ಜೋಡುಪಾಲ ಸಂತ್ರಸ್ತರಿಗೆ ಮಾದರಿ ಮನೆ: ಖಾದರ್‌


Team Udayavani, Sep 30, 2018, 4:08 PM IST

kadar.jpg

ಅರಂತೋಡು: ಪ್ರಕೃತಿ ವಿಕೋಪಕ್ಕೆ ಸಿಲುಕಿ ನಿರಾಶ್ರಿತರಾಗಿರುವ ಜೋಡುಪಾಲ, ಮೊಣ್ಣಂಗೇರಿಯ ಸಂತ್ರಸ್ತರಿಗೆ ಗೃಹ ಮಂಡಳಿಯಿಂದ ಮಾದರಿ ಮನೆ ನಿರ್ಮಾಣ ನಡೆಯುತ್ತಿದ್ದು. 10 ದಿನಗಳಲ್ಲಿ ಮಡಿಕೇರಿಯ ಎರಡು ಕಡೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಸಚಿವ ಯು.ಟಿ. ಖಾದರ್‌ ಹೇಳಿದರು.

ಕಲ್ಲುಗುಂಡಿ, ಕೊಡಗು ಸಂಪಾಜೆಯ ಪ್ರಕೃತಿ ದುರಂತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮಾದರಿ ಮನೆಗಳು ಸಂತ್ರಸ್ತರಿಗೆ ಇಷ್ಟವಾದರೆ ಅದೇ ರೀತಿಯ ಮತ್ತಷ್ಟು ಮನೆಗಳನ್ನು ಕಟ್ಟಿಸಿಕೊಡಲು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಗೃಹ ಮಂಡಳಿಗೆ ಆದೇಶ ನೀಡಿದ್ದಾರೆ ಎಂದರು.

ಪರಿಹಾರ ಕೇಂದ್ರದಲ್ಲಿ 164 ಮಂದಿ
ಸಂತ್ರಸ್ತ 51 ಕುಟುಂಬಗಳ ಸುಮಾರು 164 ಮಂದಿ ಈಗಲೂ ಪರಿಹಾರ ಕೇಂದ್ರಗಳಲ್ಲಿದ್ದಾರೆ. ಬಸ್‌ ಪಾಸ್‌ ವಿತರಣೆಯಲ್ಲಿ ಕೆಲವರಿಗೆ ಅನ್ಯಾಯ ಆಗಿದೆ ಎಂಬ ಕೂಗು ಕೇಳಿ ಬಂದಿದೆ. ಜಿಲ್ಲಾಧಿಕಾರಿ ಮತ್ತು ಕೆಎಸ್‌ಆರ್‌ಟಿಸಿ ಡಿಸಿಯವರೊಂದಿಗೆ ಮಾತನಾಡಿ ಸರಿಪಡಿಸುವೆ. ಸಂಪಾಜೆ – ಮಡಿಕೇರಿ ಹೆದ್ದಾರಿ ಸಂಪೂರ್ಣ ಹದಗೆಟ್ಟಿದೆ. ತ್ವರಿತಗತಿಯಲ್ಲಿ ಹೆದ್ದಾರಿ ಕೆಲಸ ಮುಗಿಸಲು ಸೂಚನೆ ನೀಡಲಾಗಿದೆ. ತಿಂಗಳ ಒಳಗಾಗಿ ಮಡಿಕೇರಿ ಹೆದ್ದಾರಿ ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಭರವಸೆ ನೀಡಿದರು.

ಕೆಪಿಸಿಸಿ ಕಾರ್ಯದರ್ಶಿಗಳಾದ ವೆಂಕಪ್ಪ ಗೌಡ, ಟಿ.ಎಂ. ಶಹೀದ್‌, ವಕ್ಫ್ ಮಂಡಳಿ ನಿರ್ದೇಶಕ ಸಂಶುದ್ದೀನ್‌, ರಫೀಕ್‌ ಪಡು, ಯೂಸೂಫ್ ಅಂಜಿಕಾರ್‌ ಉಪಸ್ಥಿತರಿದ್ದರು.

ಸಂತ್ರಸ್ತರ ಕೇಂದ್ರಕ್ಕೆ ಖಾದರ್‌ ಭೇಟಿ
ಕೇಂದ್ರಗಳಿಗೆ ಭೇಟಿ ನೀಡಿದ ವೇಳೆ ಸಂತ್ರಸ್ತರು ಸಹಕಾರಿ ಸಂಘಗಳಲ್ಲಿ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿರುವ ಸಾಲ ಮನ್ನಾ ಮಾಡುವಂತೆ ಸಚಿವರಲ್ಲಿ ಮನವಿ ಮಾಡಿದರು. ಕಲ್ಲುಗುಂಡಿ ಶಾಲೆಯ ಸಂತ್ರಸ್ತರಿಗೆ ಗ್ಯಾಸ್‌ ಒದಗಿಸು ವಂತೆ ಸೂಚಿಸಿದರು.

ಸಂಪಾಜೆ ಸಂತ್ರಸ್ತರ ಕೇಂದ್ರದಲ್ಲಿ ಸಂತ್ರಸ್ತರ ಪರವಾಗಿ ಪ್ರಭಾಕರ ಭಟ್ಟ ಲೈನ್‌ಕಜೆ ಮಾತನಾಡಿ, ನಾವು ಮನೆ ಕಳೆದುಕೊಂಡಿದ್ದೇವೆ. ಸರಕಾರದ ವತಿಯಿಂದ ಸಂತ್ರಸ್ತರಿಗೆ 50 ಸಾವಿರ ರೂ. ಬಿಡುಗಡೆ ಮಾಡಲಾಗಿದೆ ಎಂದು ತಿಳಿದಿದ್ದೇವೆ. ಆದರೆ ಪರಿಹಾರ ಕೈ ಸೇರಿಲ್ಲ. ಶಾಶ್ವತ ಯೋಜನೆಗಳನ್ನು ನೀಡಬೇಕು ಎಂದರು. ಸಹಕಾರಿ ಸಂಘದ ಸಾಲ ಮನ್ನಾದ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ. ಧ.ಗ್ರಾ.ಯೋಜನೆಯ ಸಾಲದ ಬಗ್ಗೆ ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತನಾಡುತ್ತೇನೆ ಎಂದು ಖಾದರ್‌ ತಿಳಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.