ಬಾಲ್ಯವಿವಾಹ – ಕಾನೂನು ಕ್ರಮ: ಡಾ| ಕೆ.ಜಿ. ಜಗದೀಶ್‌

Team Udayavani, Aug 5, 2017, 9:34 AM IST

05-MLR-8.jpg

ಮಂಗಳೂರು: ಬಾಲ್ಯವಿವಾಹ ಒಂದು ಸಾಮಾಜಿಕ ಪಿಡುಗಾಗಿದ್ದು ಈ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಮಾಜದಲ್ಲಿನ ಸರ್ವರ ಸಹಕಾರ ಅತ್ಯಗತ್ಯವಾಗಿದೆ. ಬಾಲ್ಯವಿವಾಹ ನಿಷೇಧ ಕಾಯಿದೆಯನ್ನು ಜಾರಿಗೆ ತಂದಿದ್ದರೂ ಇನ್ನೂ ಬೆರಳೆಣಿಕೆಯಷ್ಟು ಪ್ರಕರಣಗಳು ವರದಿಯಾಗುತ್ತಿವೆ. ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾದಲ್ಲಿ ಕಠಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್‌ ತಿಳಿಸಿದ್ದಾರೆ.

ಕಾಯಿದೆಯಂತೆ ಬಾಲ್ಯವಿವಾಹ ಪ್ರಕರಣಗಳು ಸಾಬೀತಾದಲ್ಲಿ ಒಂದು ವರ್ಷಕ್ಕಿಂತ ಕಡಿಮೆ ಇಲ್ಲದ ಹಾಗೂ 2 ವರ್ಷದವರೆಗೆ ವಿಸ್ತರಿಸಬಹುದಾದ ಕಠಿನ ಶಿಕ್ಷೆ ವಿಧಿಸಲು ಅವಕಾಶ ಇರುತ್ತದೆ. 1 ಲಕ್ಷ ರೂ.ದಂಡವನ್ನು ವಿಧಿಸಲು ಸಾಧ್ಯವಿರುತ್ತದೆ. ಅಲ್ಲದೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಲು ಅವಕಾಶ ಇರುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್‌ ಹೇಳಿದರು.

ಬಾಲ್ಯವಿವಾಹ ನಿಷೇಧದ ಬಗ್ಗೆ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಶಿಬಿರಗಳನ್ನು ಮತ್ತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಗಿದೆ. 2011-12 ನೇ ಸಾಲಿನಿಂದ ಇದುವರೆಗೆ ಒಟ್ಟು 85 ಬಾಲ್ಯವಿವಾಹಗಳನ್ನು ತಡೆಹಿಡಿಯಲಾಗಿದೆ. 2016-17ನೇ ಸಾಲಿನಲ್ಲಿ 2 ಹಾಗೂ 2017-18 ನೇ ಸಾಲಿನಲ್ಲಿ 3 ಬಾಲ್ಯವಿವಾಹಗಳು ನಡೆದಿದ್ದು ಈ ಬಗ್ಗೆ ಸುಬ್ರಹ್ಮಣ್ಯ ಪೊಲಿಸ್‌ ಠಾಣೆಯಲ್ಲಿ ಪ್ರವೀಣ್‌ ಅವರ ಮೇಲೆ, ಮೂಡಬಿದಿರೆ ಪೊಲಿಸ್‌ ಠಾಣೆಯಲ್ಲಿ ಲಕ್ಷ್ಮೀ ಸಂದೀಪ್‌ ಮೊಗೆರಾಯ, ಭಾಸ್ಕರ್‌, ಪ್ರೇಮಲತಾ, ಲಕ್ಷ್ಮೀನಾರಾಯಣ, ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ರಾಮ್‌ ಅವ್‌ತಾರ್‌, ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಶಾಂತ್‌, ಮಲ್ಲಿಕಪ್ಪ, ಜಯಮ್ಮ, ಪ್ರಭಾಕರ್‌ ರಾವ್‌, ಮೀನಾಕ್ಷಿ ಹಾಗೂ ಕೃಷ್ಣ ಮೂರ್ತಿ ಅವರ ಮೇಲೆ ಹಾಗೂ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಅಂಗಾರ ಮತ್ತು ಸಂದೇಶ ಅವರ ಮೇಲೆ ಈಗಾಗಲೇ ಎಫ್‌.ಐ.ಆರ್‌.ದಾಖಲಿಸಲಾಗಿದೆ. ಈ ಪ್ರಕರಣಗಳು ತನಿಖೆಯಲ್ಲಿದೆ. ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಬಾಲ್ಯವಿವಾಹ ನಿಷೇಧ ಸಮಿತಿಯು ಗ್ರಾ.ಪಂ.  ಅಧ್ಯಕ್ಷತೆಯಲ್ಲಿದ್ದು ಗ್ರಾಮ ಮಟ್ಟದಲ್ಲಿ ಬಾಲ್ಯವಿವಾಹ ನಿಯಂತ್ರಿಸುವ ಹೊಣೆಗಾರಿಕೆ ಈ ಸಮಿತಿಯದ್ದಾಗಿರುತ್ತದೆ. ಆದ್ದರಿಂದ ಬಾಲ್ಯವಿವಾಹವನ್ನು ತಡೆಗಟ್ಟಲು ಎಲ್ಲರೂ ಸನ್ನದ್ಧರಾಗಬೇಕಿದೆ. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಭಾಗಿಯಾಗುವ ಎಲ್ಲರ ಮೇಲೂ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.