ಬೇಳೂರು: ಕೋಣಬಗೆಯಲ್ಲೊಂದು ಡೆಡ್ಲಿ ಬ್ರಿಜ್‌

Team Udayavani, Aug 18, 2018, 6:00 AM IST

1608tke4-3.jpg

ವಿಶೇಷ ವರದಿ –ತೆಕ್ಕಟ್ಟೆ: ಬೇಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹಿರೆ ಹೊಳೆಗೆ ಅಡ್ಡಲಾಗಿರುವ ಕೋಣಬಗೆ -ಅಚ್ಲಾಡಿ ಸಂಪರ್ಕ ಸೇತುವೆ ಅಪಾಯದಲ್ಲಿದ್ದು ಈ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಅಪಾಯದಲ್ಲಿ ಕಿರು ಸೇತುವೆ
ಸುಮಾರು 40 ವರ್ಷ ಹಿಂದೆ ನಿರ್ಮಾಣ ಗೊಂಡಿರುವ ಸೇತುವೆ ಸುತ್ತಮುತ್ತಲ ಪ್ರದೇಶದಲ್ಲಿ ಬೇಸಗೆಯಲ್ಲಿ ಹಿತಾಚಿ ಯಂತ್ರಗಳನ್ನು ಬಳಸಿ ಅವ್ಯಾಹತವಾಗಿ ಮರಳುಗಾರಿಕೆ ನಡೆಸುವ ಪರಿಣಾಮ ಸೇತುವೆ ಮುರಿದು ಅಪಾಯದ ಮಟ್ಟವನ್ನು ತಲುಪಲು ಕಾರಣವಾಗಿದೆ. ಮಳೆಗಾಲದಲ್ಲಿ ನೀರಿನ ಒಳಹರಿವಿನ ತೀವ್ರತೆ ಹೆಚ್ಚಾಗಿರುವುದರಿಂದ ಈಗಾಗಲೇ ಸೇತುವೆ ಮಧ್ಯ ಭಾಗ ಮುರಿದು ಹೋಗಿದ್ದು ಯಾವ ಕ್ಷಣದಲ್ಲಿಯೂ ಅಪಾಯ ಸಂಭವಿಸುವ ಸಾಧ್ಯತೆ ದಟ್ಟವಾಗಿದೆ ಎಂದು ಹಿರಿಯ ಕೃಷಿಕ ಸದಾಶಿವ ಶೆಟ್ಟಿ ಅವರು ತೀವ್ರಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೇಳೂರು -ಅಚ್ಲಾಡಿ ಪ್ರಮುಖ ಸಂಪರ್ಕ ಕೊಂಡಿ 
ಬೇಳೂರು ಗ್ರಾಮದಿಂದ ಅಚ್ಲಾಡಿ ಗ್ರಾಮಗಳಿಗೆ ಪ್ರಮುಖ ಸಂಪರ್ಕ ಸೇತುವಿನಿಂದಾಗಿ ಎರಡು ಗ್ರಾಮಗಳಿಗೆ ಸುಮಾರು 2 ಕಿ.ಮೀ. ಸಮೀಪದ ಅಂತರದಲ್ಲಿ ಸಂಧಿಸಬಹುದು. ಇಲ್ಲದಿದ್ದಲ್ಲಿ ಸುಮಾರು 8 ಕಿ.ಮೀ. ಸುತ್ತುವರಿದು ದೂರ ಕ್ರಮಿಸಬೇಕಾದ ಅನಿವಾರ್ಯ ಪರಿಸ್ಥಿತಿ ಇಲ್ಲಿನ ಗ್ರಾಮಸ್ಥರದ್ದು.

ಸೇತುವೆ ಮೇಲ್ದರ್ಜೆ ಅಗತ್ಯ
ಮುಂದಿನ ದಿನಗಳಲ್ಲಿ ವೈಜ್ಞಾನಿಕವಾಗಿ ಈ ಕಿರು ಸೇತುವೆ ಮೇಲ್ದರ್ಜೆ ಏರಿಸಿ ವ್ಯವಸ್ಥಿತವಾದ ರಸ್ತೆ ನಿರ್ಮಾಣವಾದರೆ ಬೇಳೂರು -ಅಚ್ಲಾಡಿ ಗ್ರಾಮಗಳ ನಡುವೆ ಸಂಪರ್ಕ ವೃದ್ಧಿಯಾಗಿ ಇಲ್ಲಿನ ನೂರಾರು ಕೃಷಿಕರು, ಹೈನುಗಾರರು ಮಾತ್ರವಲ್ಲದೆ ಗ್ರಾಮದ ಅಭಿವೃದ್ಧಿಗೆ ಸಹಕಾರಿಯಾಗುವುದು ಮಾತ್ರ ವಾಸ್ತವ ಸತ್ಯ.

ಅಪಾಯದ ಸಂಚಾರ
ಹಲವು ದಶಕಗಳ ಕನಸಾಗಿರುವ ಪ್ರಮುಖ ಸಂಪರ್ಕ ರಸ್ತೆ ಕಲ್ಪಿಸುವ ಬಗ್ಗೆ ಸಾರ್ವಜನಿಕರಿಂದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಮನವಿ ಸಲ್ಲಿಸಿದ್ದೇವೆ. ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಭರವಸೆ ನೀಡಿದ್ದಾರೆ .ಶಿಥಿಲಗೊಂಡ ಈ ಸೇತುವೆಯ ಮೇಲೆ ಗ್ರಾಮಸ್ಥರು ಅಪಾಯದ ನಡುವೆ ಸಂಚರಿಸಬೇಕಾದ ಅನಿವಾರ್ಯತೆ ಇದೆ. ಮಳೆಗಾಲದಲ್ಲಿ ಸಂಭವನೀಯ ಅವಘಡಗಳು ಸಂಭವಿಸುವ ಮೊದಲು ಸಂಬಂಧಪಟ್ಟವರು ಗಮನಹರಿಸಬೇಕಾಗಿದೆ. 
– ಮಧುಕರ ಶೆಟ್ಟಿ ಬೇಳೂರು, 
ಸಾಮಾಜಿಕ ಕಾರ್ಯಕರ್ತರು

ಸೇತುವೆ ಮಧ್ಯದಲ್ಲಿ ಬಿರುಕು 
ಅತ್ಯಂತ ನೇರವಾಗಿ ನಿರ್ಮಾಣವಾಗಿದ್ದ ಈ ಕಿರು ಸೇತುವೆ ಪ್ರಸ್ತುತ ಮುರಿದು ಹೋಗಿ ಅಪಾಯದ ಮಟ್ಟವನ್ನು ತಲುಪಿದೆ. ಸೇತುವೆ ಮಧ್ಯದಲ್ಲಿ ಬಿರುಕು ಬಿಟ್ಟಿದ್ದು ಸಂಪೂರ್ಣ ಶಿಥಿಲಗೊಂಡಿದೆ. ಈ ನಡುವೆ ಗ್ರಾಮಸ್ಥರು ಅಪಾಯದ ತೀವ್ರತೆ ಅರಿಯದೆ ನಿತ್ಯ ಸಂಚಾರ ನಡೆಸುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಸ್ಥಳೀಯಾಡಳಿತ ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿರುವುದು ಖೇದಕರ.
– ರವಿಕುಮಾರ್‌ ಶೆಟ್ಟಿ, ಅಧ್ಯಕ್ಷರು, ಹಿಂದೂ ಯುವಸೇನೆ ಬೇಳೂರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.