ಪಾಂಗಾಳ: ಸಂಪರ್ಕ ರಸ್ತೆಯ ಮರು ಡಾಮರೀಕರಣಕ್ಕೆ ಜನಾಗ್ರಹ


Team Udayavani, Jan 9, 2019, 8:45 PM IST

kaupu-road-9-1.jpg

ಕಟಪಾಡಿ : ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿಗೆ ಬಲಿಯಾದ ಪಾಂಗಾಳ-ಆಲಡೆ ರಸ್ತೆ ದುರಸ್ತಿ ಕಾಣದೆ ಗ್ರಾಮಸ್ಥರು ಸಂಚಾರಕ್ಕೆ ಸಂಕಟ ಪಡುವುದರೊಂದಿಗೆ ಇಲಾಖಾಧಿಕಾರಿಗಳಿಗೆ ಹಿಡಿಶಾಪ ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೆದ್ದಾರಿ ನಿರ್ಮಾಣಗೊಂಡು ಕಳೆದ 5-6 ವರ್ಷಗಳಿಂದಲೂ ಸ್ಥಳೀಯರು, ಗ್ರಾಮಸ್ಥರು, ವಾಹನ ಸಂಚಾರಿಗಳು ತಮ್ಮ ಸಮಸ್ಯೆಗಳ ಬಗ್ಗೆ ಮನವಿಗಳನ್ನು ನೀಡುತ್ತಲೇ ಇದ್ದರು. ಕಾಪುವಿನಲ್ಲಿ ಉಡುಪಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲೂ ಗಮನ ಸೆಳೆದಿದ್ದರು. ಆದರೆ ಈವರೆಗೆ ಸಮಸ್ಯೆ ಬಗೆಹರಿದಿಲ್ಲ.

ಜಾತ್ರೆ ವೇಳೆ ಹೆಚ್ಚಿನ ದಟ್ಟನೆ
ಈ ರಸ್ತೆಯು ಈ ಭಾಗದ ಪ್ರಮುಖ ಇತಿಹಾಸ, ಕಾರಣಿಕ ಪ್ರಸಿದ್ಧ ಎರಡು ಆಲಡೆಗಳ ಸಹಿತ ಸುಮಾರು 80ರಷ್ಟು ಮನೆಗಳಿಗೆ ಸಂಪರ್ಕವನ್ನು ಕಲ್ಪಿಸುತ್ತದೆ. ನಿತ್ಯ ನೂರಾರು ಜನರು ಈ ರಸ್ತೆಯನ್ನೇ ಸಂಪರ್ಕಕ್ಕೆ ಆಶ್ರಯಿಸಿದ್ದಾರೆ. ವರ್ಷಕ್ಕೆ ಎರಡು ದಿನ ನಡೆಯುವ ಆಲಡೆಗಳ ಜಾತ್ರಾ ಸಂದರ್ಭ (ಸಿರಿ ಜಾತ್ರೆ) ಹೊರ ರಾಜ್ಯಗಳಿಂದಲೂ ಸಾವಿರಾರು ಮಂದಿ ಭಕ್ತರು ಆಗಮಿಸುತ್ತಾರೆ. ಈ ವೇಳೆ ವಾಹನ ಸಂಚಾರಕ್ಕೆ, ಪಾರ್ಕಿಂಗ್‌ಗೆ ಅಡೆತಡೆ ಉಂಟಾಗುತ್ತಿದ್ದು, ಜನರು ಬವಣೆ ಪಡುವಂತಾಗಿದೆ.

ವಾಹನ ಸಂಚರಿಸಲು ಹಿಂದೇಟು 
ಮಳೆಗಾಲದಲ್ಲಂತೂ ಇಲ್ಲಿನ ಈ ಮಣ್ಣಿನ ರಸ್ತೆಯ ಕೆಸರು ನೀರಿನ ಅಭಿಷೇಕ ತಪ್ಪಿದ್ದಲ್ಲ. ವಾಹನ ಸಂಚಾರವೂ ಕಷ್ಟಕರವಾಗಿದ್ದು, ಶಾಲಾ ವಾಹನಗಳೂ ಮಕ್ಕಳನ್ನು ಕರೆತರಲು ಈ ರಸ್ತೆಯಲ್ಲಿ ಸಂಚರಿಸಲು ಒಪ್ಪುತ್ತಿಲ್ಲ. ಈ ಬಗ್ಗೆ ಸ್ಥಳೀಯ ಇನ್ನಂಜೆ ಗ್ರಾ.ಪಂ. ಗಮನವನ್ನು ಗ್ರಾಮಸ್ಥರು ಸೆಳೆದಿದ್ದು ಪಂಚಾಯತ್‌ ಸಭೆಯಲ್ಲಿ ನಿರ್ಣಯ ಕೈಗೊಂಡು ಜಿಲ್ಲಾಧಿಕಾರಿ, ಹೆದ್ದಾರಿ ಇಲಾಖೆಗಳಿಗೆ ಸಮಸ್ಯೆಯನ್ನು ಪರಿಹರಿಸುವಂತೆ ಕೋರಿ ಪತ್ರವನ್ನೂ ಬರೆಯಲಾಗಿದೆ. ಇಷ್ಟಾದರೂ ಹೆದ್ದಾರಿ ಗುತ್ತಿಗೆದಾರರ ದಿವ್ಯ ನಿರ್ಲಕ್ಷ್ಯ, ಇಲಾಖಾಧಿಕಾರಿಗಳ ಮೌನದ ಬಗ್ಗೆ ಜನರು ಸಹನೆ ಕಳೆದುಕೊಂಡಿದ್ದಾರೆ.

ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಿ
ಪಾಂಗಾಳ-ಆಲಡೆ-ಮಂಡೇಡಿ ಸಂಪರ್ಕದ ಪ್ರಮುಖ ರಸ್ತೆ ಇದಾಗಿದೆ. ಹೆದ್ದಾರಿ ಕಾಮಗಾರಿಯಿಂದ ಇದ್ದ ಡಾಮರು ರಸ್ತೆಯನ್ನು ನಾವು ಕಳೆದುಕೊಳ್ಳುವಂತಾಗಿದೆ. ಮರು ಡಾಮರೀಕರಣ ಮಾಡಿಲ್ಲದಿರುವುದೇ ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣವಾಗಿದೆ. ಕೂಡಲೇ ಇಲಾಖೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು.
– ರಮಾನಂದ ಶೆಟ್ಟಿ, ಮುಕ್ಕಾಲಿ ಮನೆ

ಪ್ರತಿಫ‌ಲ ಶೂನ್ಯ 
ಈ ಸಮಸ್ಯೆಯನ್ನು ಜನಸ್ಪಂದನ ಸಭೆಯಲ್ಲಿ ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದಿದ್ದು, ಇದುವರೆಗೂ ಪ್ರತಿಫಲ ಶೂನ್ಯವಾಗಿದೆ. ಪಂಚಾಯತ್‌ ಸಾಮಾನ್ಯ ಸಭೆಯಲ್ಲೂ ಈ ಬಗ್ಗೆ ನಿರ್ಣಯದ ಮೂಲಕ ಹೆದ್ದಾರಿ ಇಲಾಖೆಗೂ ನೊಟೀಸ್‌ ನೀಡಲಾಗಿದೆ. ಆದರೂ ಯಾವುದೇ ರೀತಿಯಾದ ಪ್ರತಿಕ್ರಿಯೆ ಇಲ್ಲ. 
– ನಾಗೇಶ್‌ ಭಂಡಾರಿ, ಇನ್ನಂಜೆ ಗ್ರಾ.ಪಂ. ಸದಸ್ಯ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.