ಮಂಗಳೂರು: ಬೃಹತ್ ಪ್ರಮಾಣದ ಗಾಂಜಾ ಪತ್ತೆ; ಇಬ್ಬರು ಆರೋಪಿಗಳು ಸೆರೆ


Team Udayavani, Nov 18, 2022, 1:44 PM IST

11

ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರ, ಬೆಂಗಳೂರು ಹಾಗೂ ಕೇರಳ ರಾಜ್ಯಕ್ಕೆ ಬೃಹತ್‌ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ 132 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಟ್ವಾಳದ ರಮೀಝ್ ರಾಝ್ ಮತ್ತು ಮಂಜೇಶ್ವರದ ಅಬ್ದುಲ್ ಖಾದರ್ ಹ್ಯಾರಿಸ್ ಬಂಧಿತರು.

ನ.17 ರಂದು ಇಬ್ಬರು ಕೇರಳ ನೋಂದಣಿಯ ಎಸ್‌ಯುವಿ ಕಾರಿನಲ್ಲಿ ವಿಶಾಖಪಟ್ಟಣದಿಂದ ಗಾಂಜಾವನ್ನು ತಂದಿದ್ದರು ಎಂದು ತಿಳಿದು ಬಂದಿದೆ.

ಈ ಬಗ್ಗೆ ಖಚಿತ ಮಾಹಿತಿ ದೊರೆತಿದ್ದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್‌ಐ ರಾಜೇಂದ್ರ ಬಿ ನೇತೃತ್ವದ ಸಿಸಿಬಿ ಪೊಲೀಸರ ತಂಡ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಡಿಪುವಿನ ಕುರ್ನಾಡು ಗ್ರಾಮದ ಕಾಯರ್‌ಗೋಳಿ ಎಂಬಲ್ಲಿ ಆರೋಪಿಗಳ ಕಾರು ಪತ್ತೆ ಹಚ್ಚಿ ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಗಾಂಜಾ ಇರುವುದು ಪತ್ತೆಯಾಗಿದೆ.

ಆರೋಪಿಗಳು ಬಳಕೆಗೆ ಸಿದ್ದವಾಗಿದ್ದ ಗಾಂಜಾವನ್ನು ಮಾದಕವಸ್ತು ವ್ಯಾಪಾರಿಗಳಿಗೆ ವಿತರಿಸಲು ಕೊಂಡೊಯ್ಯುತ್ತಿದ್ದರು. ಕೇರಳ, ಮಣಿಪಾಲ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಕೆಲವು ಭಾಗಗಳಿಗೆ ವ್ಯಾಪಾರಿಗಳಿಗೆ ನೀಡಲೆಂದು ಸಾಗಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ರಮೀಝ್ ರಾಝ್ ಎಂಬಾತನ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಮಾದಕ ದ್ರವ್ಯ ಸೇವನೆಗೆ ಸಂಬಂಧಪಟ್ಟಂತೆ ಒಂದು ಪ್ರಕರಣ, ಗಾಂಜಾ ಮಾರಾಟ ಮಾಡಿದ ಪ್ರಕರಣ, ಹಲ್ಲೆ ಪ್ರಕರಣ, ಹೀಗೆ ಒಟ್ಟು 3 ಪ್ರಕರಣ, ಅದಲ್ಲದೇ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಂದು ಪ್ರಕರಣ ಹಾಗೂ ಕೊಲೆ ಯತ್ನ ಪ್ರಕರಣ ಮತ್ತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟದ ಒಂದು ಪ್ರಕರಣ ಹೀಗೆ ಒಟ್ಟು 6 ಪ್ರಕರಣಗಳು ದಾಖಲಾಗಿದೆ.

ಮತ್ತೊಬ್ಬ ಆರೋಪಿ ಅಬ್ದುಲ್ ಖಾದರ್ ಹ್ಯಾರಿಸ್ ಎಂಬಾತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ ಹಾಗೂ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣಗಳು ದಾಖಲಾಗಿರುತ್ತದೆ.

ಆರೋಪಿಗಳಿಬ್ಬರೂ ಕರ್ನಾಟಕ- ಕೇರಳ ರಾಜ್ಯದ ಗಡಿಭಾಗದವರಾಗಿದ್ದು, ಕರ್ನಾಟಕ, ಕೇರಳ, ಬೆಂಗಳೂರಿನ ಸಾರ್ವಜನಿಕರಿಗೆ ಗಾಂಜಾವನ್ನು ಮಾರಾಟ ಮಾಡಿ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಬಾಡಿಗೆಗೆ ಕಾರನ್ನು ಪಡೆದುಕೊಂಡು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾವನ್ನು ಖರೀದಿಸಿ ಬೆಂಗಳೂರು, ಮಂಗಳೂರು, ಕೇರಳಕ್ಕೆ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಈ ಬೃಹತ್ ಗಾಂಜಾ ಮಾರಾಟ ಹಾಗೂ ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಈ ಬಗ್ಗೆ ಸನ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್‌ ಕಸ್ಟಡಿಗೆ ಪಡೆಯಲಾಗುತ್ತದೆ.

ಈ ಕಾರ್ಯಚರಣೆಯಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್‌, ಪಿಎಸ್‌ಐ ರಾಜೇಂದ್ರ ಬಿ, ಎಎಸ್‌ಐ ಯವರಾದ ಶಶಿಧರ ಶೆಟ್ಟಿ, ಮೋಹನ್ ಕೆ.ವಿ, ಹರೀಶ ಪಿ ಹಾಗೂ ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.