ಕುಂದಾಪುರ: ಶ್ರೀನಿವಾಸ ಶೆಟ್ಟರೇ ಮುಂದಿನ ಶಾಸಕ

Team Udayavani, Nov 14, 2017, 9:02 AM IST

14-6.jpg

ಕುಂದಾಪುರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಸ್ಪರ್ಧಿಸಲಿದ್ದು, ಅವರೇ ಮುಂದಿನ ಶಾಸಕರಾಗುವುದು ನಿಶ್ಚಿತ. ಈಗ ಬಿಜೆಪಿ ಸೇರ್ಪಡೆಗೆ ತಾಂತ್ರಿಕ ಅಡಚಣೆಯಿದ್ದು, ಜನವರಿ ಯಲ್ಲಿ ಹಾಲಾಡಿ ಅವರು ಬಿಜೆಪಿಗೆ ಸೇರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಘೋಷಿಸಿದರು.

ಬಿಜೆಪಿ ಆಯೋಜಿಸಿರುವ ಪರಿ ವರ್ತನಾ ಯಾತ್ರೆಯ ಪ್ರಯುಕ್ತ ಸೋಮವಾರ ಕುಂದಾಪುರದ ನೆಹರೂ ಮೈದಾನದಲ್ಲಿ ನಡೆದ 
ಬೃಹತ್‌ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಯಡಿಯೂರಪ್ಪ ಅವರು ಮಾತನಾಡಿದರು. ಹಾಲಾಡಿ ಅವರೇ ಮುಂದಿನ ಬಿಜೆಪಿ ಅಭ್ಯರ್ಥಿ. ಅದನ್ನು ವಿರೋ ಧಿಸುವವರು ಗೂಂಡಾ ಕಾರ್ಯಕರ್ತರು. ವಿರೋಧಿಗಳಿದ್ದರೆ ಕೂಡಲೇ ಎದ್ದು ಹೋಗಿ ಎಂದ ಅವರು ಮುಂದಿನ ಜನವರಿಯಲ್ಲಿ ಹಾಲಾಡಿ ಅವರು ಬಿಜೆಪಿಗೆ ಸೇರಿ ನಮ್ಮೊಂದಿಗೆ ಕೈಜೋಡಿಸಲಿದ್ದಾರೆ ಎಂದರು.

ಬೆಳಗಾವಿಯಲ್ಲಿ ಸೋಮವಾರ ದಿಂದ ಆರಂಭವಾದ ವಿಧಾನಮಂಡ ಲದ ವಿಶೇಷ ಅಧಿವೇಶನದಲ್ಲಿ  ಕೇವಲ ಇಬ್ಬರು ಮಾತ್ರ ಪಾಲ್ಗೊಂಡಿ ರುವುದು ನಾಚಿಕೆಗೇಡಿನ ಸಂಗತಿ. ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡಬೇಕಿದ್ದ ಸರಕಾರಕ್ಕೆ ಬಡಜನರ ಬಗ್ಗೆ ಕಳಕಳಿ ಇಲ್ಲ. ಕಾಂಗ್ರೆಸ್‌ ಸರಕಾರಕ್ಕೆ ಜನಹಿತ ಬೇಕಿಲ್ಲ. ಸರಕಾರಿ ಆಸ್ಪತ್ರೆಯನ್ನು ಖಾಸಗಿಯವರಿಗೆ ಕೊಡುತ್ತಿದ್ದಾರೆ. ವೈದ್ಯರ ಬಗ್ಗೆಯೂ ಕಾಳಜಿ ಇಲ್ಲ. ಹಿಂದುಳಿದ ವರ್ಗಗಳ ಕಲ್ಯಾಣ ಮಾಡುತ್ತೇವೆಂದು ಕಳಪೆ ಗುಣಮಟ್ಟದ ಬಟ್ಟೆಗಳನ್ನು ವಿತರಿಸುತ್ತಿದ್ದಾರೆ ಎಂದು ಆರೋಪಿಸಿದರು.

ತೆರಿಗೆ ಕಟ್ಟಿದವರಿಗೆ ತೊಂದರೆ ಆಗಿಲ್ಲ
ನೋಟು ಅಪಮೌಲ್ಯ ಮಾಡಿದ್ದರಿಂದ ತೊಂದರೆ ಆಗಿದೆ ಎಂದು ಸಚಿವರು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಮುಖಂಡ ಜಯಪ್ರಕಾಶ್‌ ಹೆಗ್ಡೆ, ತೆರಿಗೆ ಕಟ್ಟಿದವರಿಗೆ ಯಾವುದೇ ತೊಂದರೆ ಆಗಿಲ್ಲ. ಹೆಚ್ಚು ಹಣ ಇದ್ದವರಿಗೆ ಮಾತ್ರ ಸಮಸ್ಯೆ ಆಗಿದೆ ಎಂದು ಲೇವಡಿ ಮಾಡಿದರು.

ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಮಾಜಿ ಸಚಿವ ಶ್ರೀರಾಮುಲು, ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಪ್ರಸ್ತಾವನೆಗೈದರು.
ಮಾಜಿ ಸಂಸದೆ ತೇಜಸ್ವಿನಿ ರಮೇಶ್‌, ಮಾಜಿ ಶಾಸಕರಾದ ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಬಿಜೆಪಿ ನಾಯಕರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಉದಯ್‌ ಕುಮಾರ್‌ ಶೆಟ್ಟಿ, ಕಿರಣ್‌ ಕುಮಾರ್‌ ಕೊಡ್ಗಿ, ಕಿಶೋರ್‌ ಕುಮಾರ್‌, ರಾಜೇಶ್‌ ಕಾವೇರಿ, ದಿನಕರ ಬಾಬು, ಕುಯಿಲಾಡಿ ಸುರೇಶ್‌ ನಾಯಕ್‌, ಯಶ್‌ಪಾಲ್‌ ಸುವರ್ಣ, ಬೈಕಾಡಿ ಸುಪ್ರಸಾದ್‌ ಶೆಟ್ಟಿ, ಕುತ್ಯಾರು ನವೀನ್‌ ಶೆಟ್ಟಿ, ಭಾರತಿ ಶೆಟ್ಟಿ, ಶೀಲಾ ಕೆ. ಶೆಟ್ಟಿ, ಶ್ಯಾಮಲಾ ಕುಂದರ್‌, ನಳಿನಿ ಪ್ರದೀಪ್‌ ರಾವ್‌, ಗೀತಾಂಜಲಿ ಸುವರ್ಣ, ಜಯಶ್ರೀ ಮೊಗವೀರ, ಅರುಣ್‌ ಕುಮಾರ್‌, ರಾಘವೇಂದ್ರ ಕಾಂಚನ್‌ ಮತ್ತಿತರರು ಉಪಸ್ಥಿತರಿದ್ದರು.

ಸಭೆಯಲ್ಲಿ ಹಾಲಾಡಿ ಭಾಗಿ
ಕುಂದಾಪುರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಸಭೆ ಆರಂಭವಾದೊಡನೆ ಕಾರ್ಯಕರ್ತರ ನಡುವೆ ಬಂದು ಕುಳಿತುಕೊಂಡು ಎಲ್ಲ ನಾಯಕರ ಮಾತುಗಳನ್ನು ಆಲಿಸಿದರು. ಬಿ.ಎಸ್‌. ಯಡಿಯೂರಪ್ಪ ಅವರು ವೇದಿಕೆ ಬಳಿ ಆಗಮಿಸುವಾಗ ಶ್ರೀನಿವಾಸ ಶೆಟ್ಟರು ಹೂಗುತ್ಛ ನೀಡಿ ಸ್ವಾಗತಿಸಿದರು.

ಕುಂದಾಪುರ ಬಿಜೆಪಿ ಕೇತ್ರಾಧ್ಯಕ್ಷ ಕಾಡೂರು ಸುರೇಶ್‌ ಶೆಟ್ಟಿ ಸ್ವಾಗತಿಸಿದರು. ಸತೀಶ್‌ ಪೂಜಾರಿ ಅವರು ಕಾರ್ಯಕ್ರಮ ನಿರ್ವಹಿಸಿದರು.

“ಕಸಬ್‌ ಜಯಂತಿಯೂ ಮಾಡ್ತಾರೆ’
ಕಾಂಗ್ರೆಸ್‌ಗೆ ನಾಡು-ನುಡಿಯ ಬಗ್ಗೆ ಕಲ್ಪನೆಯೇ ಇಲ್ಲ. ಈ ಮಣ್ಣಿನ ಬಗ್ಗೆ ಅಭಿಮಾನವಿಲ್ಲ. ಟಿಪ್ಪು ಜಯಂತಿಗೆ ಸಾರ್ವಜನಿಕರು ಸೇರಿದಂತೆ ಎಲ್ಲೆಡೆಯಿಂದ ಪ್ರಬಲ ವಿರೋಧವಿದ್ದರೂ ಆಚರಿಸಿದರು. ಇದಿಷ್ಟೇ ಅಲ್ಲ. ಬಿಟ್ಟರೆ ಮುಂದಿನ ದಿನಗಳಲ್ಲಿ ಕಸಬ್‌ಜಯಂತಿಯನ್ನೂ ಆಚರಿಸುತ್ತಾರೆ. ದೇಶದ್ರೋಹಿಗಳೇ ಅವರೇ ಬೇಕಾಗಿರುವುದು. ದೇಶದ್ರೋಹಿಗಳ ವೋಟಿಗಾಗಿ ಏನು ಬೇಕಾದರೂ ಮಾಡ್ತಾರೆ. ಜನರಿಗೆ ಹೊಸ ವ್ಯವಸ್ಥೆ ಬೇಕಿದೆ. ಅದಕ್ಕಾಗಿ ಬದಲಾವಣೆ ಅನಿವಾರ್ಯ. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಬೇಕಿದೆ. ಮೇಲೆ ಮೋದಿ ಸರಕಾರವಿದ್ದು, ಇಲ್ಲಿಯೂ ನಮ್ಮ ಸರಕಾರ ಬಂದರೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಅನುಕೂಲವಾಗುತ್ತದೆ ಎಂದು ಕೇಂದ್ರ ಸಚಿವ ಅನಂತ ಕುಮಾರ್‌ ಹೆಗಡೆ ಅವರು ಹೇಳಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.