ವಿದ್ಯೆಗೆ ಸರಿಸಾಟಿ ಬೇರೊಂದಿಲ್ಲ: ಕುಕನೂರು 

Team Udayavani, Dec 5, 2018, 5:33 PM IST

5-december-23.gif

ಕುಕನೂರು: ನಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು ಯಾವುದೂ ಕೊನೆಯವರೆಗೂ ಉಳಿಯೋಲ್ಲ. ಆದರೆ ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜತೆಯಲ್ಲಿರುತ್ತದೆ ಎಂದು ಡಿಪ್ಲೊಮಾ ಕಾಲೇಜಿನ ಪ್ರಾಚಾರ್ಯ ಎನ್‌.ಆರ್‌. ಕುಕನೂರು ಅಭಿಪ್ರಾಯಪಟ್ಟರು. ಪಟ್ಟಣದ ವಿದ್ಯಾನಂದ ಗುರುಕುಲ ಶಾಲೆಯಲ್ಲಿ 2007-08 ಸಾಲಿನಲ್ಲಿ ಮೆಟ್ರಿಕ್‌ ಮುಗಿಸಿ ಹೋದ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜೀವನದಲ್ಲಿ ಗುರಿ, ಚಲ, ಗುರುವಿನ ಆಶೀರ್ವಾದ ಇದ್ದರೆ ಮಾತ್ರವೇ ವಿದ್ಯೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಸಾಧ್ಯ ಎಂದರು.

ಇಂದು ಯಾವುದೇ ಕೆಲಸ ಮಾಡಲಿ ಪ್ರಾಮಾಣಿಕತೆಯಿಂದ ಮಾಡಬೇಕು. ನಾವು ಏನಾದರೂ ಗಳಿಸಿದ್ದರೆ ಅದೆಲ್ಲವೂ ಈ ಸಮಾಜದಿಂದ ಗಳಿಸಿದ್ದೆ. ಹಾಗಾಗಿ ಈ ಸಮಾಜದಿಂದ ಪಡೆದ ಒಂದಷ್ಟನ್ನಾದರೂ ನಾವು ಮತ್ತೆ ಸಮಾಜಕ್ಕೆ ವಾಪಸ್‌ ಮಾಡಬೇಕಾಗುತ್ತದೆ. ಆ ಮೂಲಕ ಅಕ್ಷರ ಕಲಿಸಿದ ಗುರುಗಳು, ಜನ್ಮ ಕೊಟ್ಟ ಹೆತ್ತವರು, ಆಡಿ ಬೆಳೆದ ಭೂಮಿ ಋಣ ತೀರಿಸಲು ಸಾಧ್ಯವಾಗುತ್ತದೆ ಎಂದರು.

ಮುಖ್ಯ ಅತಿಥಿ ಎ.ಪಿ. ಮುಧೋಳ್‌ ಮಾತನಾಡಿ, ವಿಜ್ಞಾನ ತಂತ್ರಜ್ಞಾನ ಮುಂದುವರಿದ ಕಾಲದಲ್ಲಿ ವಿಶ್ವವೇ ಒಂದು ಗ್ರಾಮವಂತಾಗಿದೆ. ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಹುಟ್ಟಿದ ಊರು ಬಿಟ್ಟು ಬೇರೆಲ್ಲೋ ನೆಲೆಸಿದವರು ತಮ್ಮ ದಿನನಿತ್ಯದ ಒತ್ತಡ ಜೀವನದಲ್ಲಿ ಹುಟ್ಟಿದ ಊರು, ಹೆತ್ತವರು, ಅಕ್ಷರ ಕಲಿಸಿದ ಗುರುಗಳನ್ನು ನೆನೆಸಿಕೊಳ್ಳಲಾಗದ ಸ್ಥಿತಿಗೆ ತಲುಪಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಎಲ್ಲ ವಿದ್ಯಾರ್ಥಿಗಳೆಲ್ಲರನ್ನೂ ಒಟ್ಟುಗೂಡಿಸುವ, ತಮ್ಮ ಹಳೆಯ ದಿನಗಳನ್ನು ಮೆಲುಕು ಹಾಕುವಂತಹ ಸುಂದರ ಕ್ಷಣಗಳಿಗೆ ಸಾಕ್ಷಿಯಾದ ಇಂತಹ ಕಾರ್ಯಕ್ರಮ ಇದೀಗ ಅಗತ್ಯವಿದೆ ಎಂದರು.

ನಂತರ ಮಾತನಾಡಿದ ಪಿಯು ಕಾಲೇಜಿನ ಪ್ರಾಚಾರ್ಯ ಕೆ.ಆರ್‌. ಕುಲಕರ್ಣಿ, ಪಾಠ ಪ್ರವಚನಗಳಷ್ಟೇ ನಡೆಯುವುದಲ್ಲ. ಕ್ರಿಯಾತ್ಮಕ ಚಟುವಟಿಕೆಗಳು ನಡೆದಾಗಲೇ ಶಾಲೆಯೊಂದು ಶೈಕ್ಷಣಿಕ ಅಭಿವೃದ್ಧಿ ಜತೆಗೆ ಗ್ರಾಮದ ಅಭಿವೃದ್ಧಿಯಲ್ಲೂ ತನ್ನ ಪಾತ್ರ ವಿಸ್ತರಿಸಲು ಸಾಧ್ಯವಾಗುತ್ತದೆ. ಇಂತಹ ಕ್ರಿಯಾತ್ಮಕ ಚಟುವಟಿಕೆಗಳಿಂದ ವಿದ್ಯಾನಂದ ಗುರುಕುಲ ಸಂಸ್ಥೆಯ 2022ನೇ ವರ್ಷಕ್ಕೆ ಶತಮಾನೋತ್ಸವನ್ನು ಸಂಭ್ರಮಾಚರಣೆ ಇದೆ. 2007-08 ನೇ ಸಾಲಿನಲ್ಲಿ ಸಂಸ್ಥೆಯಲ್ಲಿ ಶಿಕ್ಷಣ ಪಡೆದು ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದಕ್ಕೆ ಎಲ್ಲ ಯುವಕರು, ಯುವತಿಯರು ಒಗ್ಗೂಡಿ ಯಶಸ್ವಿಗೊಳಿಸಿದ್ದು ಎಲ್ಲರಿಗೂ ಅಭಿನಂದಿಸಿದರು.

ಬಸಪ್ಪ ಮಾಸ್ಟರ, ಎಸ್‌.ಎಂ. ಮಾಳವಾಡ, ಎಚ್‌. ಎಸ್‌. ನೋಟಗಾರ, ಎನ್‌.ಕೆ.ದಿಧೀಕ್ಷಿತ್‌, ದತ್ತಪ್ಪ ಮಾಸ್ಟರ, ಅನ್ವರ್‌ ಮಕಾಂದಾರ, ಚಂದ್ರು ಹೆಳವಾರ, ದುರುಗಪ್ಪ ಗಡ್ಡದವರ, ಪ್ರಸ್ತತ ಶಾಲೆಯಲ್ಲಿ ಶಿಕ್ಷಕರಾಗಿರುವ ರಾಜು ಪೂಜಾರ, ರಾಜು ಪಾಟೀಲ, ಶಿವಕುಮಾರ ಹೆಳವಾರ, ಗೀತ ಪದಕಿ ಹಾಗೂ ಮತ್ತಿತರರಿದ್ದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.