ಚರ್ಚೆಗೆ ಸೀಮಿತ ಸಮಾನಾಂತರ ಜಲಾಶಯ

Team Udayavani, Feb 11, 2019, 10:15 AM IST

11-february-19.jpg

ಗಂಗಾವತಿ: ಈ ಭಾಗದ ಜೀವನಾಡಿಯಾದ ತುಂಗಭದ್ರಾ ಜಲಾಶಯ ನಿರ್ಮಿಸಿ ಆರು ದಶಗಳೇ ಕಳೆದಿದ್ದು, ಜಲಾಶಯದಲ್ಲಿ ನೀರಿನ ಸಂಗ್ರಹ ಸಾಮರ್ಥ್ಯ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಹೂಳು ತುಂಬಿಕೊಂಡಿರುವುದೇ ಇದಕ್ಕೆ ಪ್ರಮುಖ ಕಾರಣ ಎಂದು ನೀರಾವರಿ ತಜ್ಞರು ವರದಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಸುಮಾರು 33 ಟಿಎಂಸಿ ಅಡಿಯಷ್ಟು ಹೂಳು ಸಂಗ್ರಹವಾಗಿರುವ ಕಾರಣ ಜಲಾಶಯದಲ್ಲಿ ಎರಡು ಬೆಳೆಗಾಗುವಷ್ಟು ನೀರನ್ನು ಸಂಗ್ರಹಿಸಲು ಆಗುತ್ತಿಲ್ಲ. ಕಳೆದ ನಾಲ್ಕೈದು ವರ್ಷಗಳಿಂದ ಅಚ್ಚುಕಟ್ಟು ಪ್ರದೇಶದ ರೈತರು ಮುಂಗಾರಿನಲ್ಲಿ ಒಂದೇ ಬೆಳೆ ಬೆಳೆಯಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ತುಂಗಭದ್ರಾ ಜಲಾಶಯ 123 ಟಿಎಂಸಿ ಅಡಿ ನೀರಿನ ಸಂಗ್ರಹ ಸಾರ್ಮಥ್ಯ ಹೊಂದಿದ್ದು, ಇದರಲ್ಲಿ ಹೂಳಿನ ಪರಿಣಾಮ ನಾಲ್ಕೈದು ವರ್ಷಗಳಿಂದ 97 ಟಿಎಂಸಿ ಅಡಿಗೂ ಕಡಿಮೆ ನೀರು ಸಂಗ್ರಹವಾಗುತ್ತಿದೆ. ಹೂಳನ್ನು ತೆಗೆಸುವ ಕುರಿತು ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಅನೇಕ ಬಾರಿ ಭರವಸೆ ಮತ್ತು ಹೋರಾಟ ಮಾಡುವ ನೆಪದಲ್ಲಿ ಜನರಿಂದ ಮತಗಳನ್ನು ಪಡೆದಿವೆ. ಅಧಿಕಾರಕ್ಕೆ ಬಂದ ನಂತರ ಹೂಳಿನ ಬಗ್ಗೆ ಚಕಾರವೆತ್ತುತ್ತಿಲ್ಲ. ಕೇಂದ್ರ ಮತ್ತು ರಾಜ್ಯ ಸರಕಾರ ಮಂಡನೆ ಮಾಡಿದ ಬಜೆಟ್‌ಗಳಲ್ಲಿಯೂ ಹೂಳಿನ ಸಮಸ್ಯೆ ನಿವಾರಣೆಗೆ ಪ್ರಸ್ತಾಪಿಸಿಲ್ಲ. 2012ರಲ್ಲಿ ತಜ್ಞರ ಸಮಿತಿ ಹೂಳು ತೆಗೆಯುವುದು ಅವೈಜ್ಞಾನಿಕ. ಇದರ ಬದಲಿಗೆ ಮಳೆಗಾಲದಲ್ಲಿ ಪೋಲಾಗುವ ನೀರನ್ನು ಸಮಾನಾಂತರ ಜಲಾಶಯ ನಿರ್ಮಿಸುವ ಸಂಗ್ರಹಿಸಬೇಕು. ಅಚ್ಚುಕಟ್ಟು ಪ್ರದೇಶದಲ್ಲಿರುವ ಕೆರೆ, ಕಟ್ಟೆಗಳನ್ನು ತುಂಬಿಸಿ ಬೇಸಿಗೆಯಲ್ಲಿ ಸಂಗ್ರಹಿಸಿದ ನೀರನ್ನು ಬಳಕೆ ಮಾಡಿಕೊಳ್ಳಲು ವರದಿಯಲ್ಲಿ ಸಲಹೆ ನೀಡಲಾಗಿದೆ. ಅದರಂತೆ ಕನಕಗಿರಿ ತಾಲೂಕಿನ ನವಲಿ ಗ್ರಾಮದ ಹತ್ತಿರ 37 ಟಿಎಂಸಿ ಅಡಿ ನೀರನ್ನು ಸಂಗ್ರಹ ಮಾಡಲು ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ವಿಸ್ತೃತ ವರದಿ ಸಿದ್ಧಪಡಿಸಲಾಗಿದೆ. ತುಂಗಭದ್ರಾ ಜಲಾಶಯ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೂ ಸಂಬಂಧಿಸಿರುವುದರಿಂದ ಮೂರು ರಾಜ್ಯಗಳ ಒಪ್ಪಿಗೆ ಅಗತ್ಯವಾಗಿದೆ. ರಾಜ್ಯ ಸರಕಾರ ಮೂರು ರಾಜ್ಯಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ಕರೆದು ಸಮನಾಂತರ ಜಲಾಶಯ ನಿರ್ಮಾಣ ಕುರಿತು ಮಾತುಕತೆ ನಡೆಸಬೇಕು. ಕಳೆದ 10 ವರ್ಷಗಳಿಂದ ಸಮಾಂತರ ಜಲಾಶಯದ ಕುರಿತು ಮುಖಂಡರು ಹೇಳಿಕೆ ನೀಡುತ್ತಿದ್ದಾರೆಯೇ ಹೊರತು ಕಾರ್ಯ ಮಾಡುತ್ತಿಲ್ಲ. ಪ್ರತಿ ಬಜೆಟ್ ಮಂಡನೆ ವೇಳೆ ಅಚ್ಚುಕಟ್ಟು ರೈತರು ಹೂಳು ಮತ್ತು ಸಮನಾಂತರ ಜಲಾಶಯ ನಿರ್ಮಾಣದ ಕುರಿತು ಆಶಾಭಾವ ಹೊಂದಿರುತ್ತಾರೆ. ನಂತರ ನಿರಾಸೆಯಾಗುತ್ತಾರೆ.

ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿದ್ದರಿಂದ ನೀರು ಸಂಗ್ರಹ ಕಡಿಮೆಯಾಗಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ತೊಂದರೆಯಾಗಿದೆ. ಪ್ರತಿ ಬೇಸಿಗೆ ಸಂದರ್ಭದಲ್ಲಿ ಎಲ್ಲಾ ರಾಜಕೀಯ ಮುಖಂಡರು ಪ್ರತಿಭಟನೆ ನೆಪದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಹೂಳು ತೆಗೆಸುವ ಅಥವಾ ಸಮಾನಾಂತರ ಜಲಾಶಯ ನಿರ್ಮಿಸುವ ಇಚ್ಛಾಶಕ್ತಿ ಯಾರಿಗೂ ಇಲ್ಲ. ಜಲಾಶಯದಲ್ಲಿ ಸಂಗ್ರಹವಾದ ನೀರನ್ನು ಮೇಲ್ಭಾಗದ ಹಾಗೂ ಕೆಳಭಾಗದ ರೈತರು ಬಳಕೆ ಮಾಡಲು ಜಗಳವಾಡುವಂತೆ ರಾಜಕೀಯ ಮುಖಂಡರು ಷಡ್ಯಂತ್ರ ನಡೆಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ನವಲಿ ಹತ್ತಿರ ನಿರ್ಮಿಸಲುದ್ದೇಶಿಸಿರುವ ಸಮಾನಾಂತರ ಜಲಾಶಯದ ಕುರಿತು ಕೇಂದ್ರ ಹಾಗೂ ರಾಜ್ಯ ಸರಕಾರದ ಬಜೆಟ್‌ನಲ್ಲಿ ಪ್ರಸ್ತಾಪಿಸದೇ ಇರುವುದು ಖಂಡನೀಯ.
•ಕನಕರೆಡ್ಡಿ ಕುಮಾರಪ್ಪ, ಸಿಂಗನಾಳ ರೈತ

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.