ಶಾಲೆಗೆ ಹೋದರೆ ಸಾಕು; ಸಾವಿರ ರೂ. ಕೊಡ್ತಾರೆ!

Team Udayavani, Jun 12, 2018, 3:18 PM IST

kalumargi-school.jpg

ಸಿದ್ದಾಪುರ: ಶಾಲೆಗೆ ಲಕ್ಷಗಟ್ಟಲೆ ಡೊನೇಷನ್‌ ಕೊಟ್ಟು ಮಕ್ಕಳನ್ನು ಸೇರಿಸುವುದಿದೆ. ಆದರೆ ಈ ಶಾಲೆಯಲ್ಲಿ ಮಕ್ಕಳನ್ನು ಸೇರಿಸಿದರೆ ಒಂದು ಸಾವಿರ ರೂ. ಕೊಡುತ್ತಾರೆ!

ಹಲವು ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವಿದ್ದರೂ ಮಕ್ಕಳನ್ನು ಸೇರಿಸುವ ಪೋಷಕರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಹಾಗಾಗಿ ಕೊಂಜಾಡಿ ಗ್ರಾಮದ ಕಲ್ಮರ್ಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇಂಥ ವಿನೂತನ ಪ್ರಯತ್ನದಲ್ಲಿ ತೊಡಗಿ ದಾಖಲಾತಿ ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ.

ದಾಖಲಾತಿ ಹೆಚ್ಚಳ
ಶಾಲೆಯು 1959ರಲ್ಲಿ ಆರಂಭಗೊಂಡು ಸಾವಿರಾರು ಮಕ್ಕಳಿಗೆ ವಿದ್ಯಾಭ್ಯಾಸ ನೀಡಿದೆ. ಕ್ರಮೇಣ ಶಾಲೆಯಲ್ಲಿ ಖಾಯಂ ಶಿಕ್ಷಕರ ಕೊರತೆ ಎದುರಾಗಿತ್ತು. ಈ ಭಾಗದ ಸಾಕಷ್ಟು ಮಕ್ಕಳು ಬೇರೆ ಶಾಲೆಗಳಿಗೆ ಹೋಗಿ 13 ಮಂದಿ ಮಾತ್ರ ಉಳಿದಿದ್ದರು. ಶಾಲೆ ಮುಚ್ಚುವ ಹಂತಕ್ಕೆ ಹೋದಾಗ ಊರವರು ಶಿಕ್ಷಕರಿಗಾಗಿ ಹೋರಾಟ ನಡೆಸಿದರು. ಪರಿಣಾಮವಾಗಿ 2016-17ರಲ್ಲಿ ಖಾಯಂ ಶಿಕ್ಷಕಿಯ ನೇಮಕ, ಅನಂತರ ಮುಖ್ಯ ಶಿಕ್ಷಕರ ನೇಮಕವಾಯಿತು. ಈ ವರ್ಷ ಶಿಕ್ಷಕರು ಹೆತ್ತವರೊಂದಿಗೆ ಮನೆಮನೆ ಭೇಟಿ ನೀಡಿ, ಶಾಲೆಯಲ್ಲಿನ ಸೌಲಭ್ಯಗಳ ಬಗ್ಗೆ ತಿಳಿಸಿದ್ದರ ಪರಿಣಾಮ ದಾಖಲಾತಿ ಏರಿಕೆಯಾಗಿದೆ.

28ಕ್ಕೇರಿದ ಸಂಖ್ಯೆ
ವಿದ್ಯಾರ್ಥಿಯ ದಾಖಲಾತಿ ಬಳಿಕ ವಾರ್ಷಿಕ 1 ಸಾವಿರ ರೂ.ಗಳನ್ನು ಶಾಲೆಯಿಂದ ಅವರ ಹೆಸರಿಗೆ ಬಾಂಡ್‌ ಆಗಿ ಇಡಲು ದಾನಿಗಳು ಸಹಕರಿಸುತ್ತಿದ್ದಾರೆ. 2017-18ರ ಸಾಲಿನಲ್ಲಿ ಸಾವಿರ ರೂ. ಬಾಂಡ್‌ ಯೋಜನೆಯನ್ನು ಪರಿಚಯಿಸಲಾಗಿದ್ದು, ಒಟ್ಟು 26 ಮಕ್ಕಳಿಗೆ ಬಾಂಡ್‌ ಇರಿಸಲಾಗಿತ್ತು. ಪ್ರಸ್ತುತ ಸಾಲಿನಲ್ಲಿ ಆರು ಮಕ್ಕಳಿಗೆ ಅದೇ ಸೌಲಭ್ಯ ಒದಗಿಸಲಾಗಿದೆ. ಈಗ ಒಟ್ಟು 28 ಮಕ್ಕಳ ಹೆಸರಲ್ಲಿ ಬಾಂಡ್‌ ಅನ್ನು ಬೆಳ್ವೆಯ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ಇಡಲಾಗಿದೆ. ಈ ಬಾಂಡ್‌ಗೆ ಯಾವುದೇ ಷರತ್ತು ಇಲ್ಲ. 4ನೇ ತರಗತಿಗೆ ಮಕ್ಕಳನ್ನು ಸೇರಿಸಿದರೂ 1 ಸಾವಿರ ರೂ. ವಾರ್ಷಿಕ ಬಾಂಡ್‌ ಲಭ್ಯವಾಗಲಿದೆ. ನಡುವೆ ಶಾಲೆ ತೊರೆದರೂ ಬಾಂಡ್‌ ಹಣ ಸಂದಾಯವಾಗಲಿದೆ.

ಸಕಲ ಸೌಲಭ್ಯ
ವಿದ್ಯಾರ್ಥಿಗಳಿಗೆ ಉಚಿತ ವಾಹನ ವ್ಯವಸ್ಥೆ, ನೋಟ್ಸ್‌ ಪುಸ್ತಕ, ಬ್ಯಾಗ್‌, ಕ್ರೀಡಾ ಪರಿಕರಗಳು ಇತ್ಯಾದಿ ಸೌಲಭ್ಯವಲ್ಲದೇ, ಪಠ್ಯೇತರ ಚಟುವಟಕೆ ಮೂಲಕ ಬೆಳವಣಿಗೆಗೆ ಅವಕಾಶ ಕಲ್ಪಿಸಲಾಗುತ್ತಿದೆ.

ನಮ್ಮ ಶಾಲೆಯಲ್ಲಿ ಶಿಕ್ಷಕರು ಚೆನ್ನಾಗಿ ಕಲಿಸುವುದರೊಂದಿಗೆ ವಿದ್ಯಾರ್ಥಿಗಳ ಬಗ್ಗೆ ಉತ್ತಮ ಕಾಳಜಿ ತೋರುತ್ತಿದ್ದಾರೆ. ಅದುವೇ ನಮಗೆ ಖುಷಿ.    
– ನಿತಿನ್‌, ವಿದ್ಯಾರ್ಥಿ

ಸರಕಾರಿ ಶಾಲೆ ಉಳಿಸಿ ಕೊಳ್ಳಲು ಶಿಕ್ಷಣ ಇಲಾಖೆ ಹಾಗೂ ದಾನಿಗಳು ಸಹಕರಿಸಿದ್ದಾರೆ. ಗುಣಮಟ್ಟದ ಶಿಕ್ಷಣ ನೀಡಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ. ಹೆತ್ತವರು ಮಕ್ಕಳನ್ನು ಶಾಲೆಗೆ ದಾಖಲಿಸಬೇಕು.
-ಸುರೇಶ ಶೆಟ್ಟಿ ,  ಮುಖ್ಯ ಶಿಕ್ಷಕ

ಮಕ್ಕಳಿಗೆ ಸಿಗುವ ಸೌಲಭ್ಯಗಳ ಕುರಿತು ಹೆತ್ತವರಿಂದ ಉತ್ತಮ ಪ್ರತಿಕ್ರಿಯೆ ಕಂಡು ಬರುತ್ತಿರುವುದು ಪ್ರಶಂಸನೀಯ. ಹೆತ್ತವರು ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಿ ಶಾಲೆಯ ಏಳಿಗೆಗೆ ಸಹಕರಿಸಬೇಕು.
-ಜಯರಾಮ ಶೆಟ್ಟಿ ತೊನ್ನಾಸೆ, ನಿವೃತ್ತ ಪ್ರಾಂಶುಪಾಲರು

– ಸತೀಶ್‌ ಆಚಾರ್‌ ಉಳ್ಳೂರು

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.