ಪೆರಿಯದಲ್ಲಿ ಏರ್‌ ಸ್ಟ್ರಿಪ್‌ ನಿರ್ಮಾಣಕ್ಕೆ  ಮರುಜೀವ

Team Udayavani, Nov 13, 2018, 2:20 AM IST

periya-12-11.jpg

ಕಾಸರಗೋಡು: ಜಿಲ್ಲೆಯ ಪೆರಿಯ ಕನಿಕುಂಡಿನಲ್ಲಿ ಸ್ಥಾಪಿಸಲು ಉದ್ದೇಶಿಸಿದ ಮಹತ್ವಾಕಾಂಕ್ಷೆಯ ಕಿರು ವಿಮಾನ ನಿಲ್ದಾಣ (ಏರ್‌ ಸ್ಟ್ರಿಪ್‌) ಯೋಜನೆ ಸಾಕಾರಗೊಳ್ಳುವತ್ತ ಸಾಗುತ್ತಿದೆ. ಯೋಜನೆಯನ್ನು ಕೈಗೆತ್ತಿಕೊಳ್ಳುವ ಬಗ್ಗೆ ಬೃಹತ್‌ ಸಂಸ್ಥೆಗಳ ಪ್ರತಿನಿಧಿಗಳು ಶೀಘ್ರವೇ ಪೆರಿಯಕ್ಕೆ ಭೇಟಿ ನೀಡಲಿದ್ದು, ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

ಬೃಹತ್‌ ಸಂಸ್ಥೆಗಳ ಆಸಕ್ತಿ
ಕಿರು ವಿಮಾನ ನಿಲ್ದಾಣ ಯೋಜನೆಯಲ್ಲಿ ಪಾಲುದಾರರಾಗುವ ಆಸಕ್ತಿಯೊಂದಿಗೆ ಹಲವು ಬೃಹತ್‌ ಸಂಸ್ಥೆಗಳು ಮುಂದಕ್ಕೆ ಬಂದಿವೆ ಎಂದು ಪ್ರಿನ್ಸಿಪಲ್‌ ಕಾರ್ಯದರ್ಶಿ ಕೆ.ಆರ್‌.ಜ್ಯೋತಿಲಾಲ್‌ ತಿಳಿಸಿದ್ದಾರೆ. ಬೃಹತ್‌ ಸಂಸ್ಥೆಗಳು ಕಿರು ವಿಮಾನ ನಿಲ್ದಾಣ ಯೋಜನೆಯ ಬಗ್ಗೆ ಆಸಕ್ತಿ ವಹಿಸಿರುವುದರಿಂದ ಹೊಸ ಜೀವ ಬಂದಂತಾಗಿದೆ. ಪೆರಿಯದಲ್ಲಿ ಕಿರು ವಿಮಾನ ನಿಲ್ದಾಣ ಸ್ಥಾಪಿಸುವ ಯೋಜನೆ ಬಗ್ಗೆ ಅಧ್ಯಯನ ನಡೆಸಲು ನಾಗರಿಕ ವ್ಯೋಮಯಾನ ಇಲಾಖೆಯ ಹೊಣೆಗಾರಿಕೆ ಹೊಂದಿರುವ ಪ್ರಿನ್ಸಿಪಲ್‌ ಕಾರ್ಯದರ್ಶಿ ಕೆ.ಆರ್‌. ಜ್ಯೋತಿಲಾಲ್‌ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ಈಗಾಗಲೇ ರಚಿಸಲಾಗಿದೆ. ಈ ಯೋಜನೆಗಾಗಿ ಗುರುತಿಸಿರುವ ಸ್ಥಳದಲ್ಲಿ ಪರಿಶಿಷ್ಟ ವಿಭಾಗ ಕಾಲನಿಯಲ್ಲಿ 20 ಮನೆಗಳಿದ್ದು ಅವರನ್ನು ತೆರವುಗೊಳಿಸಬೇಕಾಗಿ ಬರಲಿದೆ. ಅದಕ್ಕೆ ಪರ್ಯಾಯವಾಗಿ ಅವರಿಗೆ ಹೊಸ ಸ್ಥಳ ಮತ್ತು ಪುನರ್ವಸತಿ ಕಲ್ಪಿಸಿಕೊಡಬೇಕಾಗಿದೆ. ಅದಕ್ಕೆ ಕಂದಾಯ ಇಲಾಖೆ ಅಗತ್ಯದ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ದಕ್ಷಿಣ ಭಾರತದ ವಿಮಾನ ನಿಲ್ದಾಣಗಳನ್ನು ಪರಸ್ಪರ ಸಂಪರ್ಕಿಸುವ ರೀತಿಯಲ್ಲಿ ಕಿರು ವಿಮಾನ ಸೇವೆಯನ್ನು ಪೆರಿಯದಿಂದ ಆರಂಭಿಸುವ ವಿಷಯ ಸಮಿತಿಯ ಪರಿಗಣನೆಯಲ್ಲಿದೆ. ಇದರಂತೆ ಮಂಗಳೂರು, ಬೆಂಗಳೂರು, ಗೋವಾ, ಕಣ್ಣೂರು, ಕಲ್ಲಿಕೋಟೆ, ಕೊಚ್ಚಿ ಮತ್ತು ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳೊಂದಿಗೆ ಸಂಪರ್ಕಿಸುವ ರೀತಿಯಲ್ಲಿ 12ರಿಂದ 40 ಆಸನಗಳನ್ನು ಹೊಂದಿರುವ ಕಿರು ವಿಮಾನ ಸೇವೆಗೆ ಹೊಂದಿಕೊಳ್ಳುವ ರೀತಿಯಲ್ಲಿ ಏರ್‌ ಸ್ಟ್ರಿಪ್‌ನ್ನು ಪೆರಿಯಾದಲ್ಲಿ ನಿರ್ಮಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಇಲ್ಲಿ ಕಿರು ವಿಮಾನ ಸೇವೆ ಆರಂಭಿಸಿದ್ದಲ್ಲಿ ಅದರ ಆರ್ಥಿಕ ಲಾಭಗಳ ಕುರಿತು ಅಧ್ಯಯನ ನಡೆಸಲು, ಈ ಯೋಜನೆಯಲ್ಲಿ ಪಾಲುದಾರರಾಗಲು ಆಸಕ್ತಿ ಹೊಂದಿರುವ ಹಲವು ಬೃಹತ್‌ ಸಂಸ್ಥೆಗಳ ಪ್ರತಿನಿಧಿಗಳು ಶೀಘ್ರವೇ ಕಾಸರಗೋಡಿಗೆ ಆಗಮಿಸಲಿದ್ದಾರೆ.

ಪ್ರವಾಸಿ ಕೇಂದ್ರಗಳ ಅಭಿವೃದ್ಧಿಗೆ ಸಹಕಾರ 
ಕಿರು ವಿಮಾನ ನಿಲ್ದಾಣ ಕಾರ್ಯಾರಂಭಗೊಂಡಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಪ್ರಧಾನ ಪ್ರವಾಸೋದ್ಯಮ ಕೇಂದ್ರವಾಗಿ ಬದಲಾಗಲಿದೆ. ಕಣ್ಣೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಈಗಾಗಲೇ ಕಾರ್ಯಾರಂಭಗೊಳ್ಳಲಿದೆ. ಅಲ್ಲಿಂದ ಮತ್ತು ಮಂಗಳೂರು ಹಾಗೂ ಮತ್ತಿತರ ವಿಮಾನ ನಿಲ್ದಾಣಗಳಿಂದ ಪೆರಿಯ ಕಿರು ವಿಮಾನ ನಿಲ್ದಾಣಗಳಿಗೆ ಕಿರು ವಿಮಾನಗಳಲ್ಲಿ ಪ್ರವಾಸಿಗರನ್ನು ಜಿಲ್ಲೆಗೆ ತರಲು ಈ ಯೋಜನೆಯಿಂದ ಸಾಧ್ಯವಾಗಲಿದೆ. ಮಾತ್ರವಲ್ಲ ಇದರಿಂದ ಬೇಕಲ ಪ್ರವಾಸೋದ್ಯಮ ಯೋಜನೆ ಮಾತ್ರವಲ್ಲ, ಜಿಲ್ಲೆಯ ಇತರ ಎಲ್ಲಾ ಪ್ರವಾಸಿ ಕೇಂದ್ರಗಳಿಗೆ ದೇಶಿ ಮತ್ತು ವಿದೇಶಿ ಪ್ರವಾಸಿಗರು ಹರಿದು ಬರುವ ಸಾಧ್ಯತೆಯಲ್ಲಿ ಹೆಚ್ಚಳವಾಗಲಿದೆ. ಈ ಮೂಲಕ ಅದು ಜಿಲ್ಲೆಗೆ ಅಂತಾರಾಷ್ಟ್ರೀಯ ಭೂಪಟದಲ್ಲಿ ಪ್ರಮುಖ ಸ್ಥಾನ ನೀಡಲಿದೆ ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಿರು ವಿಮಾನ ನಿಲ್ದಾಣ ಸ್ಥಾಪಿಸುವ ಸ್ಥಳದ ಮೂರು ಕಿಲೋ ಮೀಟರ್‌ ದೂರದಲ್ಲಿ ಬೇಕಲ ಕೋಟೆ ಇದೆ. ಅಲ್ಲಿಂದ ಕೆಲವೇ ಕಿ.ಮೀ. ದೂರದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯ, ನೂತನವಾಗಿ ನಿರ್ಮಿಸುತ್ತಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಹರಿದು ಬರುತ್ತಿರುವ ಆನಂದಾಶ್ರಮ ಅಲ್ಲಿಂದ ಕೆಲವೇ ಮೀಟರ್‌ ದೂರದಲ್ಲಿದೆ. ಮಾತ್ರವಲ್ಲ ಚಂದ್ರಗಿರಿ ಕೋಟೆ, ಕಾಸರಗೋಡು ಕೋಟೆ, ಆರಿಕ್ಕಾಡಿ ಕೋಟೆ, ಪೊವ್ವಲ್‌ (ಪೊಳಲಿ) ಕೋಟೆ, ಪೊಸಡಿಗುಂಪೆ ಮತ್ತಿತರ ಜಿಲ್ಲೆಯ ಪ್ರವಾಸಿ ಕೇಂದ್ರಗಳಿಗೆ ಪ್ರವಾಸಿಗರ ಪ್ರವಾಹ ಮತ್ತು ಅವುಗಳ ಅಭಿವೃದ್ಧಿಗೂ ಈ ಕಿರು ವಿಮಾನ ನಿಲ್ದಾಣ ಸಹಾಯಕವಾಗಲಿದೆ.

ಕಾಸರಗೋಡು ಕಿರು ವಿಮಾನ ನಿಲ್ದಾಣ ಜಿಲ್ಲಾ ಪಂಚಾಯತ್‌ನ ಒಂದು ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಈ ಯೋಜನೆ ಬಗ್ಗೆ ಅಧ್ಯಯನ ನಡೆಸಲು ರೂಪೀಕರಿಸಲಾಗಿರುವ ಕೆ.ಆರ್‌.ಜ್ಯೋತಿಲಾಲ್‌ ಅಧ್ಯಕ್ಷರಾಗಿರುವ ಸಮಿತಿಯಲ್ಲಿ ಕಾಸರಗೋಡು ಜಿಲ್ಲಾಧಿಕಾರಿ, ಬೇಕಲ ರಿಸೋರ್ಟ್‌ ಡೆವಲಪ್‌ಮೆಂಟ್‌ ಕಾರ್ಪೊರೇಶನ್‌ನ (ಬಿ.ಆರ್‌.ಡಿ.ಸಿ.) ಎಂ.ಡಿ., ಹಣಕಾಸು ಇಲಾಖೆ ಮತ್ತು ಸಿಯಾಲ್‌ನ ಪ್ರತಿನಿಧಿಗಳು ಒಳಗೊಂಡಿದ್ದಾರೆ. ಪೆರಿಯದಲ್ಲಿ ಕಿರು ವಿಮಾನ ನಿಲ್ದಾಣ ನಿರ್ಮಿಸುವ ಯೋಜನೆಗೆ 2011ರಲ್ಲೇ ರಾಜ್ಯ ಸರಕಾರ ತಾಂತ್ರಿಕ ಅಂಗೀಕಾರ ನೀಡಿತ್ತು. ಅದಕ್ಕಾಗಿ ಪೆರಿಯದಲ್ಲಿ 80.41 ಎಕ್ರೆ ಸ್ಥಳ ಗುರುತಿಸಲಾಗಿದೆ. ಇದರಲ್ಲಿ 51.65 ಎಕ್ರೆ ಸ್ಥಳ ಸರಕಾರಿ ಮಾಲಕತ್ವದಲ್ಲಿದೆ. 28.76 ಎಕ್ರೆ ಸ್ಥಳ ಖಾಸಗಿ ವ್ಯಕ್ತಿಗಳಿಗೆ ಸೇರಿದ್ದಾಗಿದೆ. ಖಾಸಗಿ ಭೂಮಿ ವಶಪಡಿಸಲು ಅವರಿಗೆ ಅಗತ್ಯದ ನಷ್ಟ ಪರಿಹಾರ ಮತ್ತಿತರ ಸವಲತ್ತುಗಳನ್ನು ನೀಡಲು ಸರಕಾರ ಈಗಾಗಲೇ ಮುಂದಾಗಿದೆ.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike ಕದ್ದು ಹೆಲ್ಮೆಟ್‌ ಧರಿಸದೆ ಸವಾರಿ: ಮಾಲಕನಿಗೆ ನೋಟಿಸ್‌!

Bike ಕದ್ದು ಹೆಲ್ಮೆಟ್‌ ಧರಿಸದೆ ಸವಾರಿ: ಮಾಲಕನಿಗೆ ನೋಟಿಸ್‌!

Theft: ವ್ಯಾಪಾರಿ ಭವನದಿಂದ ಕಳವು

Theft: ವ್ಯಾಪಾರಿ ಭವನದಿಂದ ಕಳವು

5

Crime: ಯುವಕನ ಕೊಲೆ: ತಲೆಮರೆಸಿಕೊಂಡ ಆರೋಪಿಗಾಗಿ ರೆಡ್‌ ಕಾರ್ನರ್‌ ನೋಟಿಸ್‌

1-asdsadsa

ಕುಂಟಿಕಾನಮಠ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.