CONNECT WITH US  

ಡಾ| ಬಿ.ಆರ್‌. ಅಂಬೇಡ್ಕರ್‌ ಜಯಂತಿ ಆಚರಣೆ

ಪುರಭವನದ ಬಳಿ ಪ್ರತಿಮೆಗೆ ಮಾಲಾರ್ಪಣೆ

ಅಂಬೇಡ್ಕರ್‌ ಪ್ರತಿಮೆಗೆ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಮಾಲಾರ್ಪಣೆ ಮಾಡಿದರು.

ಮಹಾನಗರ: ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತದ ವತಿಯಿಂದ ಸಂವಿಧಾನಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಜಯಂತಿಯನ್ನು ಶನಿವಾರ ನಗರದ ಪುರಭವನ ಮುಂಭಾಗದ ಡಾ| ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.

ದ.ಕ. ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌, ಜಿ.ಪಂ. ಸಿಇಒ ಡಾ| ಎಂ.ಆರ್‌. ರವಿ, ಪೊಲೀಸ್‌ ಕಮಿಷನರ್‌ ಟಿ.ಆರ್‌.ಸುರೇಶ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ರವಿಕಾಂತೇಗೌಡ, ಸಹಾಯಕ ಕಮಿಷನರ್‌ ಮಹೇಶ್‌ ಕರ್ಜಗಿ, ಮನಪಾ ಕಮಿಷನರ್‌ ಮೊಹಮ್ಮದ್‌ ನಝೀರ್‌, ಜಂಟಿ ಆಯುಕ್ತ ಗೋಕುಲ್‌ದಾಸ್‌ ನಾಯಕ್‌, ವಾರ್ತಾಧಿಕಾರಿ ಖಾದರ್‌ ಷಾ, ತಹಶೀಲ್ದಾರ್‌ ಗುರುಪ್ರಸಾದ್‌, ದಲಿತ ಸಂಘಟನೆಗಳ ಮುಖಂಡರು, ಮೊದಲಾದವರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣಾಧಿಕಾರಿ ಯೋಗೀಶ್‌ ಸ್ವಾಗತಿಸಿದರು.

Trending videos

Back to Top