ನಿರಾಶಾದಾಯಕ ಬಜೆಟ್‌ : ಪಿ. ರಮೇಶ್‌

Team Udayavani, Feb 16, 2019, 1:00 AM IST

kas-buget.jpg

ಕಾಸರಗೋಡು: 2019-20 ನೇ ಸಾಲಿನ ಕಾಸರಗೋಡು ನಗರಸಭಾ ಬಜೆಟ್‌ ಕಾಸರಗೋಡು ನಗರವನ್ನು ದಶಕಗಳಷ್ಟು  ಹಿಂದಕ್ಕೆ ಕೊಂಡೊಯ್ದಿದ್ದು, ನಿರಾಶಾದಾಯಕ ಎಂದು ವಿಪಕ್ಷ ನಾಯಕ ಪಿ.ರಮೇಶ್‌ ಪ್ರತಿಕ್ರಿಯಿಸಿದ್ದಾರೆ.

ಕಳೆದ ವರ್ಷ ಮಂಡಿಸಿದ ಬಜೆಟ್‌ನಲ್ಲಿ ಸೂಚಿಸಿದ ಹಲವು ಯೋಜನೆಗಳು ಇನ್ನೂ ಸಾಕಾರಗೊಂಡಿಲ್ಲ. ಈ ಬಾರಿಯ ಬಜೆಟ್‌ ಕಳೆದ ವರ್ಷದ ಪ್ರತಿಯಾಗಿದೆ. ಕಳೆದ ವರ್ಷದ 50 ಕ್ಕೂ ಅಧಿಕ ಯೋಜನೆಗಳು ಇನ್ನೂ ಸಾಕಾರಗೊಂಡಿಲ್ಲ. ಈ ಬಾರಿ ಕೃಷಿ, ಮೀನುಗಾರಿಕೆ, ಶಿಕ್ಷಣ ಮೊದಲಾದವುಗಳನ್ನು ಅವಗಣಿಸಲಾಗಿದೆ.
 
ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಕಾಸರಗೋಡಿ ನಲ್ಲಿ ಇದರ ಪರಿಹಾರಕ್ಕೆ ಯಾವುದೇ ಸ್ಪಷ್ಟ ಯೋಜನೆಯಿಲ್ಲ.
ನುರಿತ ಉದ್ಯೋಗಸ್ಥರ ಕೊರತೆ ಮತ್ತು ಅಧಿಕಾರಿಗಳ ವರ್ಗಾವಣೆಯಿಂದಾಗಿ ಕಳೆದ ವರ್ಷದ ಹಲವು ಯೋಜನೆಗಳನ್ನು ಸಾಕಾರಗೊಳಿಸಲು ಸಾಧ್ಯವಾಗಿಲ್ಲ ಎಂದು ಬಜೆಟ್‌ನಲ್ಲಿ ಪ್ರಸ್ತಾವಿಸಿರುವುದರಿಂದ ನಗರಸಭೆಯ ಅಭಿವೃದ್ಧಿ ನಿರ್ವಹಣೆಯಲ್ಲಿನ ವೈಫ‌ಲ್ಯವನ್ನು ಒಪ್ಪಿಕೊಂಡಂತಾಗಿದೆ. ಈ ಕಾರಣದಿಂದಲೇ ಅಧಿಕಾರಾರೂಢ ಪಕ್ಷದ ಸದಸ್ಯರೂ ಕೂಡಾ ಬಜೆಟ್‌ನ್ನು ಧ್ವನಿಮತದಿಂದ ಸ್ವೀಕರಿಸಲಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಬಜೆಟ್‌ ಬಗ್ಗೆ ಆಡಳಿತ ಪಕ್ಷದ ಸದಸ್ಯರೂ ಡೆಸ್ಕ್ ಬಡಿದು ಸ್ವಾಗತಿಸಲಿಲ್ಲ ಎಂದರು.

ಪಲಾಯನವಾದ 
ಬಜೆಟ್‌ ಮಂಡನೆ ಪ್ರಕ್ರಿಯೆ ಬೆಳಗ್ಗೆ 11.15ಕ್ಕೆ ಮುಗಿದಿದ್ದರೂ, ಬಜೆಟ್‌ ಮೇಲಿನ ಚರ್ಚೆಯನ್ನು ಅಪರಾಹ್ನ 2.30ಕ್ಕೆ ಇರಿಸಿದ್ದು ಪಲಾಯನವಾದವಾಗಿದೆ ಎಂದು ಪ್ರತಿಕ್ರಿಯಿಸಿದ ಅವರು ಬಜೆಟ್‌ನಲ್ಲಿ ಯಾವುದೇ ಹೊಸತನವಾಗಲಿ, ಅಭಿವೃದ್ಧಿಗೆ ಅಗತ್ಯವಾದ ಯೋಜನೆಗಳಾಗಲಿ ಇಲ್ಲದಿರುವುದರಿಂದ ಚರ್ಚೆಯನ್ನು ಅಪರಾಹ್ನಕ್ಕೆ ಇರಿಸಿದೆ ಎಂದಿದ್ದಾರೆ.
 
ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.