ನಾಲ್ಕು ವರ್ಷಗಳಿಂದ ಮುಚ್ಚಿದ ಕಳ್ಳಿಗುಡ್ಡೆ ಸಮುದಾಯ ಭವನ


Team Udayavani, Sep 10, 2018, 1:55 AM IST

kalligudde-9-9.jpg

ಬಸ್ರೂರು: ಬಳ್ಕೂರು ಗ್ರಾ.ಪಂ. ವ್ಯಾಪ್ತಿಯ ಕಳ್ಳಿಗುಡ್ಡೆಯಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹತ್ತಿರ ರೂ.40 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ವಿಶಾಲವಾದ ‘ಸಮುದಾಯ ಭವನ’ ಉಪಯೋಗ ಶೂನ್ಯವಾಗಿದೆ. 2014-15 ನೇ ಸಾಲಿನಲ್ಲಿ ವಾರಾಹಿ ನೀರಾವರಿ ಯೋಜನಾ ವಲಯದ ವತಿಯಿಂದ ಪ.ಜಾತಿಯ ಅನುದಾನದಡಿ ಪ.ಜಾತಿ ಮತ್ತು ಪ.ಪಂಗಡದವರಿಗಾಗಿ ನಿರ್ಮಿಸಲಾದ ಈ ಸಮುದಾಯ ಭವನವನ್ನು ಅಂದಿನ ಸಂಸದ ಕೆ.ಜಯಪ್ರಕಾಶ್‌ ಹೆಗ್ಡೆ 2014 ರಲ್ಲಿ ಉದ್ಘಾಟಿಸಿ ಬಳ್ಕೂರು ಗ್ರಾ.ಪಂ.ಗೆ ಹಸ್ತಾಂತರ ಮಾಡಿದ್ದರು. ನಂತರದ ನಾಲ್ಕು ವರ್ಷಗಳಲ್ಲಿ ಈ ಭವನದಲ್ಲಿ ಯಾವುದೇ ಸಭೆ-ಸಮಾರಂಭಗಳು ನಡೆದಿಲ್ಲ!

ಸೌಲಭ್ಯಗಳಿಲ್ಲ
ವಿಶಾಲವಾದ ಸಭಾಂಗಣದಲ್ಲಿ ಸಭಿಕರಿಗೆ ಕುಳಿತುಕೊಳ್ಳಲು ಒಂದೇ ಒಂದು ಕುರ್ಚಿ ಇಲ್ಲ. ಸಭೆ ನಡೆಸಲು ವೇದಿಕೆ ಇಲ್ಲ. ಬಟ್ಟೆ ಬದಲಿಸಲು ಕೊಠಡಿಯಿಲ್ಲ. ವಿಶ್ರಾಂತಿ ಕೋಣೆಯೂ ಇಲ್ಲ. ಮದುವೆ ಇತ್ಯಾದಿ ನಡೆಸುವುದಾದರೆ ಅಡುಗೆ ಕೋಣೆಯಿಲ್ಲ. ಕಳೆದ ವರ್ಷ ಸಮುದಾಯ ಭವನದ ಅವ್ಯವಸ್ಥೆಯ ಬಗ್ಗೆ ಬಳ್ಕೂರಿನಲ್ಲಿ ನಡೆದ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಪ್ರಶ್ನಿಸಿದ್ದರು. ಆದರೆ ಈವರೆಗೆ ಯಾವ ಪ್ರಯೋಜನ ಕೂಡ ಆಗಿಲ್ಲ.

ಪ್ರತಿಕ್ರಿಯೆ ಶೂನ್ಯ 
ಉಡುಪಿಯಲ್ಲಿ ದಲಿತ ಕುಂದು-ಕೊರತೆಗಳ ಸಭೆಯಲ್ಲಿ ಈ ಸಮುದಾಯ ಭವನದ ಅವ್ಯವಸ್ಥೆಯ ಬಗ್ಗೆ ಪ್ರಶ್ನಿಸಿದಾಗ ಪೋಲೀಸ್‌ ವರಿಷ್ಠಾಧಿಕಾರಿಗಳು ಶಾಸಕರಿಗೆ ಈ ಬಗ್ಗೆ ಕೊಟ್ಟ ಮನವಿ ಪತ್ರವನ್ನು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ನೀಡುವಂತೆ ಸೂಚಿಸಿದ್ದರು.  ಕಳ್ಳಿಗುಡ್ಡೆಯ ಸಮುದಾಯ ಭವನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶಶಿಧರ್‌ ಕಳ್ಳಿಗುಡ್ಡೆ ಅವರು ಶಾಸಕರ ಮನವಿಯನ್ನು ಜಿಲ್ಲಾ ಸಮಾಜ ಕಲ್ಯಾಣಿಧಿಕಾರಿಗಳಿಗೂ ಮತ್ತು ಜಿಲ್ಲಾಧಿಕಾರಿಗಳಿಗೂ ನೀಡಿದ್ದರು. ಆದರೆ ಫಲಿತಾಂಶ ಮಾತ್ರ ಶೂನ್ಯ.

ನಾವು ಇನ್ನೇನು ಮಾಡಬೇಕು?
ಬಳ್ಕೂರು ಗ್ರಾಮದ ಕಳ್ಳಿಗುಡ್ಡೆಯ ಸಮುದಾಯ ಭವನಕ್ಕೆ ಹಲವು ಮೂಲ ಸೌಕರ್ಯಗಳನ್ನು ಒದಗಿಸಿ ಕಾಯಕಲ್ಪಗೊಳಿಸುವುದಕ್ಕಾಗಿ ಅಭಿವೃದ್ಧಿ ಸಮಿತಿಯನ್ನು ಸ್ಥಳೀಯರಾದ ನಾವು ರಚಿಸಿಕೊಂಡಿದ್ದೇವೆ. ಈಗಾಗಲೇ ಶಾಸಕರಲ್ಲಿ ಚರ್ಚಿಸಿ ಅವರ ಮನವಿಯನ್ನು ಸಂಬಂಧಪಟ್ಟವರಿಗೆ ನೀಡಿದ್ದೇವೆ. ಉದ್ಘಾಟನೆಯಾಗಿ ನಾಲ್ಕು ವರ್ಷಗಳಾದರೂ ಈ ಭವನದಲ್ಲಿ ಯಾವುದೇ ಸಭೆ-ಸಮಾರಂಭಗಳು ನಡೆದಿಲ್ಲ. ನಾವು ಇನ್ನೇನು ಮಾಡಬೇಕು ಎಂದು ತೋಚುತ್ತಿಲ್ಲ.
– ಶಶಿಧರ್‌ ಕಳ್ಳಿಗುಡ್ಡೆ, ಅಧ್ಯಕ್ಷ, ಅಭಿವೃದ್ಧಿ ಸಮಿತಿ, ಸಮುದಾಯ ಭವನ

ಅನುದಾನದ ಕೊರತೆ
ಕಳ್ಳಿಗುಡ್ಡೆಯ ಸಮುದಾಯ ಭವನದ ಅವವ್ಯಸ್ಥೆಯನ್ನು ನೋಡಿದ್ದೇವೆ. ಈ ಭವನದ ಕಾರ್ಯಕಲ್ಪಕ್ಕಾಗಿ ಜಿಲ್ಲಾ ಸಮಾಜ ಕಲ್ಯಾಧಿಕಾರಿಗಳಿಗೆ ಮನವಿಯನ್ನು ನೀಡಿದ್ದೇವೆ ಗ್ರಾ.ಪಂ. ನಿಂದ ಹಲವು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅನುದಾನದ ಕೊರತೆಯಿದೆ.
– ಅಕ್ಷಶ್‌ ಶೇರೆಗಾರ್‌, ಅಧ್ಯಕ್ಷರು, ಗ್ರಾ.ಪಂ. ಬಳ್ಕೂರು

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.