ಸುಳ್ಯ ವಿಧಾನಸಭಾ ಕ್ಷೇತ್ರ: ಅಭ್ಯರ್ಥಿಗಳೆಲ್ಲರಲ್ಲೂ ಗೆಲುವಿನ ಹಂಬಲ


Team Udayavani, May 8, 2018, 6:25 AM IST

Sulila.jpg

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಮೀಸಲು ಕ್ಷೇತ್ರ ಸುಳ್ಯದಲ್ಲಿ ಪ್ರಮುಖ ಎದುರಾಳಿ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ಮಧ್ಯೆ ಜಿದ್ದಾಜಿದ್ದಿನ ಹಣಾಹಣಿ ಇದೆ. ಎರಡು ಪಕ್ಷಗಳೂ ಗೆದ್ದೇ ಗೆಲ್ಲುವ ಹುಮ್ಮಸ್ಸಿನಲ್ಲಿ ಕ್ಷೇತ್ರ ಪರ್ಯಟನೆಗೈಯ್ಯುತ್ತಿವೆ!

ಸುಳ್ಯ, ಕಡಬ, ಬೆಳ್ತಂಗಡಿ, ಪುತ್ತೂರು ತಾಲೂಕಿನ ಕೆಲ ಗ್ರಾಮಗಳಲ್ಲಿ ಆವರಿಸಿಕೊಂಡಿರುವ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 2013ರ ವಿಧಾನಸಭಾ ಚುನಾವಣೆಯಲ್ಲಿ ಉಭಯ ಪಕ್ಷಗಳ ನಡುವೆ ನಿರೀಕ್ಷಿಸಲಾಗದ ರೀತಿಯ ಪೈಪೋಟಿ ಏರ್ಪಟ್ಟಿತ್ತು. 

25 ವರ್ಷಗಳಿಂದ ಬಿಜೆಪಿ ಭದ್ರಕೋಟೆಯೆಂದು ಪರಿಗಣಿತವಾಗಿದ್ದ ಇಲ್ಲಿ ಕಾಂಗ್ರೆಸ್‌ ಪಕ್ಷವು ಬಿಜೆಪಿಗೆ ಬೆವರಿಳಿಸುವಷ್ಟು ಸ್ಪರ್ಧೆ ಒಡ್ಡಿತ್ತು. ಅಂತಿಮವಾಗಿ 1,373 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಎಸ್‌. ಅಂಗಾರ ಅವರು ಗೆಲುವು ಪಡೆದಿದ್ದರು.

ಅನಂತರ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸಿಕ್ಕ ಅಭೂತಪೂರ್ವ ಬೆಂಬಲ ವಿಧಾನಸಭಾ ಚುನಾವಣೆಯಲ್ಲಿ ಪುನರಾವರ್ತನೆ ಆಗಬಹುದು ಎಂಬ ನಿರೀಕ್ಷೆಯನ್ನು ಪಕ್ಷ ಹೊಂದಿದೆ. ಕಳೆದ ಮೂರು ಚುನಾವಣೆಗಳಲ್ಲಿ ಸೋಲಿನ ಅಂತರ ಕುಸಿತ ಕಂಡಿದ್ದು, ಜನರು ಬದಲಾವಣೆ ಬಯಸಿರುವ ಕಾರಣ ಈ ಬಾರಿ ಗೆಲುವು ನಮ್ಮದೇ ಎಂಬ ಆತ್ಮವಿಶ್ವಾಸವನ್ನು ಕಾಂಗ್ರೆಸ್‌ ಪಕ್ಷ ಪ್ರದರ್ಶಿಸಿದೆ. 

ಆರು ಅಭ್ಯರ್ಥಿಗಳು
ಈ ಬಾರಿ ಅಖಾಡದಲ್ಲಿ ಮೂರು ರಾಷ್ಟ್ರೀಯ ಪಕ್ಷಗಳ ಹುರಿಯಾಳುಗಳು, ಮೂವರು ಪಕ್ಷೇತರ ಅಭ್ಯರ್ಥಿಗಳು ಇದ್ದಾರೆ. ಬಿಜೆಪಿಯಿಂದ ಎಸ್‌. ಅಂಗಾರ, ಕಾಂಗ್ರೆಸ್‌ನಿಂದ ಡಾ| ರಘು, ಬಿಎಸ್‌ಪಿಯಿಂದ ರಘು ಧರ್ಮಸೇನ, ಪಕ್ಷೇತರ ಅಭ್ಯರ್ಥಿಗಳಾದ ಸಂಜಯ್‌, ಸುಂದರ, ಚಂದ್ರಶೇಖರ ಪಳ್ಳತ್ತಡ್ಕ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ, ಕಾಂಗ್ರೆಸ್‌ ಈಗಾಗಲೇ ಎರಡು ಸುತ್ತಿನ ಪ್ರಚಾರ ಮುಗಿಸಿವೆ. ರಾಷ್ಟ್ರ ಮಟ್ಟದಲ್ಲಿ ಬಿಎಸ್‌ಪಿ-ಜೆಡಿಎಸ್‌ ಮೈತ್ರಿ ಏರ್ಪಟ್ಟು, ಸುಳ್ಯದಲ್ಲಿ ಬಿಎಸ್‌ಪಿ ಅಭ್ಯರ್ಥಿಗೆ ಅವಕಾಶ ಸಿಕ್ಕಿತ್ತು. ಆದರೂ ಬಿಎಸ್‌ಪಿ ಜತೆಗೆ ಜೆಡಿಎಸ್‌ ನಾಯಕರು ಜತೆಯಾಗಿ ಕಾಣಿಸಿಕೊಂಡಿರಲಿಲ್ಲ.ಕೆಲ ದಿನಗಳ ಹಿಂದೆ ಉಭಯ ಪಕ್ಷದ ನಾಯಕರು ಜಂಟಿ ಸಭೆ ನಡೆಸಿ, ನಾವು ಒಟ್ಟಾಗಿ ಚುನಾವಣೆಗೆ ಎದುರಿಸುವುದಾಗಿ ಘೋಷಿಸಿದ್ದು, ಪ್ರಚಾರಕ್ಕೆ ಧುಮುಕುವ ಮಾಹಿತಿ ನೀಡಿದ್ದಾರೆ.ಮೀಸಲಾತಿ ಮುಕ್ತಿ ಹೋರಾಟ ಸಮಿತಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸಂಜಯ್‌ ಅವರು ಪ್ರಚಾರ ಆರಂಭಿಸಿದ್ದಾರೆ. ಧ್ವನಿವರ್ಧಕದ ಮೂಲಕ ಕ್ಷೇತ್ರದ ಸಮಸ್ಯೆ ಮುಂದಿಟ್ಟುಕೊಂಡು ಅಲ್ಲಲ್ಲಿ ಕಾರ್ನರ್‌ ಸಭೆ ಆಯೋಜಿಸುತ್ತಿದ್ದಾರೆ. ಉಳಿದ ಪಕ್ಷೇತರ ಅಭ್ಯರ್ಥಿಗಳಿಬ್ಬರು ಪ್ರಚಾರ ಕಣದಲ್ಲಿ ಕಾಣಿಸಿಕೊಂಡಿಲ್ಲ.

ಲೆಕ್ಕಚಾರ ಆರಂಭ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ 8,000ಕ್ಕೂ ಅಧಿಕ ಸಾವಿರ ಮತ ಪಡೆದಿದ್ದ ನಂದರಾಜ ಸಂಕೇಶ, ಪಕ್ಷೇತರರಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕ ಕೆ. ಕುಶಲ, ಕೆಜೆಪಿ ಅಭ್ಯರ್ಥಿ ಆಗಿದ್ದ ಚಂದ್ರಾವತಿ ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಹಾಗೂ ಅಲ್ಪಸಂಖ್ಯಾಕ ಸಮುದಾಯದ ಮತಗಳನ್ನು ಸೆಳೆಯುತ್ತಿದ್ದ ಎಸ್‌ಡಿಪಿಐ ಈ ಬಾರಿ ಕಣಕ್ಕಿಳಿಯದಿರುವುದು ಕಾಂಗ್ರೆಸ್‌ಗೆ ಧನಾತ್ಮಕ ಅಂಶ.

ಕ್ಷೇತ್ರದಲ್ಲಿ 22,500 ಹೊಸ ಮತದಾರರು ಸೇರ್ಪಡೆಗೊಂಡಿರುವುದರಿಂದ ಅವರ ಮತಗಳು ತಮಗೆ ಲಭಿಸಬಹುದು ಎಂಬ ನಿರೀಕ್ಷೆಯಲ್ಲಿ ಎಲ್ಲ ಪಕ್ಷಗಳೂ ಇವೆ. 

ಅಭಿವೃದ್ಧಿ ವಿಷಯ ಪ್ರಸ್ತಾವ
ಬಿಜೆಪಿ, ಕಾಂಗ್ರೆಸ್‌, ಬಿಎಸ್ಪಿ, ಪಕ್ಷೇತರ ಅಭ್ಯರ್ಥಿಗಳು ಅಭಿವೃದ್ಧಿ ವಿಚಾರವನ್ನು ಮುಖ್ಯವಾಗಿಟ್ಟುಕೊಂಡು ಮತದಾರರ ಮನ ಸೆಳೆಯುವ ತಂತ್ರಗಾರಿಕೆ ನಡೆಸುತ್ತಿವೆ. ಬಿಜೆಪಿ ಶಾಸಕರ ಸಾಧನೆ, ಯಡಿಯೂರಪ್ಪ, ಮೋದಿ ಸರಕಾರದ ಕೊಡುಗೆಗಳು, ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂಬ ಆರೋಪಗಳೊಂದಿಗೆ ಮನೆ-ಮನೆ ಭೇಟಿ ನಿರತವಾಗಿದೆ.
 
ಇತ್ತ ಕಾಂಗ್ರೆಸ್‌ ಪಕ್ಷವು ಕಳೆದ ಐದು ಅವಧಿಯಲ್ಲಿ ಬಿಜೆಪಿ ಶಾಸಕರ ವೈಫಲ್ಯ, ಕ್ಷೇತ್ರದ ಮುಖ್ಯ ಸಮಸ್ಯೆಗಳಾದ ವಿದ್ಯುತ್‌, ರಸ್ತೆ ಮೊದಲಾದ ವಿಷಯ ಹಾಗೂ ರಾಜ್ಯದ ಸಿದ್ದರಾಮಯ್ಯ ಸರಕಾರದ ಜನಪರ ಕೊಡುಗೆಗಳನ್ನು ಉಲ್ಲೇಖೀಸುತ್ತಾ ಮತದಾರರ ಮನ ಗೆಲ್ಲಲು ಯತ್ನಿಸುತ್ತಿದೆ.

ರಾಷ್ಟ್ರ ನಾಯಕರಿಂದ ಪ್ರಚಾರ
ರಾಷ್ಟ್ರಮಟ್ಟದ ನಾಯಕರು ಈ ಕ್ಷೇತ್ರದಲ್ಲಿ ಪ್ರಚಾರ ನಡೆಸಿರುವುದು, ಜಿಲ್ಲೆಯ ಮಟ್ಟಿಗೆ ಗಮನ ಸೆಳೆದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ರಾಜ್ಯಾಧ್ಯಕ್ಷ ಯಡಿಯೂರಪ್ಪ ಮೊದಲಾದವರು ಪ್ರಚಾರ ನಡೆಸಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಆಗಮನಕ್ಕೂ ತಯಾರಿ ನಡೆದಿದೆ. ಕಾಂಗ್ರೆಸ್‌ ಪಕ್ಷದ ಪರವಾಗಿ ಪುದುಚೇರಿ ಮುಖ್ಯಮಂತ್ರಿ ನಾರಾಯಣ ಸ್ವಾಮಿ, ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮೊದಲಾದವರು ಪ್ರಚಾರ ಕೈಗೊಂಡಿದ್ದರು.

ಐದು ಅವಧಿಯಲ್ಲಿ ಕ್ಷೇತ್ರದ ಪ್ರಮುಖ ಮೂಲ ಸೌಕರ್ಯಗಳ ಈಡೇರಿಕೆಯಲ್ಲಿ ಬಿಜೆಪಿ ಶಾಸಕರು ಪೂರ್ಣ ವೈಫಲ್ಯ ಕಂಡಿದ್ದಾರೆ. ಕಳೆದ ಬಾರಿ ಸೋತಿದ್ದರೂ, ಕ್ಷೇತ್ರದ ಜನರ ಬೇಡಿಕೆಗೆ ನನ್ನಿಂದಾದಷ್ಟು ಸ್ಪಂದನೆ ನೀಡಿದ್ದೇನೆ. ಕ್ಷೇತ್ರದ ಮತದಾರರು ಈ ಬಾರಿ ಬದಲಾವಣೆ ಬಯಸಿದ್ದು, ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಲಿದ್ದಾರೆ. ಈ ಬಾರಿ ಗೆಲುವು ನಮ್ಮದೇ..
 – ಡಾ| ರಘು, ಕಾಂಗ್ರೆಸ್‌ ಅಭ್ಯರ್ಥಿ

ನಾನು ಶಾಸಕನಾಗಿದ್ದ ಐದು ಅವಧಿಗಳಲ್ಲಿ ಕ್ಷೇತ್ರದಲ್ಲಾದ ಅಭಿವೃದ್ಧಿ ಕೆಲಸಗಳನ್ನು ಜನತೆ ಗಮನಿಸಿದ್ದಾರೆ. ಬಿ.ಎಸ್‌. ಯಡಿಯೂರಪ್ಪ  ಮತ್ತು  ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರದ ಸಾಧನೆ ಗಳು ಬಿಜೆಪಿ ಗೆಲುವಿಗೆ ಪೂರಕ. ಇದು ಅಭಿವೃದ್ಧಿಗೆ ಮತದಾರರೆಲ್ಲ ಈ ಬಾರಿ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತ.
– ಎಸ್‌. ಅಂಗಾರ, ಬಿಜೆಪಿ ಅಭ್ಯರ್ಥಿ

ಕ್ಷೇತ್ರದಲ್ಲಿ ಹಲವು ಮೂಲಭೂತ ಸಮಸ್ಯೆಗಳು ಇವೆ. ಕ್ಷೇತ್ರವನ್ನು ಬಹುಕಾಲ ಪ್ರತಿನಿಧಿಸಿದ ಬಿಜೆಪಿ ಮತ್ತು ಕಾಂಗ್ರೆಸ್‌ ಇಲ್ಲಿನ ಬೇಡಿಕೆಗಳಿಗೆ ಸ್ಪಂದಿಸಿಲ್ಲ. ಯುವಜನತೆಗೆ ಉದ್ಯೋಗ ಕಲ್ಪಿಸುವ ಯಾವುದೇ ಅವಕಾಶಗಳು ಇಲ್ಲಿಲ್ಲ. ಈ ಎಲ್ಲಾ ವೈಫಲ್ಯಗಳಿಂದ ಬೇಸೆತ್ತಿರುವ ಜನರು ಕಾಂಗ್ರೆಸ್‌, ಬಿಜೆಪಿಯನ್ನು ತಿರಸ್ಕರಿಸಿ, ಬಿಎಸ್‌ಪಿಗೆ ಅವಕಾಶ ನೀಡುವ ವಾತಾವರಣ ಕ್ಷೇತ್ರದಲ್ಲಿ ಇದೆ.
– ರಘು ಧರ್ಮಸೇನಾ, ಬಿಎಸ್‌ಪಿ ಅಭ್ಯರ್ಥಿ

ಒಟ್ಟು ಮತದಾರರು: 1,98,644
ಪುರುಷರು: 98,896
ಮಹಿಳೆಯರು: 99,748

– ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.