ನಾಲೆಗಳಿಗೆ ನೀರು ಹರಿಸಲು ಆಗ್ರಹ


Team Udayavani, Feb 20, 2019, 7:29 AM IST

nale.jpg

ಶ್ರೀರಂಗಪಟ್ಟಣ: ಕಲೆ ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯಅಚ್ಚುಕಟ್ಟು ಪ್ರದೇಶದ ಸಿಡಿಎಸ್‌, ವಿರಿಜಾ ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಂ.ಸಂತೋಷ್‌ ನೇತೃತ್ವದಲ್ಲಿ ರೈತದಳ ಕಾರ್ಯಕರ್ತರು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ತಾಲೂಕು ಕಚೇರಿ ಎದುರು ಜಮಾಯಿಸಿದ ರೈತ ಮುಖಂಡರು, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಇನ್ನು  48 ಗಂಟೆ ಒಳಗೆ ಕೆಆರ್‌ಎಸ್‌ ಅಚ್ಚುಕಟ್ಟು ಪ್ರದೇಶದ ಎಲ್ಲಾ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿದರು.

ಸಂತೋಷ್‌ ಮಾತನಾಡಿ, ಕೆಆರ್‌ಎಸ್‌ ಜಲಾಶಯದ ಪ್ರಮುಖ ನಾಲೆ ವಿಶ್ವೇಶ್ವರಯ್ಯ ನಾಲೆಗೆ ಈಗಾಗಲೇ ನೀರು ಹರಿಸುತ್ತಿದ್ದು, ಜಲಾಶಯದ ಕೆಳ ಭಾಗದ ನಾಲೆಗಳಾದ ಚಿಕ್ಕದೇವರಾಯ ನಾಲೆ, ವಿರಿಜಾ, ರಾಮಸ್ವಾಮಿ, ರಾಜಪರಮೇಶ್ವರಿ, ಬಂಗಾರದೊಡ್ಡಿ, ಮಾದವಮಂತ್ರಿ ನಾಲೆಗಳಿಗೆ ನೀರು ಹರಿಸುತ್ತಿಲ್ಲ. ಈ ಭಾಗದ ರೈತರು ಕಬ್ಬು, ಅಡಿಕೆ, ತೆಂಗು, ಬಾಳೆ ಸೇರಿದಂತೆ ತೋಟಗಾರಿಕೆ ಬೆಳೆಗಳನ್ನು ಸಾವಿರಾರು ಎಕರೆಗಳಲ್ಲಿ ಬೆಳೆದಿದ್ದು ನೀರಿಲ್ಲದೆ ಒಣಗುತ್ತಿವೆ.

ಕೂಡಲೇ ನೀರು ಹರಿಸಬೇಕು ಎಂದು ಒತ್ತಾಯಿಸಿದರು. ರೈತ ಮುಖಂಡ ಡಿ.ಎಂ.ರವಿ ಮಾತನಾಡಿ, ಈ ಹಿಂದೆ ಜಲಾಶಯದಲ್ಲಿ 100 ಅಡಿ ನೀರಿದ್ದಾಗಲೂ ನಾಲೆಗಳ ಮೂಲಕ ನೀರು ಹರಿಸಿ ಬೇಸಿಗೆ ಬೆಳೆಗೆ ನೀರು ಕೊಡಲಾಗಿದೆ. ಕೂಡಲೆ ಎಲ್ಲಾ ನಾಲೆಗಳಿಗೆ ನೀರು ಹರಿಸಿ ಬೇಸಿಗೆ ಬೆಳೆಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿ ಶಿರಸ್ತೇದಾರ್‌ ಮಹೇಶ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಪಟ್ಟಣ್ಣ ಮಾಸ್ಟರ್‌, ಮರಳಗಾಲ ಯೋಗೇಶ, ಚಿಕ್ಕಪಾಳ್ಯ ಶ್ರೀಧರ, ಕೃಷ್ಣಪ್ಪ, ಕಿರಂಗೂರು ಪಾಪು ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.