ಹಳ್ಳ ಹಿಡಿದ ಕುಡಿಯುವ ನೀರಿನ ಯೋಜನೆ

Team Udayavani, Apr 28, 2019, 6:00 AM IST

30

ಸವಣೂರು ಗ್ರಾ.ಪಂ. ವ್ಯಾಪ್ತಿಯ ಅಪೂರ್ಣ ನೀರಿನ ಘಟಕ.

ನರಿಮೊಗರು: ರಾಜ್ಯದ ಪ್ರತಿಯೊಬ್ಬ ವ್ಯಕ್ತಿಗೂ ಪರಿಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡುವ ಉದ್ದೇಶ ದಿಂದ ರಾಜ್ಯ ಸರಕಾರ ಶುದ್ಧ ನೀರು ಯೋಜನೆಯನ್ನು ಜಾರಿಗೆ ತಂದಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ ಅಡಿಯಲ್ಲಿ ಬರುವ ಈ ಯೋಜನೆಯನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ರಾಜ್ಯದೆಲ್ಲೆಡೆ ಅನುಷ್ಠಾನಗೊಳಿಸುತ್ತಿದೆ.

ಆದರೆ ಶುದ್ಧ ನೀರು ಯೋಜನೆಯ ಅನುಷ್ಠಾನದಲ್ಲಾಗುತ್ತಿರುವ ವಿಳಂಬ ಹಾಗೂ ಅನಗತ್ಯ ಪ್ರದೇಶಗಳಲ್ಲಿ ನಿರ್ಮಿಸ ಲಾಗುತ್ತಿರುವ ಈ ಘಟಕಗಳು ಈಗ ಪಾಳು ಬೀಳುವ ಸ್ಥಿತಿಯಲ್ಲಿದೆ. ಈ ನಡುವೆ ಮಿನರಲ್‌ ವಾಟರ್‌ ಕಂಪನಿಗಳ ಲಾಭವೂ ಈ ನಿರ್ಲಕ್ಷ್ಯದ ಹಿಂದಿದೆ. ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸಲಾಗುತ್ತಿರುವ ಈ ಘಟಕ ಇಂದು ಊಟಕ್ಕಿಲ್ಲದ ಉಪ್ಪಿನಕಾಯಿಯಂತೆಯೂ ಆಗಿದೆ.

ಒಂದು ಹನಿ ನೀರಿಲ್ಲ
ಈ ಯೋಜನೆಯ ಪ್ರಕಾರ ಪ್ರತೀ ಗ್ರಾಮ ಪಂಚಾಯತ್‌ಗೆ ಒಂದರಂತೆ ಇಂತಹ ಘಟಕ ಗಳನ್ನು ಸ್ಥಾಪಿಸಿ ಆ ಗ್ರಾಮದ ಜನರಿಗೆ ಶುದ್ಧ ನೀರು ಕೊಡುವುದು ಸರಕಾರದ ಉದ್ದೇಶ. ಪ್ರತಿ ಘಟಕಕ್ಕೆ ಯೋಜನೆ ಆರಂಭ ವಾಗುವ ವರ್ಷ 5.88 ಲಕ್ಷ ರೂ. ವೆಚ್ಚ ಅಂದಾಜಿಸ ಲಾಗಿದ್ದು, ಇದೀಗ ಈ ಘಟಕಗಳಿಗೆ 13 ಲಕ್ಷಕ್ಕೂ ಮಿಕ್ಕಿದ ವೆಚ್ಚ ತಗಲುತ್ತಿದೆ.

ಎಲ್ಲ ಪಂಚಾಯತ್‌ಗಳಲ್ಲಿ
ಜಿಲ್ಲೆಯ 230 ಗ್ರಾಮ ಪಂಚಾಯತ್‌ಗಳಲ್ಲಿ ಪ್ರತೀ ಪಂಚಾಯತ್‌ನಲ್ಲಿ 2ರಿಂದ 3 ಘಟಕಗಳನ್ನು ನಿರ್ಮಿಸಲಾಗಿದೆ. ಆದರೆ ಇವೆಲ್ಲವೂ ಊಟಕ್ಕಿಲ್ಲದ ಉಪ್ಪಿನಕಾಯಿ ಯಂತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲ ಕಡೆಗಳಲ್ಲಿ ಈ ಘಟಕದ ಕೆಲಸ ಆರಂಭವಾಗಿ ಒಂದು ವರ್ಷ ಕಳೆದರೂ ಘಟಕದ ಕೆಲಸ ಮಾತ್ರ ಮುಗಿದಿಲ್ಲ.

ಇನ್ನು ಮುಗಿದ ಘಟಕಗಳಲ್ಲಿ ನೀರು ಪೂರೈಕೆ ಆರಂಭಗೊಳ್ಳದೆಯೇ ವರ್ಷಗಳು ಕಳೆದಿವೆ. ಅಲ್ಲದೆ ಘಟಕಕ್ಕೆ ನೀರಿನ ಸಂಪರ್ಕವನ್ನೂ ಯಾರು ಕಲ್ಪಿಸಬೇಕು ಎನ್ನುವ ಕುರಿತು ಗೊಂದಲ ನಿರ್ಮಾಣವಾಗಿದೆ. ಜಿಲ್ಲೆಯ ಹಲವು ಕಡೆಗಳಲ್ಲಿ ಇಂತಹ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದ್ದರೂ, ಎಷ್ಟು ಸ್ಥಾಪಿಸಲಾಗಿದೆ ಎನ್ನುವ ನಿಖರ ಮಾಹಿತಿಯನ್ನು ಅಧಿಕಾರಿಗಳು ಬಿಟ್ಟುಕೊಡುತ್ತಿಲ್ಲ. ಪ್ರತಿಯೊಂದು ಘಟಕಕ್ಕೆ 13 ಲಕ್ಷ ರೂ. ವೆಚ್ಚವಾಗಿದೆ ಎನ್ನುವ ಮಾಹಿತಿಯನ್ನು ನೀಡಲಾಗಿದೆ.

ಹಳ್ಳ ಹಿಡಿದ ಯೋಜನೆ
ಈ ವಿಳಂಬಕ್ಕೆ ಮಿನರಲ್‌ ವಾಟರ್‌ ಕಂಪನಿಗಳ ಲಾಬಿಯೂ ಕಾರಣ ಎಂಬ ಗುಮಾನಿ ಇದೆ. ಒಂದು ರೂ.ಗೆ ಒಂದು ಲೀಟರ್‌ ನೀರು ಕೊಡುವ ಈ ಯೋಜನೆ ಸಮರ್ಪಕವಾಗಿ ಜಾರಿಗೆ ಬಂದಲ್ಲಿ ಮಿನರಲ್‌ ವಾಟರ್‌ ಕಂಪನಿಗಳು ಬೀಗ ಹಾಕಬೇಕಾಗುತ್ತದೆ ಎಂಬ ಆತಂಕವೂ ಇದೆ. ಜನಪರ ಕಾಳಜಿಯ ಯೋಜನೆ ಹೇಗೆ ಹಳ್ಳ ಹಿಡಿಯುತ್ತದೆ ಎನ್ನುವುದಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಸಿಗಲಿಕ್ಕಿಲ್ಲ ಎನ್ನುವ ಅಭಿಪ್ರಾಯ ಜನಸಾಮಾನ್ಯರಿಂದ ಕೇಳಿಬರುತ್ತಿದೆ.

ಮನವಿ ಮಾಡಲಾಗಿದೆ
ನಮ್ಮ ಗ್ರಾ.ಪಂ. ವ್ಯಾಪ್ತಿಯಲ್ಲಿ ಎರಡು ಶುದ್ಧ ಕುಡಿಯುವ ನೀರು ಪೂರೈಕೆಯ ಘಟಕಗಳನ್ನು ಸ್ಥಾಪಿಸಲಾಗಿದ್ದು, ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಗ್ರಾ.ಪಂ. ವತಿಯಿಂದ ಆಗಬೇಕಾದ ಎಲ್ಲ ಕೆಲಸಗಳನ್ನು ಪೂರ್ಣಗೊಳಿಸಲಾಗಿದ್ದು, ಕೆಆರ್‌ಡಿಎಲ್‌ ನಿಗಮದ ಅಧಿಕಾರಿಗಳಿಗೆ ಕಾಮಗಾರಿಯನ್ನು ಬೇಗ ಮುಗಿಸುವಂತೆ ಮನವಿ ಮಾಡಲಾಗಿದೆ. ಈ ಯೋಜನೆ ಅನುಷ್ಠಾನವಾದರೆ ಬೇಸಗೆಯಲ್ಲಿ ನೀರಿನ ಸಮಸ್ಯೆಯನ್ನು ತಕ್ಕ ಮಟ್ಟಿಗೆ ದೂರ ಮಾಡಬಹುದು.
– ಇಂದಿರಾ ಬಿ.ಕೆ., ಅಧ್ಯಕ್ಷರು, ಸವಣೂರು ಗ್ರಾ.ಪಂ.

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.