ನೂ ಸಮರ್ಪಕ ಮಾಹಿತಿ ಒದಗಿಸಿಲ್ಲ ಎಂದ ಜಿಲ್ಲಾಧಿಕಾರಿ ಅವರು, ಈಗಾಗಲೇ 94ಸಿ ಮತ್ತು 94ಸಿಸಿ ರಡಿ ನಿವೇಶನ ಹಂಚಿಕೆ ಹೊರತುಪಡಿಸಿ, ಉಳಿದಂತೆ ನಿವೇಶನ ರಹಿತರ ಪಟ್ಟಿ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.  

ಜಿಲೆಯ ಹಲವು ಕಡೆಗಳಲ್ಲಿ ಪರಿಶಿಷ್ಟರಿಗೆ ನಿವೇಶನ, ಸ್ಮಶಾನ ಭೂಮಿ, ರಸ್ತೆ ಹಾಗೂ ಮೂಲಸೌಲಭ್ಯ ಕಲ್ಪಿಸುವ ಸಂಬಂಧ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಪ ವಿಭಾಗಾಧಿಕಾರಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು. ಜಿ.ಪಂ.ಸಿಇಒ ಪ್ರಶಾಂತ್‌ ಕುಮಾರ್‌ ಮಿಶ್ರ ಅವರು ನಿವೇಶನ ರಹಿತರಿಗೆ ನಿವೇಶನ, ಸ್ಮಶಾನ ಭೂಮಿ, ಹಾಗೆಯೇ ಅಗತ್ಯ ಮೂಲಸೌಲಭ್ಯ ಒದಗಿಸಲು ಮುಂದಾಗಬೇಕಿದೆ. ಗ್ರಾಮ ಸಭೆಗಳಲ್ಲಿ ನಿವೇಶನ ರಹಿತರ ಪಟ್ಟಿ ದೊರೆಯಲಿದ್ದು, ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮಸಭೆಗಳಿಗೆ ತೆರಳಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮಾಜದ ನಿವೇಶನ ರಹಿತರ ಪಟ್ಟಿ ಪಡೆಯುವಂತೆ ಅವರು ಸಲಹೆ ಮಾಡಿದರು.

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಪಳನಿ ಪ್ರಕಾಶ ಮತ್ತು ಮುತ್ತಪ್ಪ ಅವರು ಮಾತನಾಡಿ ವಿರಾಜಪೇಟೆ ತಾಲ್ಲೂಕಿನ ತಟ್ಟೆಕೆರೆ ಗಿರಿಜನ ಹಾಡಿಯಲ್ಲಿ ಸುಮಾರು 45 ಕುಟುಂಬಗಳು ಬಹಳ ಹಿಂದಿನಿಂದಲೂ ವಾಸ ಮಾಡುತ್ತಿವೆ. ಆದರೆ ಈ ಪ್ರದೇಶವು ಶೀತದಿಂದ ಕೂಡಿದ್ದು, ವಾಸ ಮಾಡಲು ಸೂಕ್ತ ನಿವೇಶನ ಕೊಡಿಸಬೇಕಿದೆ ಎಂದು ಅವರು ಮನವಿ ಮಾಡಿದರು.  

ಸಮಿತಿ ಸದಸ್ಯರಾದ ಜೆ.ಪಿ.ರಾಜು ಅವರು ಮಾತನಾಡಿ ವಿರಾಜಪೇಟೆ ತಾಲ್ಲೂಕಿನ ಕಾನೂರು ಗ್ರಾ.ಪಂ.ವ್ಯಾಪ್ತಿಯ ಗೋಣಿಗದ್ದೆಯಲ್ಲಿ ರಸ್ತೆ ನಿರ್ಮಾಣ ಮಾಡಬೇಕಿದೆ. ಈ ಹಾಡಿಗೆ ಓಡಾಡಲು ತುಂಬಾ ತೊಂದರೆಯಾಗಿದೆ ಎಂದು ಅವರು ಸಭೆಯ ಗಮನಕ್ಕೆ ತಂದರು. ಸಮಿತಿ ಸದಸ್ಯರಾದ ನವೀನ್‌ ದೇರಳ, ಸುಕುಮಾರ್‌, ಜಾಯ್ಸ ಮೇನೆಜಸ್‌ ಅವರು ಹಲವು ವಿಚಾರಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್‌, ಉಪ ವಿಭಾಗಾಧಿಕಾರಿ ರಮೇಶ್‌ ಪಿ.ಕೋನರೆಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಾಯಾದೇವಿ ಗಲಗಲಿ, ಐಟಿಡಿಪಿ ಇಲಾಖೆ ಅಧಿಕಾರಿ ಶಿವಕುಮಾರ್‌, ಜಿ.ಪಂ.ಉಪ ಕಾರ್ಯದರ್ಶಿ ಶ್ರೀಕಂಠಮೂರ್ತಿ, ಕಾರ್ಮಿಕ  ಇಲಾಖೆ ಅಧಿಕಾರಿ ರಾಮಕೃಷ್ಣ, ಲೋಕೋಪಯೋಗಿ ಎಂಜಿನಿಯರ್‌ ವಿನಯ ಕುಮಾರ್‌, ತಹಶೀಲ್ದಾರರಾದ ಶಾರಾದಾಂಬಾ‌, ಬಾಡ್ಕರ್‌, ತಾ.ಪಂ.ಇಒಗಳಾದ ಚೆಟ್ಟಿಯಪ್ಪ, ಜೀವನ್‌ ಕುಮಾರ್‌ ಹಲವು ಮಾಹಿತಿ ನೀಡಿದರು

ಕಾಲನಿಗಳಿಗೆ ಯೋಗ್ಯ ರಸ್ತೆಗಳಿಲ್ಲ 
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ವಾಸಿಸುವ ಕಾಲನಿ ಹಾಗೂ ಹಾಡಿಗಳಿಗೆ ತೆರಳಲು ಯೋಗ್ಯ ರಸ್ತೆಗಳು ಇಲ್ಲ, ಆದ್ದರಿಂದ ರಸ್ತೆ ನಿರ್ಮಾಣ ಮಾಡಬೇಕು. ಹತ್ತಿರದಲ್ಲಿ ಶಾಲೆ-ಅಂಗನವಾಡಿಗಳನ್ನು ತೆರೆಯಬೇಕು ಎಂದು ಪಳನಿ ಪ್ರಕಾಶ ಮತ್ತು ಮುತ್ತಪ್ಪ ಅವರು ಕೋರಿದರು.  ವಿರಾಜಪೇಟೆ ಸ್ಥಳೀಯ ಸಂಸ್ಥೆಯಲ್ಲಿ ದಿನಗೂಲಿ ಪೌರಕಾರ್ಮಿಕರಿಗೆ ಸಂಬಳ ದೊರೆತ್ತಿಲ್ಲ, ಈಗಾಗಲೇ ತಮ್ಮ ಗಮನಕ್ಕೆ ತರಲಾಗಿದ್ದು, ಇದುವರೆಗೆ ಯಾವುದೇ ಕ್ರಮ ಆಗಿಲ್ಲ ಎಂದು ಪಳನಿ ಪ್ರಕಾಶ ಅವರು ಹೇಳಿದರು.  ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣವಿದ್ದು, ನ್ಯಾಯಾಲಯದಲ್ಲಿ ನಿರ್ಧಾರವಾದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. 

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.