ಕೀಳುಮಟ್ಟದ ರಾಜಕಾರಣಿ ನಾನಲ್ಲ :ಗಣೇಶ್‌ ತಿರುಗೇಟು

Team Udayavani, Mar 18, 2019, 12:30 AM IST

s-25.jpg

ಮಡಿಕೇರಿ: ಕೊಡಗು ಜಿಲ್ಲಾ ಜಾತ್ಯತೀತ ಜನತಾದಳ ಪಕ್ಷವನ್ನು ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬೂತ್‌ ಮಟ್ಟದಿಂದ ಸಶಕ್ತವಾಗಿ ಕಟ್ಟಿ,  ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲಾಗುತ್ತದೆ ಎಂದು ತಿಳಿಸಿರುವ ಜೆಡಿಎಸ್‌ ನೂತನ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್‌, ಪಕ್ಷ ಸಂಘಟನೆಯನ್ನು ಮೀರಿ ಪಕ್ಷಕ್ಕೆ ಅಗೌರವವನ್ನು, ಮುಜುಗರವನ್ನು ಉಂಟು ಮಾಡುವ ಹಾಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸುವವರನ್ನು ಪಕ್ಷದಿಂದಲೇ ಅಮಾನತುಗೊಳಿಸಲಾಗುವುದು ಎಂದು ಹೇಳಿದರು. 

 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ, ಕೀಳು ಮಟ್ಟದ ರಾಜಕೀಯ ಮಾಡುವವನು ನಾನಲ್ಲ, ತಾನು ಬಿಜೆಪಿಯೊಂದಿಗೆ ಶಾಮೀಲಾಗಿದ್ದೇನೆ, ಹಿಂದಿನ ಚುನಾವಣೆಯಲ್ಲಿ ನನ್ನ ಬೂತ್‌ನಲ್ಲೆ ಜೆಡಿಎಸ್‌ಗೆ ಮತಗಳಿಲ್ಲ ಎನ್ನುವವರಿಗೆ ಬೂತ್‌ ಬಗ್ಗೆ ಮಾಹಿತಿ ಇಲ್ಲವೆಂದು ವ್ಯಂಗ್ಯವಾಡಿದರು.

ಯಾವುದೇ ಪಕ್ಷದಲ್ಲಿ ನೂತನ ಅಧ್ಯಕ್ಷರ ಆಯ್ಕೆಯ ಸಂದರ್ಭ ವಿರೋಧಗಳು ಸಾಮಾನ್ಯ. ಇಂದು ತನ್ನನ್ನು ವಿರೋಧಿಸುವವರು ಮುಂದೆ ಪಕ್ಷ ಸಂಘಟನೆಯ ಹಂತದಲ್ಲಿ ತನ್ನೊಂದಿಗೆ ಕೈಜೋಡಿಸುವ ವಿಶ್ವಾಸವಿದೆ. ಜಿಲ್ಲೆಯ ಜೆಡಿಎಸ್‌ ಮುಖ್ಯಸ್ಥರಾದ  ಬಿ.ಎ.ಜೀವಿಜಯ ಅವರಿಗೆ ಅವರ ಪುತ್ರ ಸಂಜಯ್‌ ಜೀವಿಜಯ ಜಿಲ್ಲಾಧ್ಯಕ್ಷನಾಗಬೇಕೆನ್ನುವ ಆಕಾಂಕ್ಷೆ ಇದ್ದಿರಬಹುದು. ಆದರೆ, ನಾನು ಕೇಳದಿದ್ದರೂ ಪಕ್ಷದ ವರಿಷ್ಟರು ಜಿಲ್ಲಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ನನಗೆ ನೀಡಿದ್ದಾರೆ.

 ಮರಳಿ ಗೂಡಿಗೆ ಆಂದೋಲನ 
 ಪ್ರಸ್ತುತ ಜಿಲ್ಲಾ ಜಾತ್ಯತೀತ ಜನತಾ ದಳದಿಂದ ದೂರ ಉಳಿದವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಮರಳಿ ಗೂಡಿಗೆ ಆಂದೋಲನವನ್ನು ನಡೆಸುವ ಮೂಲಕ ಪಕ್ಷದ ಬಲವರ್ಧನೆಗೆ ಮುಂದಾಗುವುದಾಗಿ ಕೆ.ಎಂ. ಗಣೇಶ್‌ ತಿಳಿಸಿದರು. ಜೆಡಿಎಸ್‌ ಮಾಜಿ ಜಿಲ್ಲಾಧ್ಯಕ್ಷ ಸಂಕೇತ್‌ ಪೂವಯ್ಯ ಮಾತನಾಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರು ತಮ್ಮ ಆರು ದಶಕಗಳ ರಾಜಕೀಯದಲ್ಲಿ ಎಂದಿಗೂ ದುಡುಕಿ ನಿರ್ಧಾರಗಳನ್ನು ಕೈಗೊಂಡಿಲ್ಲ. ಈಗಲೂ ಕೊಡಗು ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಬಗ್ಗೆ ರಾಜ್ಯಾಧ್ಯಕ್ಷರೊಂದಿಗೆ ಚರ್ಚಿಸಿ ಕೆ.ಎಂ.ಗಣೇಶ್‌ ಅವರನ್ನು ಆಯ್ಕೆಮಾಡಿದ್ದು, ಇದು ತರಾತುರಿಯ ನಿರ್ಧಾರವೂ ಅಲ್ಲವೆಂದು ಹೇಳಿದರು.

 ಜೆಡಿಎಸ್‌ ವೀರಾಜಪೇಟೆ ಕ್ಷೇತ್ರದ ಅಧ್ಯಕ್ಷ ಮತೀನ್‌, ಜಿಲ್ಲಾ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಸಿ.ಎಲ್‌.ವಿಶ್ವ,  ಪ್ರಧಾನ ಕಾರ್ಯದರ್ಶಿ ಜಾಸಿರ್‌ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಕುಸುಮಾ  ಮೊದಲಾದವರು ಉಪಸ್ಥಿತರಿದ್ದರು
 
ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.