ಗಟ್ಟಿಗೊಳ್ಳುತ್ತಿದೆ, ಕೋಕಂ ಹಣ್ಣು ಮಾರಾಟದ ತಾಯಿಬೇರು


Team Udayavani, May 4, 2017, 10:33 AM IST

nelada_nadi_4-5-2017_devid.jpg

ಎಪ್ಪತ್ತರ ದಶಕ. “”ನಮ್ಮದೇ ನೀರು, ನಮ್ಮದೇ ಸಕ್ಕರೆ. ಇತರ ಮಿಶ್ರಣಗಳೂ ಇಲ್ಲಿಯವೇ. ಇವನ್ನೆಲ್ಲ ಬಳಸಿ ತಯಾರಿಸಿದ ಕೋಕಾಕೋಲಾದ ವಾರ್ಷಿಕ ಟರ್ನ್ಓವರ್‌ 300 ಕೋಟಿ ರೂ.ಗಿಂತಲೂ ಅಧಿಕ. ಇದರ ಲಾಭವೆಲ್ಲ ಭಾರತದಿಂದ ಹೊರಗೆ ಹೋಗುತ್ತದೆ” ಸಮಾರಂಭವೊಂದರಲ್ಲಿ ಸಚಿವರಾಗಿದ್ದ ಜಾರ್ಜ್‌ ಫೆರ್ನಾಂಡಿಸರ ಮಾತು ಡೇವಿಡ್‌ ಡಿ’ಸೋಜರ ಮನಕ್ಕಿಳಿಯಿತು. ಇವರು ಮಂಗಳೂರಿನ ಸೆಂಟ್ರಲ್‌ ಮಾರ್ಕೆಟಿನ ತರಕಾರಿ ವ್ಯಾಪಾರಿ.

“”ನಮ್ಮ ಜನರಿಗೆ ಇಲ್ಲಿನದೇ ಯಾವ ನೈಸರ್ಗಿಕ ಪೇಯ ಹೇಗೆ ಪರಿಚಯಿಸಲಿ” ಪ್ರಶ್ನೆ ಮನದಲ್ಲಿ ರಿಂಗಣಿಸಲು ಶುರು. ಆಗ ನೆನಪಾದುದು ಪುನರ್ಪುಳಿ (ಮುರುಗಲು, ಕೋಕಂ, ಗಾರ್ಸಿನಿಯಾ ಇಂಡಿಕಾ) ಹಣ್ಣು. 1977ರಲ್ಲಿ ದೇಶದಲ್ಲಿ ಕೋಲಾ ನಿಷೇಧವಾಯಿತು. ಡೇವಿಡರ ಆಸಕ್ತಿ ಗರಿಗೆದರಿತು. ತರಕಾರಿ ಖರೀದಿಗೆ ಬರುವ ಗ್ರಾಹಕರಿಗೆ ಪುನರ್ಪುಳಿ ಹಣ್ಣನ್ನು ಪರಿಚಯಸತೊಡಗಿದರು. “”ಇದರ ಜ್ಯೂಸ್‌ ಮಾಡಿ ನೋಡಿ. ಸ್ಕ್ವಾಷ್‌ ಮಾಡಿಟ್ಟೂ ಬಳಸಬಹುದು. ಆರೋಗ್ಯ ಭಾಗ್ಯವಾಗುತ್ತದೆ” ಅಂತ ಹೇಳತೊಡಗಿದರು. 

ಆಗ ಬಜ್ಪೆ ಪರಿಸರದ ಕುಡುಬಿಯವರು ಕಾಡಿನಿಂದ ಪುನರ್ಪುಳಿ ಹಣ್ಣನ್ನು ತಂದು ಮಾರುತ್ತಿದ್ದರು. ನೂರು ಹಣ್ಣಿಗಿಷ್ಟು ದರ ಎನ್ನುವ ಲೆಕ್ಕಾಚಾರ. ಎಣಿಕೆಯ ಬದಲಿಗೆ ತೂಗಿ ಮಾರುವ ವ್ಯವಸ್ಥೆಯನ್ನು 1985ರಲ್ಲಿ ಪ್ರಥಮ ಬಾರಿಗೆ ಡೇವಿಡ್‌ ಅನುಷ್ಠಾನಕ್ಕೆ ತಂದರು. ಆಗ ಕಿಲೋಗೆ ಹಣ್ಣಿಗೆ ಹತ್ತು ರೂಪಾಯಿ ದರವಿತ್ತು. ಮಾರ್ಚ್‌ನಿಂದ ಮೇ ತನಕ ಹಣ್ಣಿನ ಋತು. ಕ್ರಿಶ್ಚಿಯನ್‌ ಮತ್ತು ಕೊಂಕಣಸ್ತರಿಗೆ ಪುನರ್ಪುಳಿ ತುಂಬಾ ಇಷ್ಟ.  ಸೀಸನ್ನಿನಲ್ಲಿ ಖರೀದಿಸಿ ಸಿಪ್ಪೆ ಒಣಗಿಸಿ ಸಂಗ್ರಹಿಸಿಟ್ಟು ಅಕಾಲದಲ್ಲಿ ಬಳಸುತ್ತಾರೆ. 

ಡೇವಿಡ್‌ ನೆನಪು ಮಾಡಿಕೊಳ್ಳುತ್ತಾರೆ, “”ವರುಷದಿಂದ ವರುಷಕ್ಕೆ ಡಿಮಾಂಡ್‌ ಜಾಸ್ತಿಯಾಗುತ್ತಿದೆ. ಸಾಂಪ್ರದಾಯಿಕ ಆಹಾರಕ್ಕೆ ಬದಲಾಗುತ್ತಿರುವವರು ಹುಡುಕಿ ಬರುತ್ತಾರೆ.ಹೆಚ್ಚಿನವರು ಮಧ್ಯಮ ವರ್ಗದವರು. ಶೇ.90 ಮಂದಿ ಸ್ಕ್ವಾಷ್‌ ಮಾಡಿಟ್ಟುಕೊಳ್ಳುತ್ತಾರೆ. ಉತ್ತಮ ರುಚಿ, ಆಕರ್ಷಕ ಬಣ್ಣ, ಜತೆಗೆ ಔಷಧೀಯ ಗುಣ. ಇದರಿಂದಾಗಿ ಹಣ್ಣಿಗೆ ಬೇಡಿಕೆ. ಪರವೂರಿನವರು ಬಂದು ಹಣ್ಣು-ಒಣಸಿಪ್ಪೆ ಒಯ್ಯುತ್ತಾರೆ. ರುಚಿ ಗೊತ್ತಿರುವ ಪ್ರವಾಸಿಗರೂ ಹುಡುಕಿ ಬರುತ್ತಾರೆ. ಕೊಲ್ಲಿ ರಾಷ್ಟ್ರಗಳಲ್ಲಿರುವವರು ತಾಯ್ನೆಲಕ್ಕೆ ಬಂದಾಗ ಒಯ್ದು ಅಲ್ಲಿ ಇದು ಊರಿನ ಹುಳಿ ಎಂದು ಪರಿಚಯಿಸುತ್ತಾರೆ.”  “”ಕಳೆದ ವರುಷ ನಿಮ್ಮಿಂದ ಒಯ್ದ ಹಣ್ಣಿನ ಬಣ್ಣ ಚೆನ್ನಾಗಿತ್ತು. ಮೊನ್ನೆಮೊನ್ನಿನವರೆಗೂ ಬಣ್ಣ ಮಾಸಲೇ ಇಲ್ಲ” ಇದು ಗೃಹಿಣಿಯರ ಹಿಮ್ಮಾಹಿತಿ. ಡೇವಿಡರ ಗ್ರಾಹಕರಲ್ಲಿ ಅರ್ಧಕ್ಕೂ ಹೆಚ್ಚು ಮಂದಿ ಖಾಯಂನವರು. ಅದರ ಔಷಧೀಯ ಗುಣಗಳ ಕುರಿತು ಮಾತನಾಡುತ್ತಾರೆ. 

ಹೊಸ ಗಿರಾಕಿಗಳಿಗೆ, “”ಪುನರ್ಪುಳಿ ಈಗ ಮಾತ್ರ ಸಿಗುತ್ತದೆ. ಅಕಾಲದಲ್ಲಿ ಬಳಕೆಗಾಗಿ ಹಣ್ಣನ್ನು ಒಣಗಿಸಿ ಇಡಬಹುದು” ಎಂದು ತಿಳಿ ಹೇಳುತ್ತಾರೆ. ಪುರುಸೊತ್ತಿದ್ದರೆ ಡೇವಿಡ್‌ ತರಕಾರಿಗೆ ಬಂದ ಗಿರಾಕಿಗೆ ಪುನರ್ಪುಳಿ ಹಣ್ಣಿನ ಮಹತ್ವ ಹೇಳದೆ ಇರುವುದಿಲ್ಲ. 

ಹಿಂದೆ ಕುಡುಬಿಯವರು ನಗರದ ಹೋಟೆಲ್‌ಗ‌ಳಿಗೂ ಪುನರ್ಪುಳಿ ಒದಗಿಸುತ್ತಿದ್ದರಂತೆ. ಪ್ರತಿಷ್ಠಿತ ತಾಜ್‌ಮಹಲ್‌ ಹೋಟೆಲಿನಲ್ಲಿ ಗ್ರಾಹಕರ ಕಣ್ಣೆದುರೇ ಹಣ್ಣಿನ ತಾಜಾ ಜ್ಯೂಸ್‌ ಮಾಡಿಕೊಡುತ್ತಿದ್ದರು. ವಿಶೇಷ ವಿತ್ತವಲಯ ಬಂದ ಮೇಲೆ ಕಾಡುನಾಶವಾಗಿದೆ. ಬೇಕಾದಷ್ಟು ಹಣ್ಣು ಸಿಗುತ್ತಿಲ್ಲ. ನಗರಕ್ಕೆ‌ ಬರುವ ಹಣ್ಣು ಕಡಿಮೆಯಾಗಿದೆ. ಡೇವಿಡ್‌ ಸೇರಿದಂತೆ ತರಕಾರಿ-ಹಣ್ಣಗಳ ಜತೆ ತಾಜಾ ಪುನರ್ಪುಳಿ ಮಾರುವವರು ಹಲವರಿದ್ದಾರೆ. 

ಮೊದಲು ಉಳಿದ ಅಂಗಡಿಯವರಿಗೆ ಅಷ್ಟೊಂದು ಒಲವಿರಲಿಲ್ಲವಂತೆ. ಇವರು ಪುನರ್ಪುಳಿಗೆ ದನಿಯಾಗತೊಡಗಿದಾಗ ಗಿರಾಕಿಗಳು ಹೆಚ್ಚಾದರು. ಉಳಿದ ಮಾರಾಟಗಾರರಿಗೂ ಉತ್ತೇಜನ ಸಿಕ್ಕಿತು.  ಸೀಸನ್ನಿನಲ್ಲಿ ಡೇವಿಡ್‌ ಸರಾಸರಿ ಐವತ್ತು ಕಿಲೋ ಪುನರ್ಪುಳಿಯ ತಾಜಾ ಹಣ್ಣನ್ನು ಮಾರುತ್ತಾರೆ. ಅಂದರೆ ವರುಷಕ್ಕೆ ನಾಲ್ಕು ಟನ್‌. ಉಳಿದವರೂ ಹೆಚ್ಚುಕಡಿಮೆ ಇದೇ ಮಟ್ಟದಲ್ಲಿದ್ದಾರೆ. ಸೆಂಟ್ರಲ್‌ ಮಾರ್ಕೆಟ್ಟಿನಲ್ಲೇ ವರುಷಕ್ಕೆ 30-35 ಟನ್‌ ತಾಜಾ ಹಣ್ಣಿನ ವ್ಯವಹಾರ ನಡೆಯಬಹುದು ಎಂದು ಅಂದಾಜು. “”ದಶಕದ ಹಿಂದೆ ಮಂಗಳೂರಿನಲ್ಲಿ ಆರ್‌ಎಸ್‌ಎಸ್‌ ಕಾರ್ಯಕ್ರಮ ಜರುಗಿತ್ತು. ಒಂದೇ ದಿನ 3 ಕ್ವಿಂಟಾಲ್‌ ಹಣ್ಣು ಮಾರಿದ್ದೆ” ಎಂದು ನೆನಪಿಸುತ್ತಾರೆ.  ಹಣ್ಣನ್ನು 3 ದಿವಸ ಬಿಸಿಲಲ್ಲಿ ಒಣಗಿಸಿದರೆ ಒಣ ಸಿಪ್ಪೆ ಸಿದ್ಧ. ಒಂದು ಕಿಲೋ ಒಣ ಸಿಪ್ಪೆ ಆಗಲು ಐದು ಕಿಲೋ ಹಣ್ಣು ಬೇಕು. ಒಣ ಸಿಪ್ಪೆಗೆ ಈಗ ಕಿಲೋಗೆ ನೂರೈವತ್ತು ರೂಪಾಯಿಯ ಆಜೂಬಾಜು. 

ಮಂಗಳೂರಿನ ಬಹುತೇಕ ಜೀನಸು ಅಂಗಡಿಗಳಲ್ಲಿ ವರುಷಪೂರ್ತಿ ಒಣ ಸಿಪ್ಪೆ ಲಭ್ಯ. ಪ್ರತಿ ಅಂಗಡಿಗಳಲ್ಲೂ ಐದಾರು ಕ್ವಿಂಟಾಲ್‌ ಮಾರಾಟ ಖಚಿತ. ಡೇವಿಡ್‌ ಪುನರ್ಪುಳಿ ಹಣ್ಣಿನ ಮೌಲ್ಯವರ್ಧನೆ ಕುರಿತು ಅಧ್ಯಯನಕ್ಕಾಗಿ ಮೈಸೂರಿನ ಸಿಎಫ್ಟಿಆರ್‌ಐಗೆ ಹೋಗಿದ್ದರು. ಆ ವರುಷ ಹಣ್ಣೂ ಸರಿಯಾಗಿ ಮಾರುಕಟ್ಟೆಗೆ ಬಾರದೆ ಅವರ ಯೋಜನೆ ಬಿದ್ದು ಹೋಗಿತ್ತು. 

ಹಣ್ಣು ಮಾರಾಟದ ಬದ್ಧತೆಯ ಹಿನ್ನೆಲೆಯಲ್ಲಿ ಕೆಲವು ಸೂಕ್ಷ್ಮಗಳನ್ನು ಕೃಷಿಕರಿಗೆೆ ಹೇಳುತ್ತಾರೆ. “”ಪೂರ್ತಿ ಹಣ್ಣಾಗುವ ತನಕ ಕಾಯಬೇಡಿ. ಒಂದೆರಡು ದಿನಗಳಲ್ಲಿ ಹಣ್ಣಾಗಬಹುದಾದ, ಅರೆ ಮಾಗಿದ ಕಾಯಿಯನ್ನು ಕೊಯಿದು ತನ್ನಿ. ಚಿಕ್ಕ ಬಾಕ್ಸ್‌ ಗಳಲ್ಲಿ ತಂದರೆ ಗೀರು ಆಗುವುದಿಲ್ಲ”. ತರುವಾಗಲೇ ಹಣ್ಣಾಗಿದ್ದರೆ ಎರಡೇ ದಿನದಲ್ಲಿ ಮುಗಿಸಬೇಕು. ಹಣ್ಣಿನ ಸಿಪ್ಪೆ ಮೃದು. ಮೇಲ್ಮೆ„ ಮೇಲೆ ಸಣ್ಣ ಗೀರು ಆದರೂ ಹೆಚ್ಚು ತಾಳಿಕೊಳ್ಳುವುದಿಲ್ಲ. 

ಡೇವಿಡ್‌ ಹಿಂದೊಮ್ಮೆ ಗೋವಾದಲ್ಲಿ ಜರುಗಿದ ಕೋಕಂ ಕಾರ್ಯಾಗಾರಕ್ಕೆ ಹೋಗಿದ್ದರು. ಆಗ “”ಹೀಗೆ ದೊಡ್ಡ ಮಟ್ಟದ ತಾಜಾ ಕೋಕಂ ಮಾರಾಟ ಬೇರೆ ಯಾವ ನಗರದಲ್ಲೂ ಇರುವುದು ಗೊತ್ತಿಲ್ಲ. ಇದು ಮಹತ್ವದ ವಿಚಾರ” ಎಂದು ಅಜಿತ್‌ ಶಿರೋಡ್ಕರ್‌ ಶ್ಲಾ ಸಿದ್ದರು. ಇವರು ಪಶ್ಚಿಮಘಟ್ಟ ಕೋಕಂ ಫೌಂಡೇಶನ್ನಿನ ಅಧ್ಯಕ್ಷರು. ಆಯ್ದ ಅರೆ ಮಾಗಿದ‌ ಹಣ್ಣುಗಳನ್ನು ಮೊಟ್ಟೆ ಟ್ರೇಯಂತಹ ಟ್ರೇಗಳಲ್ಲಿಟ್ಟು ದೂರ ಸಾಗಾಟ ಮಾಡಲು ಅಗುತ್ತದೆಯೋ ಎನ್ನುವುದನ್ನು ಪರೀಕ್ಷೆ ಮಾಡಿ ನೋಡಬೇಕಾಗಿದೆ. ಇದು ಸಾಧ್ಯವಾದರೆ ಬೆಂಗಳೂರು ಮತ್ತು ಮುಂಬಯಿಯಂತಹ ಪುನರ್ಪುಳಿ ರುಚಿ ತಿಳಿದ ಗ್ರಾಹಕರಿರುವ ನಗರಕ್ಕೆ ಒಯ್ದು ಮಾರಬಹುದು. ಇದು ತಾಜಾ ಹಣ್ಣಿಗೆ ಒಳ್ಳೆಯ ಬೇಡಿಕೆ ತರಬಹುದು ಎಂದು ಸಲಹೆ ನೀಡಿದ್ದರು.
  
ತಮ್ಮ 13ನೇ ವಯಸ್ಸಿಗೇ ತರಕಾರಿ ವ್ಯಾಪಾರಕ್ಕೆ ಹೆಗಲು ನೀಡಿದ ಡೇವಿಡರಿಗೀಗ 55 ವಯಸ್ಸು.  ಬೆಳಿಗ್ಗೆ ಆರು ಗಂಟೆಗೆ ಅಂಗಡಿಗೆ ಬಂದರೆ 16 ಗಂಟೆ ಬ್ಯುಸಿ. ಈ ಮಧ್ಯೆಯೂ ಪತ್ರಿಕೆಗಳ ಓದು. ಅವುಗಳಲ್ಲಿನ ಕೃಷಿ, ಪರಿಸರ, ಆರೋಗ್ಯ ವಿಚಾರಗಳ ಪ್ರತಿಗಳನ್ನು ಮಿತ್ರರಿಗೆ ಹಂಚುವುದು ಹವ್ಯಾಸ. ಪುನರ್ಪುಳಿ ಸಹವಾಸದಿಂದ ಅದರ ಜಾತಕವನ್ನು ಪೋಸ್ಟ್‌ಮಾರ್ಟಂ ಮಾಡುತ್ತಾರೆ, “”ಪುನರ್ಪುಳಿ ಹೆಚ್ಚು ಇಳುವರಿ ಕೊಡುವುದು ಮೂರು ವರುಷಕ್ಕೊಮ್ಮೆ. ಹೆಚ್ಚು ಇಳುವರಿ ಬಂದ ಅನಂತರದ 2 ವರುಷ ಅದರರ್ಧ ಮಾತ್ರ ಬೆಳೆ.” ಬಂಟ್ವಾಳ ತಾಲೂಕಿನ ಅಳಿಕೆ ಸಮೀಪದ ಮುಳಿಯದಲ್ಲಿ ಜರುಗಿದ ಒಂದು ದಿವಸದ “ಪುನರ್ಪುಳಿ ಪ್ರಪಂಚದೊಳಕ್ಕೆ’ ಎನ್ನುವ ಕಾರ್ಯಾಗಾರದಲ್ಲಿ ಡೇವಿಡ್‌ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತಿಗೆ ಸಿಕ್ಕರು ಡೇವಿಡ್‌ – “”ಪುನರ್ಪುಳಿಗೆ ಭಾರತ ಮಾತ್ರವಲ್ಲ, ವಿದೇಶದಲ್ಲೂ ಬೇಡಿಕೆಯಿದೆ. ಒಣಸಿಪ್ಪೆ ರಫ್ತಾಗುತ್ತಿದೆ. ಅದರ ಮೌಲ್ಯವರ್ಧಿತ ಉತ್ಪನ್ನಗಳು ಮಾರುಕಟ್ಟೆಗೆ ಬಂದಿರುವುದು ವಿರಳ. ಹಣ್ಣಿನಿಂದ ಪ್ರತ್ಯೇಕಿಸುವ ಹೈಡ್ರಾಕ್ಸಿ ಸಿಟ್ರಿಕ್‌ ಆಸಿಡ್‌ ವಿದೇಶಗಳಿಗೆ ರಫ್ತಾಗುತ್ತಿದೆ. ಬೊಜ್ಜು ಬೆಳೆಯಲು ಬಿಡದೆ, ಕೊಲೆಸ್ಟರಾಲ್‌ ನಿಯಂತ್ರಣದ ಗುಣ ಹೊಂದಿದೆ” ಎನ್ನುತ್ತಾರೆ. 

ತರಕಾರಿ ವ್ಯಾಪಾರಿ ವೃತ್ತಿಯಲ್ಲಿರುವ ಡೇವಿಡ್‌ ಡಿ’ಸೋಜರಲ್ಲಿ ಒಂದು ವೃತ್ತಿಧರ್ಮವಿದೆ. ಜತೆಗೆ ಅದಕ್ಕೆ ಭೂಷಣವಾಗಿ ಸಾಮಾಜಿಕ ಕಳಕಳಿಯಿದೆ. ಜನರ ಆರೋಗ್ಯದ ಕಾಳಜಿಯಿದೆ. ಈ ಎಲ್ಲ ಗುಣಗಳಿಂದಾಗಿ ಡೇವಿಡ್‌ ಗ್ರೇಟ್‌ ಆಗಿ ಕಾಣುತ್ತಾರೆ.

– ನಾ. ಕಾರಂತ ಪೆರಾಜೆ

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

e-10.jpg

ಆರಾಧನೆಗೆ ಥಳಕು ಹಾಕಿದ ಹಲಸು

z-20.jpg

ಮೇಳಗಳ ಮಾಲೆಗೆ ಈಗ ಕಾಡು ಹಣ್ಣು

b-11.jpg

ಜಾಲತಾಣ ಗುಂಪುಗಳ ಅಗೋಚರ ಕ್ಷಮತೆ

ankana-1.jpg

ತಳಿ ತಿಜೋರಿ ತುಂಬಲು ಇ-ಸ್ನೇಹಿತರ ಸಾಥ್‌

1.jpg

ಊಟದ ಬಟ್ಟಲಿಗೆ ತಟ್ಟಲಿರುವ ಅನ್ನದ ಬರದ ಬಿಸಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.