ಮಹಿಳೆಯರು ಸಬಲರಾಗಲಿ: ಎಂ.ರೂಪಕಲಾ


Team Udayavani, Mar 9, 2019, 7:31 AM IST

mahileyaru-sa.jpg

ಕೆಜಿಎಫ್: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನದಂದು ಮಹಿಳೆಯರ ಸಬಲೀಕರಣದ ಬಗ್ಗೆ ಮಾತುಗಳು ಕೇಳಿ ಬರುತ್ತಿದೆ. ಮಹಿಳೆ ಸಾಮರ್ಥ್ಯವನ್ನು ಸಾರ್ವಜನಿಕರು ಮುಕ್ತವಾಗಿ ಪ್ರಶಂಸಿಸಿದಾಗ ಮತ್ತು ಗೌರವ ಕೊಟ್ಟಾಗ ಸಬಲೀಕರಣ ನಿಜವಾಗುತ್ತದೆ ಎಂದು ಶಾಸಕಿ ಎಂ.ರೂಪಕಲಾ ಅಭಿಪ್ರಾಯಪಟ್ಟರು. ನಗರದ ವಕೀಲರ ಸಂಘದಿಂದ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ಶಿಕ್ಷಣ ಕೊಡಿಸಿ: ಮಹಿಳೆ ಸಾಕ್ಷರತೆ ಹೊಂದಿರಲಿ, ಇಲ್ಲದೆ ಇರಲಿ, ಆಕೆಯ ಸಾಮರ್ಥ್ಯ ಗುರುತಿಸಬೇಕಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯನ್ನು ಸಂಪೂರ್ಣ ಸಾಕ್ಷರಳನ್ನಾಗಿ ಮಾಡಬೇಕಾಗಿದೆ ಎಂದರು.

ಆದರ್ಶ: ದೇಶದಲ್ಲಿ ಮಹಿಳೆಯರು ಉನ್ನತ ಹುದ್ದೆ ಅಲಂಕರಿಸಿ ಇತರರಿಗೆ ಮಾದರಿಯಾಗಿದ್ದಾರೆ. ಮದರ್‌ ತೆರೇಸಾ, ಇಂದಿರಾಗಾಂಧಿ, ಜಸ್ಟೀಸ್‌ ಆನಂದಿಗೋಪಾಲ್‌ ಜೋಶಿ, ಕಲ್ಪನಾ ಚಾವ್ಲಾ, ಡಾ.ಮುತ್ತುಲಕ್ಷಿರೆಡ್ಡಿ, ವಕೀಲೆ ಕಾರಿ°ಲಾ ಸೋರಬ್ಜಿ, ಸಾಲು ಮರದ ತಿಮ್ಮಕ್ಕ ಮೊದಲಾದ  ಮಹಿಳೆಯರು ನಮ್ಮೊಡನೆ ಇದ್ದು ಮಹಿಳೆಯರಿಗೆ ಆದರ್ಶವಾಗಿದ್ದಾರೆ.  ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ದೇಶ ಸೇವೆಯಲ್ಲಿ ತೊಡಗಿದ್ದಾರೆಂದರು. 

ಮಹಿಳೆಯರು ಸಬಲೀಕರಣವಾಗಬೇಕಾದರೆ ಮೊದಲು ಅದು ಮನೆಯಿಂದಲೇ ಶುರುವಾಗಬೇಕು. ಈ ನಿಟ್ಟಿನಲ್ಲಿ ಕುಟುಂಬದ ಸದಸ್ಯರು ಮಹಿಳೆಗೆ ಮುಕ್ತ ಆಯ್ಕೆ ನೀಡಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ವಕೀಲರ ಸಂಘದ ಕೋರಿಕೆ ಮೇರಗೆ ಅಭಿವೃದ್ಧಿಗಾಗಿ 2 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ದೌರ್ಜನ್ಯ ತಡೆಗಟ್ಟಿ: 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಜಗದೀಶ್ವರ, ಪುರುಷ ಪ್ರಧಾನ ಸಮಾಜ ಆಕೆಯನ್ನು ಮನೆಯಲ್ಲಿಯೇ ಬಂಧಿಯನ್ನಾಗಿಸಿದೆ. ಪುರುಷರಿಗೆ ಸಮನಾದ ಹಕ್ಕುಗಳಿವೆ ಎಂಬುದನ್ನು ಮರೆತಿದೆ. ಪೋಕೊ ಕಾಯಿದೆ ಇನ್ನು ಜಾರಿಯಲ್ಲಿದೆ ಎಂದರೆ, ಅದಕ್ಕೆ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯವೇ ಕಾರಣ ಎಂದರು.

ಅನುದಾನ: ನಗರಸಭೆ ಆಯುಕ್ತ ಆರ್‌.ಶ್ರೀಕಾಂತ್‌ ಮಾತನಾಡಿ, ನಗರಸಭೆಯಿಂದ ಪರಿಶಿಷ್ಟಜಾತಿ ಮತ್ತು ವರ್ಗದ ವಕೀಲರಿಗೆ 5 ಲಕ್ಷ ಪ್ರೋತ್ಸಾಹ ಧನ ವಿತರಣೆ ಮಾಡಲಾಗಿದೆ. ಹಿಂದುಳಿದ ವರ್ಗದವರಿಗೆ 4.90 ಲಕ್ಷ ರೂ. ಅನುದಾನ ನೀಡಲಾಗುವುದು ಎಂದರು. ಅವರಿಗೆ ವೃತ್ತಿಗೆ ಬೇಕಾದ ಕಾನೂನು ಪುಸ್ತಕ ನೀಡಲಾಗುವುದು ಎಂದರು. 

ಅಮೃತ ಯೋಜನೆ ಮತ್ತು ನಗರೋತ್ಥಾನ ಯೋಜನೆಗೆ ಶಾಸಕಿಯವರು ಚುರುಕಾಗಿ ಚಾಲನೆ ನೀಡಿದ್ದಾರೆ. ಮಹಿಳೆಯಾಗಿ ಅವರು ಮಾಡಿರುವ ಕೆಲಸ ಶ್ಲಾಘನೀಯ ಎಂದು ಹೇಳಿದರು. ನ್ಯಾಯಾಧೀಶರಾದ ದಯಾನಂದ ಹಿರೇಮಠ, ಲೋಕೇಶ್‌, ವಕೀಲರ ಸಂಘದ ಅಧ್ಯಕ್ಷ ನಾಗರಾಜ್‌, ಕಾರ್ಯದರ್ಶಿ ಜ್ಯೋತಿಬಸು, ಕಲೈಸೆಲ್ವಿ, ಶಾಂತಮ್ಮ,  ಶ್ರೀನಿವಾಸ್‌, ಪ್ರೊಬೇಷನರಿ ನ್ಯಾಯಾಧೀಶರಾದ ಧನರಾಜ್‌ ಮತ್ತು ಕಿರಣ್‌ ಇದ್ದರು.

ನನಗೂ ನಿಂದಿಸಿದ್ದಾರೆ…: ಮಹಿಳೆಯರು ಮುಕ್ತವಾಗಿ ರಾಜಕೀಯಕ್ಕೆ ಬರಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆಕೆಯನ್ನು ನಿಂದಿಸುವ, ಚಾರಿತ್ರ ವಧೆ ಮಾಡುವ ಪ್ರವೃತ್ತಿ ಹೆಚ್ಚುತ್ತಿದೆ. ಈ ಎಲ್ಲಾ ಸನ್ನಿವೇಶಗಳು ತನಗೂ ಅನುಭವವಾಗಿದೆ. ಆದರೂ ಛಲ ಬಿಡದೆ ಸಾಮಾಜಿಕ ಸೇವೆ ಮಾಡಬೇಕೆನ್ನುವ ಉದ್ದೇಶದಿಂದ ರಾಜಕೀಯಕ್ಕೆ ಬರಬೇಕಾಯಿತು ಎಂದು ಶಾಸಕಿ ರೂಪಕಲಾ ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.