ಕಾಡಾನೆ ದಾಳಿ: ಓಡಿದ ಯುವಕ ಬಾವಿಗೆ ಬಿದ್ದು ಗಂಭೀರ ಗಾಯ

Team Udayavani, Nov 17, 2018, 10:00 AM IST

16mul10a.jpg

ಮುಳ್ಳೇರಿಯ: ದೇಲಂಪಾಡಿ ಗ್ರಾಮ ಪಂಚಾಯತಿನ ಅಡೂರು ಸಮೀಪದ ತಲ್ಪಚ್ಚೇರಿ- ಚಂದ್ರಬಯಲಿನಲ್ಲಿ ಕಾಡಾನೆಗಳ ದಾಳಿ ವೇಳೆ ಓಡಿ ತಪ್ಪಿಸಿಕೊಳ್ಳಲು ಹೊರಟ ಯುವಕ ಬಾವಿಗೆ ಬಿದ್ದು ಗಂಭೀರ ಗಾಯಗೊಂಡಿದ್ದಾನೆ.
ಬೆಳ್ಳಿಕಾನ ಕೋರಿಕಂಡ ನಿವಾಸಿ ಕೂಲಿ ಕಾರ್ಮಿಕ ಪ್ರಭಾಕರ ಅವರ ಪುತ್ರ, ಕಾಸರಗೋಡು ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿ ಪ್ರಮೋದ್‌ (18) ಬಾವಿಗೆ ಬಿದ್ದ ಯುವಕ.

ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಗಳು ಬೀಡು ಬಿಟ್ಟಿದ್ದು, ಗುರುವಾರ ರಾತ್ರಿ ಏಕಾಏಕಿ  ಳಿಡುತ್ತಾ ಪ್ರಮೋದ್‌ ಇದ್ದಲ್ಲಿಗೆ ಧಾವಿಸಿ ಬಂದವು. ಓಡುವ ರಭಸದಲ್ಲಿ ಅವರು ಪಾಳುಬಾವಿಗೆ ಬಿದ್ದರು. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ
ತಲ್ಪಚ್ಚೇರಿ- ಚಂದ್ರಬಯಲು ಕೋರಿಕಂಡ ಕಾಲನಿಯ ಅರಣ್ಯ ದಂಚಿನಲ್ಲಿ ಕಳೆದ ಎರಡು ದಿನಗಳಿಂದ ಠಿಕಾಣಿ ಹೂಡಿದ್ದ 7 ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಚರಣೆ ಅರಣ್ಯಾಧಿಕಾರಿಗಳ ವಿಶೇಷ ದಳ ಹಾಗೂ ನಾಗರಿಕರಿಂದ ನಡೆಯುತ್ತಿದೆ. ಗುರುವಾರದ ಹಗಲು ಹೊತ್ತಿನಲ್ಲಿ ಪ್ರಯತ್ನಿಸಿದ್ದರೂ ರಾತ್ರಿ ತನಕ ಪ್ರಯೋಜನವಾಗಲಿಲ್ಲ. ಸಂಜೆ ವೇಳೆಗೆ ಪಟಾಕಿ ಸಿಡಿಸಿ, ಬೆಂಕಿ ಹಚ್ಚಿ ಆನೆಗಳನ್ನು ಓಡಿಸುವ ಪ್ರಯತ್ನದಲ್ಲಿ ರೊಚ್ಚಿಗೆದ್ದ ಕಾಡಾನೆಗಳು ಘೀಳಿಡುತ್ತಾ ಜನರತ್ತ ದಾಳಿ ನಡೆಸಲು ಮುಂದಾದವು. ಈ ಸಂದರ್ಭ ಬಾವಿಗೆ ಬಿದ್ದ ಪ್ರಮೋದ್‌ರನ್ನು ರಕ್ಷಿಸಿದ ನಾಗರಿಕರು ಹಾಗೂ ಅರಣ್ಯಾಧಿಕಾರಿಗಳು ಮೇಲಕ್ಕೆತ್ತಿ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿ ದರು. ಪ್ರಥಮ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು.

ಸೊಂಟದ ಎಲುಬು ತುಂಡಾಗಿದ್ದು ತುರ್ತು ಶಸ್ತ್ರಚಿಕಿತ್ಸೆ ನಡೆಸಬೇಕಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಶನಿವಾರ ಶಸ್ತ್ರಚಿಕಿತ್ಸೆ ನಡೆಯಲಿದೆ. ಇದಕ್ಕೆ ಸುಮಾರು 1.50 ಲ.ರೂ. ಅಗತ್ಯವಿದೆ ಎಂದು ಪ್ರಮೋದ್‌ ಅವರ ಸಹೋದರ ಪ್ರಶಾಂತ್‌ ತಿಳಿಸಿದ್ದು, ಬಡಕುಟುಂಬ ಚಿಂತೆಗೀಡಾಗಿದೆ. ಇಲಾಖೆಯಿಂದ ಲಭಿಸುವ ಎಲ್ಲ ಸಹಾಯಗಳನ್ನು ನೀಡಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಎನ್‌. ಅನಿಲ್‌ ಕುಮಾರ್‌ ‘ಉದಯವಾಣಿ’ಗೆ ತಿಳಿಸಿದ್ದಾರೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.