ಮುಗಿಯದ ಗೊಂದಲ: ಅಧ್ಯಕ್ಷರ ಬದಲಾವಣೆಗೆ‌ ಜೆಡಿಎಸ್‌ ಗಡುವು

Team Udayavani, Mar 18, 2019, 12:30 AM IST

s-25.jpg

ಮಡಿಕೇರಿ: ಜಾತ್ಯತೀತ ಜನತಾದಳ(ಜೆಡಿಎಸ್‌)ದ ಕೊಡಗು ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್‌ ಅವರ ನೇಮಕಾತಿಯನ್ನು ರದ್ದುಪಡಿಸದಿದ್ದಲ್ಲಿ ಬಿ.ಎ.ಜೀವಿಜಯ ನೇತೃತ್ವದಲ್ಲಿ ಕುಶಾಲನಗರದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮುಂದಿನ  ನಡೆಯ ಬಗ್ಗೆ ತೀರ್ಮಾನಿಸಲಾಗುವುದು ಎಂದು ಪಕ್ಷದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಯಾಲ ದಾಳು ಡಾ| ಮನೋಜ್‌ ಬೋಪಯ್ಯ, ಪಕ್ಷದ ವರಿಷ್ಠರು ಕಾರ್ಯಕರ್ತರ ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಮತ ನೀಡ ಬೇಕೆಂಬ ನಿರ್ಧಾರ ಕೈಗೊಳ್ಳಲಿರುವುದಾಗಿ ಹೇಳಿದರು.  ಜಿಲ್ಲೆಯಲ್ಲಿ ಜೆಡಿಎಸ್‌ಗೆ ತನ್ನದೇ ಆದ ಅಸ್ತಿತ್ವವಿಲ್ಲ. ಮಾಜಿ ಸಚಿವ ಬಿ.ಎ.ಜೀವಿಜಯ ಅವರಿಂದಾಗಿ ಜಿಲ್ಲೆಯಲ್ಲಿ ಜೆಡಿಎಸ್‌ ಜೀವಂತವಾಗಿದೆ. ಗಣೇಶ್‌ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಲು ಪಕ್ಷದ ಕಾರ್ಯಕರ್ತರು ಸಿದ್ಧರಿಲ್ಲ ಎಂದು ಹೇಳಿದರು.

 ತಮ್ಮ ಬೆಂಬಲಿಗರು ಎಂಬ ಕಾರಣಕ್ಕಾಗಿ ಪಕ್ಷದ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಅವರು ಪಕ್ಷದ ಜಿಲ್ಲೆಯ ಪ್ರಮುಖರ ಅಭಿಪ್ರಾಯವನ್ನು ಪಡೆಯದೆ ಕೆಲವೇ ಮಂದಿಯ ಒತ್ತಾಯಕ್ಕೆ ಮಣಿದು ಕೆ.ಎಂ.ಗಣೇಶ್‌ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಆದರೆ ಜಿಲ್ಲೆಯಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ಯಾವುದೇ ಪ್ರಮುಖರು, ಕಾರ್ಯಕರ್ತರು ಗಣೇಶ್‌ ಅವರನ್ನು ಅಧ್ಯಕ್ಷರನ್ನಾಗಿ ಒಪ್ಪಿಕೊಳ್ಳಲು ಸಿದ್ಧರಿಲ್ಲ ಎಂದರು.

 ಜಿಲ್ಲೆಯಲ್ಲಿ ಜೆಡಿಎಸ್‌ಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ 67 ಸಾವಿರ ಮತಗಳು ಲಭ್ಯವಾಗಿದ್ದರೆ ಅದಕ್ಕೆ ಜೀವಿಜಯ ಕಾರಣ. ಜೀವಿಜಯ ಅವರು ಯಾವುದೇ ಪಕ್ಷದಲ್ಲಿದ್ದರೂ, ಸುಮಾರು 60 ಸಾವಿರಕ್ಕೂ ಅಧಿಕ ಮತದಾರರು ಅವರ ಹಿಂದಿದ್ದಾರೆ ಎಂದು ತಿಳಿಸಿದರು. ಗಣೇಶ್‌ ಅವರನ್ನು ನೇಮಕ ಮಾಡಿರುವ ಆಘಾತದಿಂದ ಕಾರ್ಯಕರ್ತರು ಹೊರಬರುವ ಮೊದಲೇ ಅವರು ಪತ್ರಿಕಾ ಹೇಳಿಕೆ ನೀಡಿ, ಪಕ್ಷ ವಿರೋಧಿ ಚಟುವಟಿಕೆ ನಡೆಸುವುದು ಕಂಡು ಬಂದರೆ ಎಷ್ಟೇ ಹಿರಿಯರಾದರೂ ಅವರನ್ನು ಉಚ್ಛಾಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. ತಾಕತ್ತಿದ್ದರೆ ಜೀವಿಜಯ ಅವರನ್ನು ಪಕ್ಷದಿಂದ ಉಚ್ಚಾಟಿಸಲಿ ಎಂದು ಸವಾಲು ಹಾಕಿದರು.  

ಪಕ್ಷದ ಪರಿಶಿಷ್ಟ ಪಂಗಡ ಘಟಕದ ರಾಜ್ಯ ಉಪಾಧ್ಯಕ್ಷ ಎಸ್‌.ಎನ್‌.ರಾಜಾರಾವ್‌ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್‌.ಎಂ.ಡಿಸಿಲ್ವಾ ಮಾಜಿ ಜಿಲ್ಲಾ ಉಪಾಧ್ಯಕ್ಷ ಎ.ಬಿ.ಜಯಮ್ಮ  ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಜಾನಕಿ ವೆಂಕಟೇಶ್‌ ಹಾಗೂ  ಪ್ರಸ್ಸಿ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.