ಯುವಕ ಆತ್ಮಹತ್ಯೆ: ಪೊಲೀಸ್‌ ದೌರ್ಜನ್ಯ ಆರೋಪ

Team Udayavani, Jan 1, 2019, 5:20 AM IST

madikeri.jpg

ಮಡಿಕೇರಿ: ಬೆಂಗಳೂರಿನ ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದ ಜಯಕುಮಾರ್‌ (24) ನೇಣು ಬಿಗಿದು ಆತ್ಮಹತ್ಯೆ  ಮಾಡಿರುವ ಘಟನೆ ನಗರದ ಮಂಗಳಾದೇವಿ ನಗರ ಬಡಾವಣೆಯಲ್ಲಿ ಸಂಭವಿಸಿದೆ. 

ಈತನ ಸಾವಿಗೆ ಪಿರಿಯಾಪಟ್ಟಣ ಪೊಲೀಸರು ನೀಡಿದ ಕಿರುಕುಳವೇ ಕಾರಣವೆಂದು ಆರೋಪಿಸಿದ  ಸಂಬಂ ಧಿಕರು ಮತ್ತು ದಲಿತ ಸಂಘಟನೆಗಳ ಪ್ರಮುಖರು, ಜಿಲ್ಲಾಸ್ಪತ್ರೆಯ ಶವಾ ಗಾರದ ಎದುರು ಪ್ರತಿಭಟನೆ ನಡೆಸಿದರು. ಪೊಲೀಸರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸದೆ  ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡುವುದಿಲ್ಲವೆಂದು  ಪಟ್ಟು ಹಿಡಿದರು.

ಪ್ರಕರಣದ ವಿವರ
ಡಿ.9ರಂದು ಕುಶಾಲನಗರದ ಕೊಪ್ಪ ಸಮೀಪ ವೈದ್ಯ ದಿಲೀಪ್‌ ಅವರನ್ನು ಕುತ್ತಿಗೆ ಬಿಗಿದು ಹತ್ಯೆ ಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿ  ಮಂಗಳಾದೇವಿನಗರ ನಿವಾಸಿ, ಆಟೋ ಚಾಲಕ ಕೃಷ್ಣನನ್ನು ಪಿರಿಯಾಪಟ್ಟಣ ಪೊಲೀಸರು ಬಂಧಿಸಿದ್ದರು. ಡಿ. 25ರಂದು ಕೃಷ್ಣನ ಮಕ್ಕಳಾದ ಜಯ ಕುಮಾರ ಮತ್ತು ಚಂದ್ರಕಾಂತ್‌  ಅವರನ್ನು ಕೂಡ ಪಿರಿಯಾಪಟ್ಟಣ ಪೊಲೀಸರು ವಿಚಾರಣೆಗಾಗಿ ಕೊಪ್ಪ ಸಮೀಪದ ಹೋಂಸ್ಟೇಗೆ ಕರೆದೊಯ್ದು ತೀವ್ರ ವಿಚಾರಣೆ ನಡೆಸಿ  ಬಿಟ್ಟು ಕಳುಹಿಸಿದ್ದರು. 

ಬಳಿಕ 6 ಮಂದಿ ಪೊಲೀಸರ ತಂಡ  ಕೃಷ್ಣನ ಮನೆಗೆ ಬಂದು ಮನೆ ಮಂದಿಯ ಮೊಬೈಲ್‌ ಸಂಖ್ಯೆಗಳನ್ನು ಪಡೆದು ಬೆದರಿಕೆ ಹಾಕಿತ್ತು ಎಂದು ಆರೋಪಿಸಲಾಗಿದೆ. ಇದರಿಂದ  ನೊಂದು ಜಯಕುಮಾರ್‌ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶವಾಗಾರದ ಮುಂಭಾಗ ಪ್ರತಿಭಟನೆ ನಡೆಸಿದರು. ಸ್ಥಳಕ್ಕಾಗಮಿಸಿದ ಪೊಲೀಸ್‌ ಅಧೀಕ್ಷಕ ಸುಂದರ್‌ ರಾಜ್‌, ಮೃತನ ಸಂಬಂಧಿಕರು ಮತ್ತು ದಲಿತ ಸಂಘಟನೆಗಳ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿದರು.  ಪಿರಿಯಾಪಟ್ಟಣ ಪೊಲೀಸರು  ಯುವಕರಿಗೆ ವಿಚಾರಣೆ ಹೆಸರಲ್ಲಿ ದೈಹಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾರೆ. ಪೊಲೀಸರ ದೌರ್ಜನ್ಯ ಮತ್ತು ಬೆದರಿಕೆಗೆ ಹೆದರಿ ಜಯಕುಮಾರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರತಿಭಟನಕಾರರು ಆರೋಪಿಸಿದರು. 

ಚರ್ಚಿಸಿ ಕ್ರಮ: ಭರವಸೆ 
ದೈಹಿಕ ಹಲ್ಲೆ ನಡೆಸಿರುವ ಬಗ್ಗೆ ಮಾಹಿತಿ ಪಡೆಯಲಾಗುತ್ತದೆ. ಪ್ರತಿಭಟನೆ  ಕೈಬಿಟ್ಟು  ಮರಣೋತ್ತರ ಪರೀಕ್ಷೆಗೆ ಸಹಕರಿಸುವಂತೆ  ಅಧೀಕ್ಷಕ ಸುಂದರ್‌ ರಾಜ್‌ ಮನವಿ ಮಾಡಿದರು. ಮೇಲಧಿಕಾರಿಗಳ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು.  ಬಳಿಕ  ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡ ಲಾ ಯಿ ತು. 
 ವೃತ್ತ ನಿರೀಕ್ಷಕ ಅನೂಪ್‌ ಮಾದಪ್ಪ, ಠಾಣಾಧಿಕಾರಿ ಷಣ್ಮುಗ, ಗ್ರಾಮಾಂತರ ಠಾಣಾಧಿಕಾರಿ ಚೇತನ್‌, ದಲಿತ ಸಂಘಟನೆಯ ಮೋಹನ್‌ ಮೌರ್ಯ, ಎಚ್‌.ಪಿ. ಹರೀಶ್‌  ಮತ್ತಿತ್ತರರಿದ್ದರು. 

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.