ತುಳುವಿನ ‘ಪಡ್ಡಾಯಿ’ಗೆ ರಾಷ್ಟ್ರೀಯ ಗೌರವ

Team Udayavani, Apr 14, 2018, 6:00 AM IST

Paddayi-14-4.jpg

ಮಂಗಳೂರು: ಕಡಲ ತೀರದ ಮೀನುಗಾರರ ಕಥೆಯನ್ನು ಆಧರಿಸಿ ಕಾರ್ಕಳದ ನಿತ್ಯಾನಂದ ಪೈ ನಿರ್ಮಾಣ ಹಾಗೂ ಅಭಯಸಿಂಹ ನಿರ್ದೇಶಿಸಿದ ತುಳುವಿನ ‘ಪಡ್ಡಾಯಿ’ ಸಿನೆಮಾ 65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ಪ್ರಾದೇಶಿಕ ಚಿತ್ರ ವಿಭಾಗದ ತುಳುವಿನಲ್ಲಿ ರಾಷ್ಟ್ರೀಯ ಗೌರವ ಪಡೆದುಕೊಂಡಿದೆ. ಇದು ತುಳು ಚಲನಚಿತ್ರಕ್ಕೆ ಐದನೇ ಬಾರಿಗೆ ರಾಷ್ಟ್ರೀಯ ಗೌರವ. ಈ ಮೊದಲು ‘ಬಂಗಾರ್‌ ಪಟ್ಲೇರ್‌’, ‘ಕೋಟಿ ಚೆನ್ನಯ’, ‘ಗಗ್ಗರ’ ಹಾಗೂ ‘ಮದಿಪು’ ಸಿನೆಮಾಗಳು ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದವು.

ಪ್ರಸಿದ್ಧ ನಾಟಕಕಾರ ಶೇಕ್ಸ್‌ಪಿಯರ್‌ನ ‘ಮ್ಯಾಕ್‌ಬೆತ್‌’ ನಾಟಕದಿಂದ ಸ್ಫೂರ್ತಿ ಪಡೆದು ‘ಪಡ್ಡಾಯಿ’ ತಯಾರಿಸಲಾಗಿದೆ. ಮೊಗವೀರ ಸಮುದಾಯದ ಬದುಕು ಬವಣೆಯನ್ನು ಈ ಸಿನೆಮಾದಲ್ಲಿ ಕಟ್ಟಿಕೊಡಲಾಗಿದೆ. ತುಳುನಾಡಿನ ಜನಪದ ಸಂಸ್ಕೃತಿ, ಪ್ರದರ್ಶನ ಕಲೆಗಳು ಸಮೃದ್ಧವಾಗಿ ಚಿತ್ರಣಗೊಂಡಿವೆ. ಒಂದು ಗಂಟೆ 40 ನಿಮಿಷ ಅವಧಿಯ ಈ ಸಿನೆಮಾದಲ್ಲಿ ಮೋಹನ್‌ ಶೇಣಿ, ಬಿಂದು ರಕ್ಷಿದಿ, ಗೋಪಿನಾಥ್‌ ಭಟ್‌, ಚಂದ್ರಹಾಸ್‌ ಉಳ್ಳಾಲ್‌, ರವಿ ಭಟ್‌, ಸದಾಶಿವ ಧರ್ಮಸ್ಥಳ, ಶ್ರೀನಿಧಿ ಆಚಾರ್‌, ಅವಿನಾಶ್‌ ರೈ, ಮಲ್ಲಿಕಾ ಜ್ಯೋತಿಗುಡ್ಡೆ, ವಾಣಿ ಪೆರಿಯೋಡಿ, ಸಂತೋಷ್‌ ಶೆಟ್ಟಿ, ಪ್ರಭಾಕರ್‌ ಕಾಪಿಕಾಡ್‌ ಪ್ರಮುಖ ಭೂಮಿಕೆಗಳಲ್ಲಿದ್ದಾರೆ. 

ಮಣಿಕಾಂತ್‌ ಕದ್ರಿ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಪುತ್ತೂರಿನ ವಿಷ್ಣುಪ್ರಸಾದ್‌ ಛಾಯಾಗ್ರಹಣ ಮಾಡಿದ್ದಾರೆ. ಪ್ರಕಾಶ್‌ ಪಂಡಿತ್‌ ಸಂಕಲನ, ಜೇಮೀ ಡಿ’ಸಿಲ್ವ ಧ್ವನಿಗ್ರಹಣ, ಜೇಮೀ ಹಾಗೂ ಶಿಶಿರ ಕೆ.ವಿ. ಧ್ವನಿ ವಿನ್ಯಾಸ ಮತ್ತು ರಾಜೇಶ್‌ ಕುಡ್ಲ ನಿರ್ಮಾಣ ನಿರ್ವಹಣೆ ಮಾಡಿದ್ದಾರೆ. ‘ಪಡ್ಡಾಯಿ’ ಸಿನೆಮಾವು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ, ನ್ಯೂಯಾರ್ಕ್‌ ಭಾರತೀಯ ಚಲನಚಿತ್ರೋತ್ಸವ ಹಾಗೂ ಇನ್ನೋವೇಟಿವ್‌ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಮೇ ಕೊನೆಯ ವಾರ ಅಥವಾ ಜೂನ್‌ ಮೊದಲ ವಾರದಲ್ಲಿ ಕರಾವಳಿಯಲ್ಲಿ ತೆರೆ ಕಾಣಲಿದೆ.

ಕಡಲ ತೀರದಿಂದ ‘ಪಡ್ಡಾಯಿ’ಗೆ!
ತುಳುವಿನಲ್ಲಿ ‘ಪಡ್ಡಾಯಿ’ ಅಂದರೆ ಪಶ್ಚಿಮ ಎಂದರ್ಥ. ಕರಾವಳಿ ಭಾಗದಲ್ಲಿ ಮೀನುಗಾರರು, ಮೀನುಗಾರಿಕೆಗೆ ಹೋಗುವುದನ್ನು ‘ಪಡ್ಡಾಯಿ’ಗೆ ಹೋಗುವುದು ಎಂದೇ ಹೇಳುತ್ತಾರೆ. ಮಲ್ಪೆಯ ಪಡುಕರೆಯಲ್ಲಿ 19 ದಿನ ಶೂಟಿಂಗ್‌ ನಡೆಸಲಾಗಿತ್ತು. ಉಳಿದಂತೆ ಮಂಗಳೂರು ಹಾಗೂ ಉಡುಪಿಯಲ್ಲಿ ಚಿತ್ರೀಕರಣವಾಗಿದೆ. ಮೀನುಗಾರ ಕುಟುಂಬ ಮಾತನಾಡುವ ತುಳುವಿನ ಶೈಲಿ ಹಾಗೂ ಅವರ ಹಾವಭಾವದ ಅಧ್ಯಯನಕ್ಕಾಗಿ ಒಂದು ವಾರ ಈ ಸಿನೆಮಾದ ಎಲ್ಲ ಕಲಾವಿದರು ಮಲ್ಪೆಯ ಮೀನುಗಾರ ಕುಟುಂಬದ ಜತೆಗಿದ್ದರು. ತುಳುವಿನಲ್ಲಿ ಮೊದಲ ಬಾರಿಗೆ ಸಿಂಕ್‌ ಸೌಂಡ್‌ನ‌ಲ್ಲಿ ಈ ಸಿನೆಮಾ ಮಾಡಲಾಗಿದೆ. ಮೌಲ್ಯಯುತ ಹಾಗೂ ಸಾಮಾಜಿಕ ಕಳಕಳಿಯ ಸಿನೆಮಾ ಮಾಡಬೇಕೆಂಬ ತುಡಿತದೊಂದಿಗೆ ನಿರ್ಮಾಪಕರಾದ ಕಾರ್ಕಳದ ನಿತ್ಯಾನಂದ ಪೈ ಅವರು ಈ ಸಿನೆಮಾಕ್ಕೆ ಹೊಸ ಆಯಾಮ ಒದಗಿಸಿದ್ದಾರೆ. ಪ್ರಸ್ತುತ ಸಿನೆಮಾ ರಾಷ್ಟ್ರೀಯ ಪ್ರಶಸ್ತಿ ಗೆದ್ದಿರುವುದು ಸಂಭ್ರಮ ತಂದಿದೆ’ ಎನ್ನುತ್ತಾರೆ ನಿರ್ದೇಶಕ ಅಭಯಸಿಂಹ. 

ಅಭಯಸಿಂಹ ಅವರ ಮೊದಲ ಚಿತ್ರ ‘ಗುಬ್ಬಚ್ಚಿಗಳು’ 2008ರಲ್ಲಿ ಅತ್ಯುತ್ತಮ ಮಕ್ಕಳ ಚಿತ್ರ ರಾಷ್ಟ್ರಪ್ರಶಸ್ತಿ ಪಡೆದುಕೊಂಡಿದೆ. ಅವರ ಎರಡನೇ ಚಿತ್ರ ‘ಶಿಕಾರಿ’ (2012) ಮಲಯಾಳದ ಖ್ಯಾತ ನಟ ಮಮ್ಮುಟ್ಟಿ ಅವರನ್ನು ಕನ್ನಡಕ್ಕೆ ಕರೆತಂದು ಸುದ್ದಿ ಮಾಡಿತ್ತು. 3ನೇ ಚಿತ್ರ ಗಣೇಶ್‌ ಅಭಿನಯದ (2013) ಸಕ್ಕರೆ ಸಿನೆಮಾ. ನಾಲ್ಕನೆಯದ್ದಾಗಿ ತುಳುವಿನಲ್ಲಿ ಮೊದಲ ಬಾರಿಗೆ ‘ಪಡ್ಡಾಯಿ’ ನಿರ್ದೇಶಿಸಿದ್ದಾರೆ. 

ತುಳು ಸಿನೆಮಾ ಕ್ಷೇತ್ರಕ್ಕೆ ದೊರೆತ ಗೌರವ
ಅತ್ಯಂತ ಅಪೂರ್ವ ನೆಲೆಯಲ್ಲಿ ‘ಪಡ್ಡಾಯಿ’ ಮೂಡಿ ಬಂದಿದ್ದು, ಈಗ ರಾಷ್ಟ್ರೀಯ ಗೌರವಕ್ಕೆ ಪಾತ್ರವಾಗಿರುವುದು ನಮಗೆಲ್ಲ ಖುಷಿ ತಂದಿದೆ. ಒಟ್ಟು ತಂಡದ ನಿರ್ವಹಣೆಯ ಮೂಲಕ ಗೆಲುವು ದೊರೆತಿದೆ. ಇದು ತುಳು ಸಿನೆಮಾ ಕ್ಷೇತ್ರಕ್ಕೆ ದೊರೆತ ಗೌರವವಾಗಿದೆ. 
– ನಿತ್ಯಾನಂದ ಪೈ, ‘ಪಡ್ಡಾಯಿ’ ನಿರ್ಮಾಪಕರು

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.