ದ್ರಾವಿಡ ಸಮ್ಮೇಳನದಲ್ಲಿ ತುಳುಭಾಷೆಯ ನಿರ್ಲಕ್ಷ್ಯಕ್ಕೆ ಆಕ್ರೋಶ

Team Udayavani, Aug 24, 2018, 1:35 AM IST

tulunad-flag-600.jpg

ತುಳುಭಾಷೆಗೆ ತನ್ನದೇ ಆದ ಸ್ವತಂತ್ರ ಲಿಪಿಯಿದ್ದು, ಹಲವಾರು ಕೃತಿಗಳು, ಗ್ರಂಥಗಳು ರಚಿತವಾಗಿದೆ. ಹಾಗೆಯೇ ತುಳು ಲಿಪಿ ಸಾರ್ವತ್ರಿಕವಾಗಿ ಪ್ರಚಲಿತಗೊಳ್ಳುತ್ತಿದೆ. ಅಲ್ಲದೆ ಪಂಚ ದ್ರಾವಿಡ ಭಾಷೆಯಲ್ಲಿ ತುಳು ಕೂಡ ಪ್ರಧಾನ ಭಾಷೆಯಾಗಿದೆ. ತುಳುಭಾಷೆಯಲ್ಲಿ ಇಷ್ಟೆಲ್ಲಾ ಬೆಳವಣಿಗೆ ನಡೆದಿದ್ದರೂ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ನಮ್ಮದೇ ನೆಲದಲ್ಲಿ ದ್ರಾವಿಡ ಸಮ್ಮೇಳನ ಮಾಡುತ್ತಿರುವಾಗ ತುಳು ಭಾಷೆಯ ಬಗ್ಗೆ ಪ್ರಸ್ತಾವಿಸದಿರುವುದು ತುಳುವರಿಗೆ ತೀವ್ರ ನೋವು ಮತ್ತು ಸಂದೇಹವನ್ನುಂಟುಮಾಡಿದೆ.

ಕಾಸರಗೋಡು: ಕನ್ನಡ ಅಭಿವೃದ್ಧಿ ಪ್ರಾಧಿಕಾರವು ನವಂಬರ್‌ ತಿಂಗಳಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿರುವ ದ್ರಾವಿಡ ಸಮ್ಮೇಳನದಲ್ಲಿ ತುಳು ಭಾಷೆಯ ಹೆಸರನ್ನು ಉಲ್ಲೇಖೀಸದೆ ನಿರ್ಲಕ್ಷಿಸಲಾಗಿದೆಯೆಂದು ತುಳುವರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂಚ ದ್ರಾವಿಡ ಭಾಷೆಗಳೆಂದೇ ಖ್ಯಾತಿಗಳಿಸಿದ ತುಳು, ಕನ್ನಡ, ತಮಿಳು, ತೆಲುಗು, ಮಲೆಯಾಳ ಭಾಷೆಗಳು ದಕ್ಷಿಣ ಭಾರತದ ದ್ರಾವಿಡ ಸಂಸ್ಕೃತಿಯ ಪ್ರತೀಕ. ಕನ್ನಡ, ತಮಿಳು, ತೆಲುಗು, ಮಲೆಯಾಳ ಭಾಷೆಗಳಿಗೆ ಪ್ರತ್ಯೇಕ ಆಡಳಿತ ರಾಜ್ಯಗಳಿದ್ದರೂ ತುಳು ಭಾಷೆಯು ಕರ್ನಾಟಕದ ಇನ್ನೊಂದು ಪ್ರಧಾನ ಭಾಷೆಯಾಗಿ ಬೆಳೆದಿದೆ.

ತುಳು ಭಾಷೆಯು ಕರ್ನಾಟಕದಲ್ಲಿ ಇಂದು ಹತ್ತನೆ ತರಗತಿಯವರೆಗೆ ಕಲಿಯಬಹುದಾಗಿದ್ದು, ಎಂ.ಎ. ಮತ್ತು ಡಿಪ್ಲೋಮಾ ಕೋರ್ಸುಗಳೂ ಪ್ರಾರಂಭವಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯ, ಕಣ್ಣೂರು ವಿಶ್ವವಿದ್ಯಾನಿಲಯ, ಕುಪ್ಪಂ ವಿಶ್ವವಿದ್ಯಾನಿಲಯ ಮತ್ತು ನಿಟ್ಟೆ ವಿಶ್ವವಿದ್ಯಾನಿಲಯಗಳಲ್ಲಿ ಅಧ್ಯಯನ ಪೀಠ ಪ್ರಾರಂಭವಾಗಿದೆ. ಕೇರಳ ಮತ್ತು ಕರ್ನಾಟಕದಲ್ಲಿ ಪ್ರತ್ಯೇಕ ತುಳು ಆಕಾಡೆಮಿಗಳೂ ಪ್ರಾರಂಭಗೊಂಡಿವೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ತನ್ನ ಜಾಣ ಕುರುಡುತನವನ್ನು ಪ್ರಾರಂಭದಲ್ಲೇ ಸರಿಪಡಿಸಿಕೊಳ್ಳುವುದು ಒಳಿತು. ಇದು ಇನ್ನೊಂದು ಪ್ರತ್ಯೇಕತೆಯ ಹೋರಾಟಕ್ಕೆ ದಾರಿ ಮಾಡಿಕೊಡಬಹುದು. ಈ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ ಸೂಕ್ತ ಹೋರಾಟವನ್ನು ಎದುರಿಸಬೇಕಾದೀತು ಎಂದು ತುಳುವೆರೆ ಆಯನ ಕೂಟ ಕುಡ್ಲ ಮತ್ತು ತುಳುನಾಡ್‌ ಟ್ರಸ್ಟ್‌ ಹಾಗೂ ವಿವಿಧ ಸಂಘಟನೆಗಳು ಮುನ್ನೆಚ್ಚರಿಕೆ ನೀಡಿವೆ.

ಈ ಬಗ್ಗೆ ಸೇರಿದ ಸಭೆಯಲ್ಲಿ ಡಾ| ರಾಜೇಶ ಆಳ್ವ, ದಯಾನಂದ್‌ ಕತ್ತಲ್‌ಸಾರ್‌, ದಿನೇಶ್‌ ರೈ ಕಡಬ, ಹರೀಶ್‌ ಶೆಟ್ಟಿ ಪಣೆಯೂರು, ಜಿ.ವಿ.ಎಸ್‌.ಉಳ್ಳಾಲ್‌, ಆಶಾ ಶೆಟ್ಟಿ ಅತ್ತಾವರ, ಯಾದವ್‌ ಕೊಟ್ಯಾನ್‌ ಪದವಿನಂಗಡಿ, ಗಣೇಶ್‌ ಪದವಿನಂಗಡಿ, ವಿದ್ಯಾಶ್ರೀ ಎಸ್‌.ಉಳ್ಳಾಲ್‌, ಚಂದ್ರಿಕಾ ಶೆಟ್ಟಿ, ನಾಗರಾಜ್‌, ಭೂಷಣ್‌ ಕುಲಾಲ್‌, ಪ್ರಸಾದ್‌ ಕೊಂಚಾಡಿ, ಮಹೇಶ್‌ ಶೆಟ್ಟಿ ಮುಂಡಾಜೆ, ಚೇತನ್‌ ಕುಮಾರ್‌ ಕುಲಶೇಖರ ಮೊದಲಾದವರು ಭಾಗವಹಿಸಿದರು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.