ಮನೆ-ಮನಗಳಲ್ಲಿ ಕನ್ನಡದ ದೀಪ ಬೆಳಗಲಿ: ಡಾ| ಅವನಿಜ

Team Udayavani, Nov 30, 2018, 2:00 AM IST

kannada-29-11.jpg

ಮಡಿಕೇರಿ: ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದ್ದು, ಕನ್ನಡದ ದೀಪ ಮನೆ-ಮನಗಳಲ್ಲಿ ಬೆಳಗುವಂತಾ ಗಬೇಕು ಎಂದು ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಅವನಿಜ ಸೋಮಯ್ಯ ತಿಳಿಸಿದರು. ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ವಿವಿಧ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಭಾಷೆ, ಸಾಹಿತ್ಯಕ್ಕೆ ತನ್ನದೇ ಆದ ಇತಿಹಾಸವಿದೆ. ಲೇಖನವೆಂಬ ಆಯುಧದಿಂದ ಎಲ್ಲರ ಮನ ಗೆಲ್ಲುವ ಸಾಹಿತ್ಯವನ್ನು ರಚಿಸಿ ಕನ್ನಡ ಸಾಹಿತ್ಯ ಲೋಕವನ್ನು ಉತ್ತುಂಗಕ್ಕೆ ತಲುಪಿಸುವಂತೆ ಕರೆ ನೀಡಿದರು.

ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್‌ ಅವರು ಮಾತನಾಡಿ ನಿರಂತರ‌ ಶ್ರದ್ಧೆ, ಅಭ್ಯಾಸದಿಂದ ವ್ಯಕ್ತಿಯು ಪರಿಪೂರ್ಣವಾದ ಶಕ್ತಿಯಾಗಿ ಹೊರಹೊಮ್ಮಲು ಸಹಕಾರಿಯಾಗಿದ್ದು, ಬಾಲ ಪ್ರತಿಭೆಗಳಲ್ಲಿ ಇರುವಂತಹ ಸಾಹಿತ್ಯ, ಕಲೆಯ ಪ್ರತಿಭೆಯನ್ನು ಹೊರತರುವ ಕೆಲಸವನ್ನು ಈ ಕಾರ್ಯಕ್ರಮದ ಮುಖೇನ ಮಾಡಲಾಗುತ್ತಿದ್ದು, ಆ ನಿಟ್ಟಿನಲ್ಲಿ ಕನ್ನಡ ಭಾಷೆ, ಕನ್ನಡ ಸಾಹಿತ್ಯವನ್ನು ಉಳಿಸಿ ಬೆಳೆಸಬೇಕಾದದ್ದು ಪ್ರತಿಯೊಬ್ಬರ ಕರ್ತವ್ಯ ಎಂದು ಅವರು ತಿಳಿಸಿದರು.

ನಗರಸಭಾ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಮಾತನಾಡಿ ಕನ್ನಡ ಸಾಹಿತ್ಯ, ಭಾಷೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು. ಕೊಡಗು ಪತ್ರಿಕಾ ಭವನದ ಮ್ಯಾನೇಜಿಂಗ್‌ ಟ್ರಸ್ಟಿಗಳಾದ ಬಿ. ಎನ್‌.ಮನುಶೆಣೈ ಅವರು ಮಾತ ನಾಡಿ ಕನ್ನಡವನ್ನು ಪ್ರತಿ ಹಂತದಲ್ಲಿ ಬಳಸುವುದರ ಮೂಲಕ ಕನ್ನಡ ಭಾಷೆ ಬೆಳೆಸಬೇಕಿದ್ದು ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕನ್ನಡ ಭಾಷೆಯ ಕೀರ್ತಿಯನ್ನು ಉತ್ತುಂಗಕ್ಕೆ ಕೊಂಡೊಯ್ಯಬೇಕು ಎಂದು ತಿಳಿಸಿದರು.

ಜಿಲ್ಲಾ ಕೇಂದ್ರದಲ್ಲಿ ಕಲಾವಿದರಿಗೆ ಸುಸಜ್ಜಿತವಾದ ರಂಗಮಂದಿರ ನಿರ್ಮಾಣ ಮಾಡುವಂತೆ ನಗರಸಭಾ ಅಧ್ಯಕ್ಷರಲ್ಲಿ ಮನುಶೆಣೈ ಅವರು ಮನವಿ ಮಾಡಿದರು. ಇತ್ತೀಚೆಗೆ ನಿಧನರಾದ ಚಿತ್ರನಟ, ಮಾಜಿ ಸಚಿವರಾದ ಅಂಬರೀಶ್‌, ಕೇಂದ್ರ ಸಚಿವರಾದ ಅನಂತ್‌ ಕುಮಾರ್‌, ಮಾಜಿ ಕೇಂದ್ರ ಸಚಿವರಾದ ಜಾಫ‌ರ್‌ ಶರೀಫ್, ಪೊನ್ನಂಪೇಟೆ ರಾಮಕೃಷ್ಣ ಆಶ್ರಮದ ಸ್ವಾಮಿ ಜಗದಾತ್ಮಾನಂದ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್‌, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾಶಿನಾಥ್‌, ವಿವಿಧ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಇತರರು ಇದ್ದರು. ಲಿಟ್ಲ ಫ್ಲವರ್‌ ಶಾಲಾ ಮಕ್ಕಳಿಂದ ಸ್ವಾಗತ ನೃತ್ಯ ನೀಡಿದರು. ಮುನೀರ್‌ ಅಹ್ಮದ್‌ ಅವರು ನಿರೂಪಿಸಿದರು. ಲಿಟ್ಲ ಫ್ಲವರ್‌ ಶಾಲೆಯ ಸುನೀತಾ ಪ್ರೀತ್‌ ವಂದಿಸಿದರು. 

‘ಕನ್ನಡ ಸಾಹಿತ್ಯ ಹೆಚ್ಚು ಅಭ್ಯಾಸ ಮಾಡಿ’
ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಮಾಜಿ ಅಧ್ಯಕ್ಷ ಬಿ.ಎ.ಷಂಶುದ್ದೀನ್‌ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಅನೇಕ ಕನ್ನಡಪರ ಸಂಘಟನೆಗಳು ವಿವಿಧ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುತ್ತಿದ್ದು, ಕನ್ನಡ ಭಾಷೆಯ ರಕ್ಷಣೆ ಮಾಡುತ್ತಿರುವುದು ಸಂತಸದ ವಿಚಾರವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಓದಿನ ಮೂಲಕ ಕಲಿತ ಸಾಹಿತ್ಯ ಕೊನೆಯ ವರೆಗೂ ಉಳಿಯುತ್ತದೆ ವಿದ್ಯಾರ್ಥಿಗಳು ಇದನ್ನು ಮನಗಂಡು ಕನ್ನಡ ಸಾಹಿತ್ಯವನ್ನು ಹೆಚ್ಚು ಅಭ್ಯಾಸ ಮಾಡಿ ಕನ್ನಡ ಸಾಹಿತ್ಯ ಲೋಕವನ್ನು ಮತ್ತಷ್ಟು ವಿಶಾಲಗೊಳಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.