ಮಳೆ: ಆರಂಭದಲ್ಲೇ ಬಾಕಿಯಾದ ಶಾಸ್ತ್ರೀ ವೃತ್ತ

Team Udayavani, Jul 15, 2022, 11:05 AM IST

2

ಕುಂದಾಪುರ: ವಿನೂತನ ಮಾದರಿಯಲ್ಲಿ ರಚನೆಯಾಗಲಿರುವ ಇಲ್ಲಿನ ಶಾಸ್ತ್ರೀ ಸರ್ಕಲ್‌ ಕಾಮಗಾರಿ ಮಳೆಯಿಂದಾಗಿ ಆರಂಭದಲ್ಲೇ ಬಾಕಿಯಾಗಿದೆ.

ನೂತನ ವೃತ್ತ ಮೈಸೂರು ಜಯಚಾಮರಾಜೇಂದ್ರ ವೃತ್ತದ ಮಾದರಿಯಲ್ಲಿ ವಿನ್ಯಾಸವಾಗಲಿದೆ ಎಂದು ತಿಳಿಸಲಾಗಿತ್ತು. ಕುಂದಾಪುರ ಶಾಸ್ತ್ರೀ ಸರ್ಕಲ್‌, ಶಾಸ್ತ್ರೀ ಪಾರ್ಕ್‌ ಹೆಸರುವಾಸಿ. ಕುಂದಾಪುರಕ್ಕೆ ಎಲ್ಲಿಂದಲೇ ಬಂದರೂ ಬಸ್ಸಿನಿಂದಿಳಿಯಲು ಸೂಚನೆ ಕೊಡುವುದು ಇದೇ ವೃತ್ತವನ್ನು. ಯಾವುದೇ ಸ್ಥಳದ ಗುರುತು ಪರಿಚಯ ಹೇಳಬೇಕಾದರೂ ಶಾಸ್ತ್ರೀ ಸರ್ಕಲನ್ನು ಹೆಸರಿಸುತ್ತಾರೆ. ಇಲ್ಲಿ ದಾನಿಯೊಬ್ಬರು ನೀಡಿದ ಲಾಲ್‌ಬಹದ್ದೂರ್‌ ಶಾಸ್ತ್ರೀಗಳ ಸುಂದರ ಪ್ರತಿಮೆಯಿದೆ.

ಬೀಡಾಡಿ ತಾಣ

ಹಸುರು ಹುಲ್ಲಿನ ನಡುವೆ ಶಿಲೆಯ ಮೇಲೆ ಕೂರಿಸಲ್ಪಟ್ಟ ಶಾಸ್ತ್ರೀ ವಿಗ್ರಹವುಳ್ಳ ಸರ್ಕಲ್‌ ಈಚಿನ ದಿನಗಳಲ್ಲಿ ಬೀಡಾಡಿಗಳ ತಾಣವಾಗಿದೆ. ಆಶ್ರಯ ರಹಿತರು, ಮನೆಗೆ ಹೋಗದ ಸೋಮಾರಿಗಳು, ಕೂಲಿ ಕಾರ್ಮಿಕರು, ಕುಡಿತದ ಅಮಲಿನಲ್ಲಿ ಚಲಿಸಲಾರದವರು ವಿಶ್ರಾಂತಿ ತೆಗೆದುಕೊಳ್ಳುವ ಪ್ರದೇಶವಾಗಿದೆ. ರಾತ್ರಿ ವೇಳೆ ಮಲಗುವವರೂ ಇದ್ದಾರೆ. ಬೀಡಾಡಿ ದನಗಳಿಗೂ ಇದೇ ವಿಶ್ರಾಂತಿ ಧಾಮವಾಗಿದೆ. ಪ್ರತಿಮೆಗೂ ಸೂಕ್ತ ಭದ್ರತೆ ಇಲ್ಲ. ಶಾಸ್ತ್ರೀ ಸರ್ಕಲ್‌ನ ಸೌಂದರ್ಯ ಹೆಚ್ಚಿಸಬೇಕೆಂದು ಅನೇಕ ಸಮಯದಿಂದ ಬೇಡಿಕೆ ಇದೆ. ನಗರಕ್ಕೆ ಪ್ರವೇಶ ಮಾಡುವಾಗಲೇ ದೊರೆಯುವ ವೃತ್ತ ಇದಾದ ಕಾರಣ ಇದರ ಸೌಂದರ್ಯ ಕಂಡೇ ಸುಂದರ ಕುಂದಾಪುರ ಕಲ್ಪನೆಗೆ ಪೂರಕ ಮನಸ್ಥಿತಿ ನಿರ್ಮಾಣವಾಗುತ್ತದೆ ಎಂಬ ಮಾತಿದೆ. ಈ ನಿಟ್ಟಿನಲ್ಲಿ ಪುರಸಭೆ ವೃತ್ತ ನಿರ್ಮಾಣಕ್ಕೆ ಮುಂದಾಗಿದೆ.

ಬಾಕಿ

ಶಾಸ್ತ್ರೀ ಸರ್ಕಲ್‌ ಪುರಸಭೆ ವ್ಯಾಪ್ತಿಗೆ ಬರುತ್ತದೆ. ಅದರ ಉಸ್ತುವಾರಿ, ನಿರ್ವಹಣೆ, ನವೀಕರಣ ಎಲ್ಲವೂ ಪುರಸಭೆ ಪಾಲಿಗೆ. ಆದರೆ ಈವರೆಗೆ ಸರ್ಕಲ್‌ ಯಾಕೆ ನವೀಕರಣ ಕಾರ್ಯ ನಡೆದಿಲ್ಲ ಎನ್ನುವ ಪ್ರಶ್ನೆಗೆ ಉತ್ತರರೂಪದಲ್ಲಿ ಬೆರಳು ಹೋಗುವುದು ಹೆದ್ದಾರಿ ಪ್ರಾಧಿಕಾರದ ಕಡೆಗೆ. 10 ವರ್ಷಗಳ ಕಾಲ ಇಲ್ಲಿ ಹೆದ್ದಾರಿ ಕಾಮಗಾರಿ ಎಂದು ದಿನದೂಡಿದ್ದು, ಇದಕ್ಕೆ ವಸ್ತುಗಳನ್ನು ತಂದು ಹಾಕಲಾಗಿತ್ತು. ರಸ್ತೆ ಅಗೆದು ಹೊಸ ರಸ್ತೆ ಮಾಡದೇ ಬಾಕಿಯಾಗಿರುವುದರಿಂದ ವೃತ್ತದ ಆಧುನೀಕರಣ ಮಾಡಲು ಸಾಧ್ಯವಾಗಲಿಲ್ಲ. ಕಳೆದ ವರ್ಷ ಎಪ್ರಿಲ್‌ವರೆಗೆ ಅಂದರೆ ಫ್ಲೈಓವರ್‌ ಕಾಮಗಾರಿ ಪೂರ್ಣವಾಗುವವರೆಗೆ ಈ ವೃತ್ತದ ಸಮೀಪ ಹಾದು ಹೋದ ರಸ್ತೆಯೇ ರಾಷ್ಟ್ರೀಯ ಹೆದ್ದಾರಿಯಾಗಿತ್ತು. ಈಗಲೂ ವೃತ್ತದ ಸಮೀಪ ಹೋದ ರಸ್ತೆ ಸರ್ವಿಸ್‌ ರಸ್ತೆಯಾದರೂ ಕಾಮಗಾರಿ ಪೂರ್ಣಗೊಂಡು ಪ್ರಾಧಿಕಾರಕ್ಕೆ ಹಸ್ತಾಂತರವಾಗದ ಕಾರಣ ತಾಂತ್ರಿಕವಾಗಿ ಇದು ಹೆದ್ದಾರಿಯೇ ಆಗಿದೆ.

ಆಕ್ಷೇಪ

ನೂತನವಾಗಿ ನಿರ್ಮಾಣವಾಗುತ್ತಿರುವ ಕಾಮಗಾರಿ ಕುರಿತು ಆಕ್ಷೇಪ ಇದೆ. ಈಗ ನಿರ್ಮಾಣವಾಗುತ್ತಿರುವ ಸ್ಥಳದ ಬದಲು ತುಸು ಆಚೆಗೆ ವಿಶಾಲವಾಗಿ ಮಾಡಬೇಕಿತ್ತು, ಗುತ್ತಿಗೆ ನೀಡುವಲ್ಲೂ ಪ್ರಾದೇಶಿಕ ಅಸಮಾನತೆ ತೋರಲಾಗಿದೆ ಇತ್ಯಾದಿ ಆಕ್ಷೇಪಗಳಿವೆ. ಆದರೆ ಆಚೀಚೆ ಹೆದ್ದಾರಿ ಪ್ರಾಧಿಕಾರಕ್ಕೆ ಸೇರಿದ ಜಾಗ ಇರುವ ಕಾರಣ ಅಲ್ಲಿ ಪುರಸಭೆ ಕಾಮಗಾರಿ ನಿರ್ವಹಿಸುವಂತಿಲ್ಲ. ಮಳೆ ಬಂದ ಕಾರಣ ಮಳೆಯಲ್ಲಿ ಕಾಮಗಾರಿ ಮಾಡುವಂತಿಲ್ಲ. ಗುಂಡಿ ತೆಗೆದು ನೀರು ನಿಂತಿರುವುದರಿಂದ ಜನ, ಜಾನುವಾರಿಗೆ ಅಪಾಯಕಾರಿಯಾಗಿದೆ. ಇಷ್ಟಲ್ಲದೇ ಉದ್ದೇಶಿತ ಸ್ಥಳದಲ್ಲಿ ಎರಡು ಹೈಮಾಸ್ಟ್‌ ದೀಪಗಳಿವೆ. ಇವುಗಳ ಪೈಕಿ ಒಂದನ್ನಾದರೂ ತೆರವುಗೊಳಿಸಬೇಕಾಗುತ್ತದೆ. ವೃತ್ತವನ್ನು ಫ್ಲೈಓವರ್‌ನ ಅಂಡರ್‌ಪಾಸ್‌ ಸಮೀಪ ಮಾಡಿದರೆ ವಾಹನಗಳು ಬೇರೆ ಬೇರೆ ಕಡೆಯಿಂದ ಬರುವ ಕಾರಣ ಅನಗತ್ಯ ಗೊಂದಲ ಉಂಟಾಗುತ್ತದೆ. ಸಂಚಾರ ದಟ್ಟನೆ ಉಂಟಾಗುತ್ತದೆ. ಅಪಘಾತ ಸಾಧ್ಯತೆಗಳೂ ಇಲ್ಲದಿಲ್ಲ. ಈ ಎಲ್ಲ ಕಾರಣದಿಂದ ಪರಿಶೀಲನೆ ನಡೆಸಿಯೇ ಈಗ ಇರುವ ಜಾಗದಲ್ಲೇ ನೂತನ ವೃತ್ತ ನಿರ್ಮಾಣ ಮಾಡಲಾಗುತ್ತಿದೆ ಎನ್ನುತ್ತಾರೆ ಪುರಸಭೆ ಅಧಿಕಾರಿಗಳು.

ಮಳೆ ಬಿಟ್ಟ ಬಳಿಕ ಕಾಮಗಾರಿ: ವೃತ್ತಕ್ಕೆ ಸೂಕ್ತವಾದ ಜಾಗ ಯಾವುದು ಎಂದು ಮಂಗಳೂರಿನಿಂದ ಪರಿಣತರನ್ನು ಕರೆಸಿ ಅವರಿಂದ ಸರ್ವೆ ನಡೆಸಿ ವರದಿ ಪಡೆಯಲಾಗಿದೆ. ಮಳೆಯಲ್ಲಿ ಕಾಮಗಾರಿ ಬೇಡ ಎಂದು ನಿಲ್ಲಿಸಲಾಗಿದೆ. ಮಳೆ ಬಿಟ್ಟ ಬಳಿಕ ಕಾಮಗಾರಿ ನಡೆಯಲಿದೆ. ಉದ್ದೇಶಿತ ನೀಲ ನಕಾಶೆಯಂತೆಯೇ ವೃತ್ತ ರಚನೆಯಾಗಲಿದೆ. ಸಾಮಾನ್ಯಸಭೆಯಲ್ಲಿ ಚರ್ಚಿಸಿ ಪುರಸಭೆ ಆಡಳಿತ ನಿರ್ಣಯ ಕೈಗೊಂಡಂತೆಯೇ ವೃತ್ತದ ನಿರ್ಮಾಣ ನಡೆಯುತ್ತಿದ್ದು ಇ ಟೆಂಡರ್‌ ಮೂಲಕವೇ ಗುತ್ತಿಗೆ ನೀಡಲಾಗಿದೆ.  –ಗೋಪಾಲಕೃಷ್ಣ ಶೆಟ್ಟಿ, ಮುಖ್ಯಾಧಿಕಾರಿ, ಪುರಸಭೆ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.