ಇಸಿಜಿ ಯಂತ್ರ ಹೊಂದಿದ ಜಿಲ್ಲೆಯ ಮೊದಲ ಜನೌಷಧ ಕೇಂದ್ರ

Team Udayavani, Nov 17, 2018, 2:35 AM IST

ecg-machine-16-11.jpg

ಕುಂದಾಪುರ: ಇಲ್ಲಿನ ಸರಕಾರಿ ಆಸ್ಪತ್ರೆ ಬಳಿ ರೆಡ್‌ಕ್ರಾಸ್‌ ಸಂಸ್ಥೆ ಮೂಲಕ ಕೇಂದ್ರ ಸರಕಾರದ ವತಿಯಿಂದ ನಡೆಸಲ್ಪಡುತ್ತಿರುವ ಜನರಿಕ್‌ ಔಷಧ ಕೇಂದ್ರಕ್ಕೆ ಕೆಎಂಸಿ ಆಸ್ಪತ್ರೆಯ ಹೃದ್ರೋಗ ಚಿಕಿತ್ಸೆ ವಿಭಾಗ ಮುಖ್ಯಸ್ಥ ಡಾ| ಪದ್ಮನಾಭ ಕಾಮತ್‌ ಅವರ ‘ಮನೆ ಬಾಗಿಲಿಗೆ ಹೃದಯ ಚಿಕಿತ್ಸೆ’ ಯೋಜನೆಯ ಇಸಿಜಿ ಯಂತ್ರವನ್ನು ಶುಕ್ರವಾರ ನೀಡಲಾಯಿತು. ಈ ಮೂಲಕ ಇಸಿಜಿ ಯಂತ್ರದ ಸೌಲಭ್ಯವನ್ನೂ ಹೊಂದಿದ ಉಡುಪಿ ಜಿಲ್ಲೆಯ ಮೊದಲ ಜನೌಷಧ ಕೇಂದ್ರ ಎಂಬ ಹೆಗ್ಗಳಿಕೆಗೆ ಕುಂದಾಪುರ ಜನೌಷಧ ಕೇಂದ್ರ ಪಾತ್ರವಾಗಿದೆ.

ಇಸಿಜಿ ಯಂತ್ರವನ್ನು ಉಚಿತವಾಗಿ ನೀಡಲಾಗಿದ್ದು ಇಲ್ಲಿ ಹೃದ್ರೋಗಿಗಳು ಇಸಿಜಿ ತೆಗೆಸಿ ಅನಂತರದ ಚಿಕಿತ್ಸೆಗೆ ಯಾವುದೇ ವೈದ್ಯರ ಬಳಿ ತೆರಳಬಹುದು. ಅದೇ ಕೆಎಂಸಿಯ ಡಾ| ಪದ್ಮನಾಭ ಕಾಮತರ ಬಳಿ ತೆರಳಿದರೆ ಅವರ ವೈದ್ಯಕೀಯ ಸಲಹಾ ಶುಲ್ಕ ಇಲ್ಲದೇ  ಚಿಕಿತ್ಸಾ ಸಲಹೆ ಉಚಿತವಾಗಿರುತ್ತದೆ.

ಈಗಾಗಲೇ ಉಡುಪಿ, ಕಾಸರಗೋಡು, ದ.ಕ., ಉತ್ತರ ಕನ್ನಡ, ಶಿವಮೊಗ್ಗ ಮೊದಲಾದ ಜಿಲ್ಲೆಗಳ ಸರಕಾರಿ ಆಸ್ಪತ್ರೆಗಳಿಗೆ ದಾನಿಗಳ ಮೂಲಕ 100ರಷ್ಟು ಯಂತ್ರಗಳನ್ನು ವಿತರಿಸಲಾಗುತ್ತಿದೆ. ಇದರಿಂದಾಗಿ ಹೃದಯ ರೋಗಿಗಳು ತುರ್ತು ತಪಾಸಣೆಗೆ ದೂರದೂರದ ದೊಡ್ಡ ಆಸ್ಪತ್ರೆಗಳಿಗೆ ಹೋಗುವುದು, ಚಿಕಿತ್ಸೆಯಿಂದ ವಂಚಿತರಾಗಿ ಆಘಾತಕ್ಕೆ ಒಳಗಾಗುವುದು ತಪ್ಪಲಿದೆ. ಮಂಗಳೂರು ಹಾಗೂ ಕುಂದಾಪುರದ ಕೇವಲ 2 ಜನೌಷಧ ಕೇಂದ್ರಗಳಿಗೆ ಈ ಯಂತ್ರ ನೀಡಿದ್ದು ಹೃದ್ರೋಗಿಗಳಿಗೆ ತುರ್ತು ಚಿಕಿತ್ಸೆಗೆ ನೆರವಾಗಲಿದೆ. ಮುಂದಿನ ವಾರ ಕಾರ್ಕಳದ ಜನೌಷಧ ಕೇಂದ್ರಕ್ಕೆ ಇಸಿಜಿ ಯಂತ್ರವನ್ನು ದಾನಿಯೊಬ್ಬರು ನೀಡುತ್ತಿದ್ದು ಇದನ್ನು ಶಾಸಕ ವಿ. ಸುನಿಲ್‌ ಕುಮಾರ್‌ ಅವರು ಹಸ್ತಾಂತರಿಸಲಿದ್ದಾರೆ.

ಜನೌಷಧ ಕೇಂದ್ರಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಕೇಂದ್ರದಲ್ಲಿ ಡಿ.ವಿ. ಸದಾನಂದ ಗೌಡರು ಸಚಿವರಾಗಿದ್ದು ದೇಶದೆಲ್ಲೆಡೆ ಜನೌಷಧ ಕೇಂದ್ರಗಳಲ್ಲಿ ಇಸಿಜಿ ಯಂತ್ರ ಇಡುವ ಮೂಲಕ ಬಡ ಹೃದ್ರೋಗಿಗಳಿಗೆ ತತ್‌ಕ್ಷಣದ ಚಿಕಿತ್ಸಾ ಸಹಾಯ ದೊರೆಯುವಂತೆ ಮಾಡಬೇಕು. ಈ ಮೂಲಕ ಜನೌಷಧ ಮಳಿಗೆಗೂ ಸಾರ್ವಜನಿಕರ ಭೇಟಿ ಹೆಚ್ಚಾದಂತಾಗುತ್ತದೆ ಎಂದು ಡಾ| ಕಾಮತ್‌ ಅವರು ಸಚಿವರ ಬಳಿ ಮನವಿ ಮಾಡಿದ್ದಾರೆ.

ಕೊಡುಗೆ ಸಂದರ್ಭ ಇಂಡಿಯನ್‌ ರೆಡ್‌ಕ್ರಾಸ್‌ ಸಂಸ್ಥೆಯ ಕುಂದಾಪುರ ಘಟಕದ ಅಧ್ಯಕ್ಷ ಜಯಕರ ಶೆಟ್ಟಿ, ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಕೋಶಾಧಿಕಾರಿ ಶಿವರಾಮ ಶೆಟ್ಟಿ, ಕಾರ್ಯಕ್ರಮಾಧಿಕಾರಿ ಮುತ್ತಯ್ಯ ಶೆಟ್ಟಿ, ಸದಸ್ಯ ಗಣೇಶ್‌ ಆಚಾರ್‌ ಇಸಿಜಿ ಸರಬರಾಜು ಹಾಗೂ ನಿರ್ವಹಣೆ ಮಾಡುವ ಸಂಸ್ಥೆಯ ವಿಜಯ್‌ ಅವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.