ಪೊಲೀಸ್ ಆಯುಕ್ತರಿಂದ ಕದ್ರಿ ಟ್ರಾಫಿಕ್ ಸರ್ಕಲ್ ಉದ್ಘಾಟನೆ
Team Udayavani, Sep 9, 2018, 12:04 PM IST
ಕದ್ರಿ : ಬಂಟ್ಸ್ ಹಾಸ್ಟೆಲ್ ರಸ್ತೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ತೇಜಸ್ವಿನಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ| ಎಂ. ಶಾಂತಾರಾಮ್ ಶೆಟ್ಟಿ ಅವರಿಂದ ನಿರ್ಮಾಣಗೊಂಡ ಕದ್ರಿ ಟ್ರಾಫಿಕ್ ಸರ್ಕಲ್ ನ ಉದ್ಘಾಟನ ಸಮಾರಂಭ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಉದ್ಘಾಟಿಸಿದರು.
ಮೇಯರ್ ಭಾಸ್ಕರ್ ಕೆ., ಪಾಲಿಕೆ ಮುಖ್ಯ ಸಚೇತಕ ಶಶಿಧರ್ ಹೆಗ್ಡೆ, ಕಾರ್ಪೊರೇಟರ್ ಅಶೋಕ್ ಕುಮಾರ್ ಡಿ.ಕೆ. ವಿಪಕ್ಷದ ನಾಯಕ ಪ್ರೇಮಾನಂದ ಶೆಟ್ಟಿ, ಸ್ಥಾಯೀ ಸಮಿತಿ ಅಧ್ಯಕ್ಷ ಪ್ರವೀಣ್ ಚಂದ್ರ ಆಳ್ವ ಮುಖ್ಯ ಅತಿಥಿಗಳಾಗಿದ್ದರು.
ಸರ್ಕಲ್ನ ವಿನ್ಯಾಸಗಾರ ಯಶವಂತ ರೈ, ತೇಜಸ್ವಿನಿ ಆಸ್ಪತ್ರೆಯ ಆಡಳಿತ ಮಂಡಳಿ ನಿರ್ದೇಶಕ ಡಾ| ಎಂ. ಅಜಿತ್ ಕುಮಾರ್, ವಸಂತಿ ಎಸ್. ಶೆಟ್ಟಿ, ಡಾ| ಲತಿಕಾ ಶೆಟ್ಟಿ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು. ಈ ಸರ್ಕಲ್ನ ನಿರ್ಮಾಣ ಮತ್ತು ನಿರ್ವಹಣೆಯ ಹೊಣೆಯನ್ನು ತೇಜಸ್ವಿನಿ ಆಸ್ಪತ್ರೆಯು ವಹಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ