ಕುಟ್ಟ ಸರಕಾರಿ ಆಸ್ಪತ್ರೆಯಲ್ಲಿ ಸಾವಿನ ಸರಣಿ : ಪ್ರತಿಭಟನೆ

Team Udayavani, Mar 21, 2019, 1:00 AM IST

kutta-sarakari-aspatre.jpg

ಮಡಿಕೇರಿ: ಕೊಡಗಿನ ಗಡಿಭಾಗವಾದ ಕುಟ್ಟ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರನ್ನು ನೇಮಿಸುವಂತೆ  ಆಗ್ರ ಹಿಸಿ ಸಾರ್ವಜನಿಕರು  ನಾಗರಹೊಳೆ – ಕೇರಳ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. 

ಕುಟ್ಟದ ನಿವಾಸಿ, ಟ್ಯಾಕ್ಸಿ ಚಾಲಕ ಮಣಿ (48) ಅವರು ಬುಧವಾರ ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿ ತಾವೇ ವಾಹನ ಚಲಾ ಯಿಸಿಕೊಂಡು ಕುಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದಿದ್ದರು. ಆದರೆ ಅಲ್ಲಿ ವೈದ್ಯರು ಹಾಗೂ ಶುಶ್ರೂಷಕಿಯರು ಇಲ್ಲದ ಕಾರಣ ಸಕಾಲದಲ್ಲಿ ಚಿಕಿತ್ಸೆ ಲಭಿಸಿರಲ್ಲ. ಸ್ಥಳದಲ್ಲಿದ್ದ ಯುವಕರು ಅವರನ್ನು ಉಪಚರಿಸಿ ಖಾಸಗಿ ವೈದ್ಯರ ಬಳಿಗೆ ಕರೆದೊಯ್ದರಾದರೂ, ಅವರು ಕೊನೆಯುಸಿರೆಳೆದರು. 

ಕಳೆದ ವಾರವೂ ವೈದ್ಯರಿಲ್ಲದೆ  ಇಲ್ಲಿ ನಾಲ್ಕು ವರ್ಷದ ಮಗು ಮೃತ ಪಟ್ಟಿತ್ತೆನ್ನಲಾಗಿದ್ದು, ಖಾಯಂ ವೈದ್ಯರ ನೇಮಕಾತಿ ಆಗ್ರ ಹಿಸಿ ಸಾರ್ವಜನಿಕರು ಅಂದು ಕೂಡ ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದ್ದರು.  ಆಗ  ಸ್ಥಳಕ್ಕೆ ಭೇಟಿ ನೀಡಿದ್ದ ತಾಲೂಕು ವೈದ್ಯಾಧಿಕಾರಿ ಡಾ| ಯತಿರಾಜ್‌ ಅವರು ಎರಡು ದಿನಗಳ ಒಳಗಾಗಿ ಸೂಕ್ತ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದರು. ಅದು ಕಾರ್ಯರೂಪಕ್ಕೆ ಬಂದಿಲ್ಲ.

ಭರವಸೆ ಬಳಿಕ ಪ್ರತಿಭಟನೆ ವಾಪಸ್‌ 
ಸಾರ್ವಜನಿಕರು ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆದುಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ತಾಲೂಕು ವೈದ್ಯಾಧಿಕಾರಿ ಡಾ| ಯತಿರಾಜ್‌ ಅವರು ಪ್ರತಿಭಟನಕಾರರೊಂದಿಗೆ ಮಾತನಾಡಿ, ಈಗ ವಾರದ ಎರಡು ದಿನ ಕುಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಾ| ಸತೀಶ್‌ ಅವರನ್ನು ವಾರದ ಎಲ್ಲ ದಿನಗಳಲ್ಲೂ ಇಲ್ಲಿ ಮುಂದುವರಿಸಲಾಗುವುದು. ಹುದಿಕೇರಿ, ಬಾಳೆಲೆ ಹಾಗೂ  ಶ್ರೀಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಪ್ರತಿ ಎರಡು ದಿನಗಳಿಗೊಮ್ಮೆ ರಾತ್ರಿ ಪಾಳಿಯಲ್ಲಿ ಈ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವಂತೆ ಮಾಡುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.