CONNECT WITH US  

ವಿಮಾನ ನಿಲ್ದಾಣದಲ್ಲಿ  ಸಿಎಂಗೆ ಸ್ವಾಗತ 

ವಿಮಾನ ನಿಲ್ದಾಣದಲ್ಲಿ ಸಿಎಂ ಕುಮಾರಸ್ವಾಮಿ ಪೊಲೀಸರಿಂದ ಗೌರವ ಸ್ವೀಕರಿಸಿದರು.

ಮಹಾನಗರ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸಕ್ಕಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. ಬಳಿಕ ವಿಮಾನ ನಿಲ್ದಾಣದಲ್ಲಿ ಪೊಲೀಸರಿಂದ ಗೌರವ ಸ್ವೀಕರಿಸಿದ ಅವರು, ಮಾಧ್ಯಮ ಜತೆ ಮಾತನಾಡಲು ನಿರಾಕರಿಸಿದರು.

ಇದೇ ವೇಳೆ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌, ಜಿಲ್ಲಾ ಜೆಡಿಎಸ್‌ ವತಿಯಿಂದ ಮಾಜಿ ಸಚಿವ ಅಮರನಾಥ್‌ ಶೆಟ್ಟಿ, ಜೆಡಿಎಸ್‌ ಜಿಲ್ಲಾ ಅಧ್ಯಕ್ಷ ಮಹಮ್ಮದ್‌ ಕುಂಞಿ, ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ ಜಿಲ್ಲಾ ವಕ್ತಾರ ಸುಶೀಲ್‌ ನೊರೊನ್ಹ, ಮಂಗಳೂರು ದಕ್ಷಿಣ ಕ್ಷೇತ್ರದ ವಸಂತ ಪೂಜಾರಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್‌ ಚಂದ್ರ ಜೈನ್‌, ಯುವ ಜನತಾ ದಳದ ಜಿಲ್ಲಾಧ್ಯಕ್ಷ ಅಕ್ಷಿತ್‌ ಸುವರ್ಣ, ರಮೇಶ್‌ ಎಸ್‌., ಹೈದರ್‌ ಪರ್ತಿಪಾಡಿ, ಮೇಯರ್‌ ಭಾಸ್ಕರ್‌ ಕೆ., ಉಪ ಮೇಯರ್‌ ಮಹಮ್ಮದ್‌, ವಿಧಾನ ಪರಿಷತ್‌ ಸದಸ್ಯರಾದ ಹರೀಶ್‌ ಕುಮಾರ್‌, ಐವನ್‌ ಡಿ'ಸೋಜಾ, ಭೋಜೇಗೌಡ, ಕಾರ್ಪೊರೇಟರ್‌ ಆಶಾ ಡಿ'ಸಿಲ್ವ ಮೊದಲಾದವರು ಉಪಸ್ಥಿತರಿದ್ದರು.


Trending videos

Back to Top