ಕಾಡುಪೊದೆಗಳಿಂದ ಆವೃತ ರಾ. ಹೆದ್ದಾರಿ : ಅಪಾಯ ಭೀತಿ

Team Udayavani, Nov 14, 2018, 2:55 AM IST

highway-14-11.jpg

ಕಾಸರಗೋಡು: ಕಾಸರಗೋಡು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯು ಬಹುಭಾಗ ಕಾಡುಪೊದೆಗಳು ಬೆಳೆದು ಅರಣ್ಯ ದಾರಿಯಾಗಿ ಮಾರ್ಪಡುತ್ತಿದೆ. ಇದರಿಂದಾಗಿ ಭಾರೀ ಆತಂಕ ಹಾಗೂ ಅಪಾಯವೂ ಸೃಷ್ಟಿಯಾಗುತ್ತಿದೆ. ಆದರೆ ಇದ್ಯಾವುದೂ ಸಮಸ್ಯೆಯೇ ಅಲ್ಲ ಎಂಬ ರೀತಿಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ ಅಪಾಯ ಸಾಧ್ಯತೆಯಿರುವ ಚೆರ್ಕಳ – ಬೇವಿಂಜೆ ತಿರುವು, ತೆಕ್ಕಿಲ್‌ – ಚಟ್ಟಂಚಾಲ್‌ ತಿರುವು, ಚಾಲಿಂಗಾಲ್‌ – ಕೋಲೋತ್‌ ತಿರುವು ಅಲ್ಲದೆ ತಾಳಿಪಡ್ಪು, ಕುಂಬಳೆ ಸೇತುವೆ, ಶಿರಿಯ, ಮುಟ್ಟಂ, ಮಂಗಲ್ಪಾಡಿ ಪರಂಕಿಲ, ಕುಕ್ಕಾರು, ಮಂಜೇಶ್ವರ ಮುಂತಾದ ಕಡೆಗಳಲ್ಲಿ  ಹೆದ್ದಾರಿಯ ಎರಡೂ ಕಡೆಗಳಲ್ಲಿ  ಕಾಡುಪೊದೆಗಳು, ಗಿಡಬಳ್ಳಿಗಳು ತುಂಬಿಕೊಂಡಿವೆ. ಅಧಿಕ ತಿರುವುಗಳು, ಎತ್ತರ – ತಗ್ಗುಗಳು ಇರುವ ಈ ಪ್ರದೇಶಗಳಲ್ಲಿ  ವಾಹನ ಅಪಘಾತದ ಹಲವಾರು ಘಟನೆಗಳು ಕಣ್ಣ ಮುಂದೆ ಇದ್ದರೂ ಅಧಿಕಾರಿಗಳು ಮಾತ್ರ ದಿವ್ಯ ನಿರ್ಲಕ್ಷ್ಯ ವಹಿಸುತ್ತಿದ್ದಾರೆಂಬ ಆರೋಪ ಕೇಳಿಬರುತ್ತಿದೆ.

ಈ ಮಧ್ಯೆ ರಾಷ್ಟ್ರೀಯ ಹೆದ್ದಾರಿಯ ಮೂಲಕ ಪ್ರತಿದಿನ ಆರು ಸಾವಿರಕ್ಕೂ ಮಿಕ್ಕಿ ವಾಹನಗಳು ಹಾದು ಹೋಗುತ್ತಿವೆ. ಬೃಹತ್‌ ಕಂಟೈನರ್‌ ಲಾರಿಗಳು, ಸರಕುಗಳನ್ನು ತುಂಬಿಕೊಂಡ ವಾಹನಗಳು, ಬಸ್‌ಗಳು, ಕಾರುಗಳು ಸಹಿತ ಜನಸಾಮಾನ್ಯರು ಸಂಚರಿಸುವ ದ್ವಿಚಕ್ರ ವಾಹನಗಳು ಅಪಾಯ  ಭೀತಿಯೊಂದಿಗೆ ಹಾದು ಹೋಗುತ್ತಿವೆ. ತಿರುವುಗಳು, ಇಳಿಜಾರುಗಳು ಇರುವ ರಸ್ತೆಯಲ್ಲಿ ವಾಹನ ಚಲಾಯಿಸುವವರಿಗೆ ಮುಂಭಾಗದಿಂದ ಆಗಮಿಸುವ ವಾಹನಗಳು ಎರಡು ಮೀಟರ್‌ ಅಂತರದಲ್ಲಿ ಕೂಡ ಕಾಣಲಾಗದ ಸ್ಥಿತಿಯಲ್ಲಿ ಕಾಡುಪೊದೆಗಳು ಬೆಳೆದು ನಿಂತಿವೆ.
ಕೆಲವು ವರ್ಷಗಳಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಒಳಪಡಿಸಿ ಆಯಾ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳ ಕಾಡುಪೊದೆಗಳನ್ನು ಕಡಿದು ತೆಗೆಯಲಾಗಿತ್ತು. ಆದರೆ ಕಳೆದ ಎರಡು ವರ್ಷಗಳಿಂದ ಈ ಕೆಲಸವೂ ನಡೆಯಲಿಲ್ಲ. ಕಳೆದ ಎರಡು ವರ್ಷಗಳಿಂದಲೇ ಹೆದ್ದಾರಿ ಬದಿಯ ಪೊದೆ ಕಡಿಯದಿರುವುದರಿಂದ ಹೆದ್ದಾರಿ ಬದಿಯಲ್ಲಿ ಅಪಾಯದ ಭೀತಿ ಕಂಡುಬರುತ್ತಿದೆ.
ಈ ವರ್ಷ ಕೂಡ ಕಾಡುಗಳನ್ನು ಕಡಿಯಲು ಕ್ರಮ ಕೈಗೊಳ್ಳದಿರುವುದರಿಂದ ಮುಂಭಾಗದಿಂದ ಬರುವ ವಾಹನಗಳನ್ನು ಗಮನಿಸಲು ಸಾಧ್ಯವಾಗದ ರೀತಿಯಲ್ಲಿ ಗಿಡಬಳ್ಳಿಗಳು ಬೆಳೆದಿವೆ. ಹೆದ್ದಾರಿ ಇಕ್ಕೆಲಗಳಲ್ಲಿ ಸ್ಥಾಪಿಸಲಾದ ಅಪಾಯ ಸೂಚನಾ ಫಲಕಗಳು, ಸುರಕ್ಷಾ ಫಲಕಗಳು, ಎಚ್ಚರಿಕೆ ಫಲಕಗಳು ಮೊದಲಾದವುಗಳು ಕಾಡುಪೊದೆಗಳಿಂದ ಮುಚ್ಚಲ್ಪಟ್ಟಿವೆ. ಇದು ಅನ್ಯ ರಾಜ್ಯಗಳು ಮುಂತಾದೆಡೆಗಳಿಂದ ವಾಹನದೊಂದಿಗೆ ಬರುವವರನ್ನು ಅಪಾಯಕ್ಕೊಳಗಾಗುವಂತೆ ಮಾಡುತ್ತಿವೆ.

ಹೆದ್ದಾರಿ ಚತುಷ್ಪಥ ಕಾಮಗಾರಿ ವಿಳಂಬ 
ಇದೇ ವೇಳೆ ತಲಪಾಡಿ – ಕಾಲಿಕಡವು ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥಗೊಳಿಸಿ ಅಭಿವೃದ್ಧಿ ಮಾಡಲಿರುವ ಯೋಜನೆ ಕೂಡ ಒಂದಲ್ಲ ಒಂದು ನೆಪವೊಡ್ಡಿ ಮುಂದೂಡಲ್ಪಡುತ್ತಿದೆ. ಇತ್ತೀಚೆಗೆ ತೇಪೆ ಹಚ್ಚಿದರೂ ಒಂದೆಡೆ ಹೊಂಡಗುಂಡಿಗಳಿಂದ ಕೂಡಿರುವ ಹೆದ್ದಾರಿಯೂ ಸಂಚಾರಕ್ಕೆ ಅಯೋಗ್ಯವಾಗಿದ್ದು, ಇನ್ನೊಂದೆಡೆ ಕಾಡುಪೊದೆಗಳು ಪ್ರಯಾಣಕ್ಕೆ ಸಂಚಕಾರವಾಗುತ್ತಿದೆ.

ಪ್ರಯಾಣಿಕರ ಗೋಳು
ನಿತ್ಯ ಪ್ರಯಾಣಿಕರಿಗಂತೂ ಕಾಸರಗೋಡು ಜಿಲ್ಲೆಯ ಹೆದ್ದಾರಿ ಸಂಚಾರವು ತೀವ್ರ ಸಮಸ್ಯೆಯಾಗಿ ಕಾಡುತ್ತಿದೆ. ಕೂಡಲೇ ಕೇರಳ ಸರಕಾರವು ಇನ್ನಾದರೂ ಈ ಬಗ್ಗೆ ಗಮಹರಿಸಿ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಲಾಗಿದೆ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.