ಬಸ್ರೂರು ಮೂಲದ ವ್ಯಕ್ತಿ ಕುವೈಟ್‌ನಲ್ಲಿ ಬಂದಿ

Team Udayavani, Aug 29, 2018, 4:00 AM IST

shankar-pojary-28-8.jpg

ಕುಂದಾಪುರ: ಊರಿನಿಂದ ಬೇರೆಯವರ ಮಾತ್ರೆ ಪಾರ್ಸೆಲನ್ನು ಕುವೈಟ್‌ಗೆ ತೆಗೆದುಕೊಂಡು ಹೋಗಿದ್ದ ಕುಂದಾಪುರ ತಾಲೂಕಿನ ಬಸ್ರೂರು ನಿವಾಸಿ ಶಂಕರ ಪೂಜಾರಿ (40) ಅವರು ಮೂರು ತಿಂಗಳಿಂದ ಕುವೈಟ್‌ ಜೈಲಿನಲ್ಲಿ ಬಂದಿಯಾಗಿದ್ದಾರೆ. ನಾಲ್ಕು ವರ್ಷಗಳಿಂದ ಕುವೈಟ್‌ನ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ನನ್ನ ಪತಿ ಮೂರು ತಿಂಗಳ ಹಿಂದೆ ಕೇವಲ 10 ದಿನಗಳ ರಜೆಯಲ್ಲಿ ಊರಿಗೆ ಬಂದಿದ್ದರು. ಅನಂತರ ಅವರು ಕುವೈಟಿಗೆ ವಾಪಸಾಗುವಾಗ ತನ್ನ ಸಹೋದ್ಯೋಗಿಯ ವಿನಂತಿಯಂತೆ ಉಡುಪಿಯ ವ್ಯಕ್ತಿಯೊಬ್ಬರು ನೀಡಿದ ಪಾರ್ಸೆಲ್‌ನ್ನು ಪಡೆದುಕೊಂಡಿದ್ದರು. ಅದನ್ನು ಕುವೈಟ್‌ನಲ್ಲಿ ಕೆಲಸ ಮಾಡುತ್ತಿರುವ ಅವರ ಅತ್ತೆಗೆ ತಲುಪಿಸುವಂತೆ ಅವರು ಹೇಳಿದ್ದರು’ ಎಂದು ಶಂಕರ ಪೂಜಾರಿಯವರ ಪತ್ನಿ ಜ್ಯೋತಿ ತಿಳಿಸಿದ್ದಾರೆ.

ಕುವೈಟ್‌ ವಿಮಾನ ನಿಲ್ದಾಣದಲ್ಲಿ ಇಳಿದಾಗ ಅವರನ್ನು ತಪಾಸಣೆಗೆ ಒಳಪಡಿಸಿದ ಪೊಲೀಸರಿಗೆ ಮಾತ್ರೆಗಳಿರುವ ಪಾರ್ಸೆಲ್‌ ಸಿಕ್ಕಿತ್ತು. ವಿಚಾರಣೆ ವೇಳೆ ಪತಿ, ಇದನ್ನು ತನ್ನ ಸಹೋದ್ಯೋಗಿಯ ವಿನಂತಿಯಂತೆ ಕುವೈಟ್‌ನಲ್ಲಿರುವ ಮಹಿಳೆಗೆ ನೀಡಲು ತಂದಿರುವುದಾಗಿ ಹೇಳಿದ್ದರು. ಆದರೆ ಪೊಲೀಸರ ಮುಂದೆ ಅವರ ಸಹೋದ್ಯೋಗಿ ನಮಗೂ ಪಾರ್ಸೆಲ್‌ಗ‌ೂ ಸಂಬಂಧ ಇಲ್ಲ ಎಂದು ಹೇಳಿಕೆ ನೀಡಿ ನನ್ನ ಪತಿಗೆ ಮೋಸಮಾಡಿದ್ದಾರೆ ಎಂದು ಜ್ಯೋತಿ ಆರೋಪಿಸಿದ್ದಾರೆ. ನನ್ನ ಪತಿ ಯಾವುದೇ ತಪ್ಪು ಮಾಡದಿದ್ದರೂ ಮೂರು ತಿಂಗಳಿಂದ ಕುವೈಟ್‌ ಜೈಲಿನಲ್ಲಿದ್ದಾರೆ. ಈ ಬಗ್ಗೆ ಸಂಸದರಾದ ನಳಿನ್‌ ಕುಮಾರ್‌ ಕಟೀಲು, ಶೋಭಾ ಕರಂದ್ಲಾಜೆ ಅವರ ಮೂಲಕ ಸಚಿವೆ ಸುಷ್ಮಾ ಸ್ವರಾಜ್‌ರಿಗೆ ಮನವಿ ಕೊಡಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಜ್ಯೋತಿ.

ಡಿಸಿ, ಎಸ್‌.ಪಿ.ಯಿಂದ ಮಾಹಿತಿ ಸಂಗ್ರಹ
ಕುವೈಟ್‌ನ ಜೈಲಿನಲ್ಲಿ ಬಂಧಿಯಾಗಿರುವ ಶಂಕರ್‌ ಪೂಜಾರಿ ಪ್ರಕರಣ ಸಂಬಂಧ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಇತರ ಅಧಿಕಾರಿಗಳ ಸಮ್ಮುಖ ಜ್ಯೋತಿ ಅವರನ್ನು ಆ. 28ರಂದು ತಮ್ಮ ಕಚೇರಿಗೆ ಕರೆಸಿ ಪ್ರಕರಣದ ಮಾಹಿತಿ ಪಡೆದುಕೊಂಡು ಕಾನೂನು ಪ್ರಕ್ರಿಯೆಗಳ ಬಗ್ಗೆ ಚರ್ಚಿಸಿದರು. ಎಸ್ಪಿ ಲಕ್ಷ್ಮಣ ಬ. ನಿಂಬರಗಿ, ಕುಂದಾಪುರದ ಸಹಾಯಕ ಆಯುಕ್ತ ಭೂಬಾಲನ್‌, ಮಾನವ ಹಕ್ಕುಗಳ ಪ್ರತಿಷ್ಠಾನದ ಅಧ್ಯಕ್ಷ ಡಾ| ರವೀಂದ್ರನಾಥ್‌ ಶ್ಯಾನುಭಾಗ್‌, ಕರವೇ ಜಿಲ್ಲಾಧ್ಯಕ್ಷ ಅನ್ಸಾರ್‌ ಅಹ್ಮದ್‌ ಉಪಸ್ಥಿತರಿದ್ದರು. 

ಶಂಕರ ಪೂಜಾರಿ ಅವರ ಪತ್ನಿಯನ್ನು ಕರೆಸಿ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ಆದರೆ ಅವರನ್ನು ಬಂಧಿಸಿದ ಕಾರಣದ ಬಗ್ಗೆ ಸ್ಪಷ್ಟತೆಯಿಲ್ಲದ ಕಾರಣ ನಾವೇ ಕುವೈಟ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಲಾಗುವುದು. ಅಲ್ಲಿನ ಮಾಹಿತಿಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.
– ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಉಡುಪಿ ಡಿಸಿ

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.