ಮನೆಗೆ ಮರಳಿದ ಶಂಕರ ಪೂಜಾರಿ

Team Udayavani, Jan 22, 2019, 12:50 AM IST

shankara.jpg

ಬಸೂÅರು: ಊರಿನಿಂದ ತೆರಳುವಾಗ ಪರಿಚಿತರು ನೀಡಿದ ಪಾರ್ಸೆಲನ್ನು ಕೊಂಡೊಯ್ದು ಅದರಲ್ಲಿ ನಿಷೇಧಿತ ಮಾತ್ರೆಗಳಿವೆ ಎಂಬ ಕಾರಣಕ್ಕೆ ಕುವೈಟ್‌ನಲ್ಲಿ ಜೈಲುಪಾಲಾಗಿದ್ದ ಬಸೂÅರು ಕಳಂಜಿ ನಿವಾಸಿ ಶಂಕರ ಪೂಜಾರಿ ಅವರು 7 ತಿಂಗಳ ಬಳಿಕ ಬಂಧಮುಕ್ತರಾಗಿದ್ದು, ಸೋಮವಾರ ಬೆಳಗ್ಗೆ ಹುಟ್ಟೂರು ತಲುಪಿದ್ದಾರೆ.

ಶಂಕರ ಪೂಜಾರಿ ಅವರು ರವಿವಾರ ಮುಂಬಯಿ ತಲುಪಿದ್ದು, ಅಲ್ಲಿಂದ ರೈಲಿನಲ್ಲಿ ಊರು ಸೇರಿದ್ದಾರೆ. ಮುಂಜಾನೆ 6.30ಕ್ಕೆ ಕುಂದಾಪುರದ ಮೂಡ್ಲಕಟ್ಟೆ ರೈಲು ನಿಲ್ದಾಣದಲ್ಲಿ ಬಂದಿಳಿದ ಅವರನ್ನು ಕಂಡಾಗ ಮನೆ ಮಂದಿಯ ಸಂಭ್ರಮ ಮುಗಿಲು ಮುಟ್ಟಿತ್ತು. ಆನಂದ ಬಾಷ್ಪದೊಂದಿಗೆ ಸ್ವಾಗತಿಸಿದರು.

ಈ ಮಧ್ಯೆ ಶಂಕರ ಪೂಜಾರಿ ಅವರ ಪತ್ನಿ ಜ್ಯೋತಿ ಅವರು ಶನಿವಾರ ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದರು. ಶಂಕರ ಅವರು ಆಸ್ಪತ್ರೆಗೆ ತೆರಳಿ ಪತ್ನಿಯ ಆರೋಗ್ಯ ವಿಚಾರಿಸಿದರು.

ತನ್ನನ್ನು ಭೇಟಿಯಾದ “ಉದಯವಾಣಿ’ ಪ್ರತಿನಿಧಿ ಜತೆ ಮಾತನಾಡಿದ ಶಂಕರ ಪೂಜಾರಿ ಅವರು, ಅಮಾ ಯಕ ನಾದ ನನ್ನನ್ನು ವಿದೇಶಿ ನೆಲದ ಕಾನೂನಿನಂತೆ ಬಂಧಿಸಲಾಗಿತ್ತು. 7 ತಿಂಗಳ ಹಿಂದೆ ನಾನು ಊರಿಗೆ ಬಂದು ಮರಳುವಾಗ ಕುವೈಟ್‌ ನಲ್ಲಿರುವ ಫಾತಿಮಾ ಎನ್ನುವವರಿಗೆ ಕೊಡಿ ಎಂದು ಊರಿನ ಪರಿಚಿತರೊಬ್ಬರು ಕಟ್ಟೊಂದನ್ನು ನೀಡಿದ್ದರು. ಅದರೊಳಗೆ ಕುವೈಟ್‌ನಲ್ಲಿ ನಿಷೇಧಕ್ಕೊಳಗಾಗಿರುವ ಮಾತ್ರೆ ಇದೆ ಎಂಬುದು ನನಗೆ ಗೊತ್ತಿರಲಿಲ್ಲ. ಅಲ್ಲಿ ತಪಾಸಣೆ ವೇಳೆ ನನ್ನನ್ನು ಬಂಧಿಸಿದರು ಎಂದರು.

ಗಲ್ಫ್ ಉದ್ಯೋಗ ನಷ್ಟ: 15 ದಿನಗಳಿಗೊಮ್ಮೆ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆಯುತ್ತಿದ್ದರು. ಆದರೆ ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನ ಸಹಿತ ವಿವಿಧ ಸಂಘ – ಸಂಸ್ಥೆಗಳು, ಸ್ನೇಹಿತರ ಪ್ರಯತ್ನದಿಂದ ಪೂರಕ ದಾಖಲೆಗಳನ್ನು ನ್ಯಾಯಾಲಯಕ್ಕೆ ಒದಗಿಸಿ ನಿರಪರಾಧಿ ಎಂದು ಬಿಡುಗಡೆಯಾದೆ. ಆದರೆ ಕೆಲಸ ಮಾಡುತ್ತಿದ್ದ ಅಗ್ರಿಕಲ್ಚರಲ್‌ ಫ‌ುಡ್‌ ಪ್ರಾಡಕ್ಟ್ ಕಂಪೆನಿಯ ಉದ್ಯೋಗ ಹೋಯಿತು. 5 ವರ್ಷ ಕೆಲಸ ಮಾಡಿದ ಅನುಭವ (ಸರ್ವಿಸ್‌) ನಷ್ಟವಾಯಿತು. ಮತ್ತೆ ವಿದೇಶಕ್ಕೆ ತೆರಳಿ ಕೆಲಸ ಮಾಡುವ ಕುರಿತು ಇನ್ನೂ ನಿರ್ಧರಿಸಿಲ್ಲ. ಸದ್ಯ ಮನೆಮಂದಿಯೊಂದಿಗೆ ಕಳೆಯಲು ನಿರ್ಧರಿಸಿದ್ದೇನೆ ಎಂದಿದ್ದಾರೆ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.